ಬೆಂಗಳೂರು: ದೇಶಾದ್ಯಂತ ಮೋದಿ, ಮೋದಿ ಎಂಬ ಘೋಷಣೆ ಮೊಳಗುತ್ತಿದೆ. ಹೀಗಾಗಿ ದೇಶದಲ್ಲಿ ಮತ್ತೊಮ್ಮೆ ಬಿಜೆಪಿ ಅಧಿಕಾರದ ಚುಕ್ಕಾಣಿ ಹಿಡಿಯಲಿದೆ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ವ್ಯಕ್ತಪಡಿಸಿದ್ದಾರೆ.
- ಗಮನ ಬೇರೆಡೆ ಸೆಳೆದು ಮತದಾರರ ಹಕ್ಕುಗಳನ್ನು ಕಸಿದುಕೊಳ್ಳುವ ಪ್ರಯತ್ನ: ಪ್ರಕಾಶ್ ರಾಜ್
- ಪ್ರಜಾಪ್ರಭುತ್ವದಲ್ಲಿ ಪ್ರಧಾನಿಯೂ ವ್ಯಂಗ್ಯಕ್ಕೆ ಅತೀತರಲ್ಲ
- ಹಾಲಿನ ದರ ಏರಿಕೆ ಕುರಿತು ಸಂಪುಟದಲ್ಲಿ ಚರ್ಚಿಸಿ ತೀರ್ಮಾನ: ಡಿ ಕೆ ಶಿವಕುಮಾರ್
- ಒಂದು ತಿಂಗಳ ಸಂಬಳವನ್ನು ಬರ ಪರಿಹಾರ ನಿಧಿಗೆ ನೀಡಿ
- ಕಾಮಗಾರಿ ಬಿಲ್ ಪಾವತಿ ವ್ಯವಸ್ಥೆಯಲ್ಲಿ ಸಮಗ್ರ ಸುಧಾರಣೆ : ಕೃಷ್ಣ ಬೈರೇಗೌಡ
ಬಿಜೆಪಿ ಶಕ್ತಿ ಕೇಂದ್ರದ ಪ್ರಮುಖರ ಸಭೆಯಲ್ಲಿ ಮಾತನಾಡಿದ ಅವರು, ಯುಪಿಎ ಅವಧಿಯಲ್ಲಿ ಭಾರತವನ್ನು ಭ್ರಷ್ಟಾಚಾರದ ಕೂಪಕ್ಕೆ ತಳ್ಳಿದ ಕಾಂಗ್ರೆಸ್ ಇಂದು ಭ್ರಷ್ಟರ ಕೂಟ ಕಟ್ಟಿಕೊಂಡು ಮೋದಿ ವಿರುದ್ಧ ಅಪಪ್ರಚಾರ ನಡೆಸುತ್ತಿದೆ ಎಂದು ಆರೋಪಿಸಿದರು.
ಪ್ರಸ್ತುತ ಲೋಕಸಭಾ ಚುನಾವಣೆಯಲ್ಲಿ ಈಗ ಮೋದಿ ಪರಿವಾರ ಮತ್ತು ಭ್ರಷ್ಟರ ಕೂಟದ ನಡುವೆ ಹೋರಾಟ ನಡೆಯುತ್ತಿದೆ. ಆದರೆ, ದೇಶದ ಮತದಾರರು ಪಾರದರ್ಶಕ ಆಡಳಿತ ನೀಡಿರುವ ಮೋದಿ ಅವರ ಪರ ನಿಂತಿದ್ದಾರೆ ಎಂದರು.
ದೇಶವನ್ನು ಭ್ರಷ್ಟಾಚಾರದ ಕೂಪವನ್ನಾಗಿ ಮಾಡಿದ ಕಾಂಗ್ರೆಸ್ ನೇತೃತ್ವದ ಯುಪಿಎ ಆಡಳಿತವನ್ನು ಜನ ಇನ್ನೂ ಮರೆತಿಲ್ಲ. 2ಜಿ ಹಗರಣ, ಅಗಸ್ಟಾ ವೆಸ್ಟ್ ಲ್ಯಾಂಡ್ ಹೆಲಿಕಾಪ್ಟರ್ ಹಗರಣ, ಕಲ್ಲಿದ್ದಲು ಹಗರಣ, ಕಾಮನ್ ವೆಲ್ತ್ ಹಗರಣ ಸೇರಿದಂತೆ ಸಾಲು ಸಾಲು ಭ್ರಷ್ಟಾಚಾರ ನಡೆಸಿದ್ದವರು ಈಗ ಭ್ರಷ್ಟಾಚಾರದ ಬಗ್ಗೆ ಮಾತನಾಡುತ್ತಿದ್ದಾರೆ ಎಂದರು.
ಭಾರತದ ಆರ್ಥಿಕತೆಯನ್ನು ಜಗತ್ತಿನಲ್ಲಿ ಐದನೆ ಸ್ಥಾನಕ್ಕೆ ತಂದ ಕೀರ್ತಿ ಮೋದಿ ಅವರಿಗೆ ಸಲ್ಲುತ್ತದೆ. ಈ ಹಿಂದೆ ಲಕ್ಷಾಂತರ ಕೋಟಿ ಲೂಟಿ ಹೊಡೆದಿದ್ದರೋ ಅವರನ್ನು ಜೈಲಿಗೆ ಕಳುಹಿಸುತ್ತೇವೆ ಎಂದು ನಾವು ಹೇಳಿದ್ದೆವು. ಅದನ್ನು ಇಂದು ನೀವು ನೋಡುತ್ತಿದ್ದೀರಿ ಎಂದರು.
ಮೋದಿ ವಿರುದ್ಧ ಅಪಪ್ರಚಾರಕ್ಕಾಗಿ ಕೆಲವೊಂದು ವ್ಯವಸ್ಥಿತ ತಂತ್ರಗಾರಿಕೆ ನಡೆಸುತ್ತಿದ್ದಾರೆ. ಆದರೆ, ಇದು ಜನರ ಮುಂದೆ ನಡೆಯುವುದಿಲ್ಲ. ಮೂರನೆ ಬಾರಿಗೆ ಮೋದಿ ಪ್ರಧಾನಿಯಾಗುವುದನ್ನು ಯಾರೂ ತಪ್ಪಿಸಲು ಸಾಧ್ಯವಿಲ್ಲ ಎಂದರು.
ಕಾಂಗ್ರೆಸ್ ನವರು ರಾಮಮಂದಿರ ಉದ್ಘಾಟನೆಯನ್ನು ಬಹಿಷ್ಕರಿಸಿದರು. ತುಷ್ಟೀಕರಣ ರಾಜಕಾರಣ ಮಾಡಿದರು. ಆದರೆ ನಾವು ನೂರಾರು ವರ್ಷಗಳ ಕನಸನ್ನು ಸಾಕಾರಗೊಳಿಸಿದ್ದೇವೆ. ಭವ್ಯ ರಾಮಮಂದಿರ ಕಂಗೊಳಿಸುತ್ತಿದೆ. ಪ್ರತಿಯೊಬ್ಬರೂ ಮನೆಮನೆಗೆ ತೆರಳಿ ನಮ್ಮ ಬಿಜೆಪಿಯ ಮೋದಿ ಗ್ಯಾರಂಟಿಗಳು ಮತ್ತು ದೇಶ ಒಗ್ಗೂಡಿಸುವ, ಸುಭದ್ರಗೊಳಿಸುವ ನಿಟ್ಟಿನಲ್ಲಿ ತಿಳಿಸಬೇಕು. ಕರ್ನಾಟಕದ 28 ಕ್ಷೇತ್ರಗಳನ್ನು ಗೆಲ್ಲಲು ನೀವೆಲ್ಲ ಸಂಕಲ್ಪ ತೊಡಬೇಕು ಎಂದು ಕರೆ ನೀಡಿದರು.




