ಬೆಂಗಳೂರು: ಅಸಹಜ ಸಾವುಗಳ ಆರೋಪದ ಮೂಲಕ ಶ್ರೀ ಕ್ಷೇತ್ರ ಧರ್ಮಸ್ಥಳದ ಪಾವಿತ್ರ್ಯಕ್ಕೆ ಧಕ್ಕೆ ತರುವ ಪ್ರಯತ್ನ ನಡೆದಿದೆ. ಜೊತೆಗೆ ಹಿಂದೂ ಧರ್ಮಕ್ಕೆ ಅಪಚಾರವೆಸಗಲು ದೊಡ್ಡ ಪ್ರಮಾಣದ ಪಿತೂರಿ ನಡೆದಿದ್ದು ಈ ಬಗ್ಗೆ ರಾಷ್ಟ್ರೀಯ ತನಿಖಾ ಆಯೋಗದ ಮೂಲಕ ತನಿಖೆ ನಡೆಸಬೇಕು ಎಂದು ಬಿಜೆಪಿ ಆಗ್ರಹಿಸಿದೆ.
- ಜ್ಞಾನೇಶ್ ಕುಮಾರ್ ಅವರನ್ನು ತಕ್ಷಣವೇ ಪದಚ್ಯುತಗೊಳಿಸಿ: ಸಿದ್ದರಾಮಯ್ಯ
- ಸತತ 5 ದಿನ ಬ್ಯಾಂಕ್ಗಳಿಗೆ ಬೀಗ!: ಏನಿರುತ್ತದೆ, ಏನಿಲ್ಲ? ಕಂಪ್ಲೀಟ್ ಡೀಟೈಲ್ಸ್!
- 814 ಉಪನ್ಯಾಸಕರ ನೇಮಕಾತಿಯಲ್ಲಿ ಉರ್ದುಗೆ ಸ್ಥಾನ ಎಲ್ಲಿದೆ?
- ಸಾಲ ಮನ್ನಾ ಮಾಡಿ ರೈತರ ಹಿತ ಕಾಪಾಡಿದ್ದ ಡಾ.ಮನಮೋಹನ್ ಸಿಂಗ್
- ರಾಜ್ಯದ ಅಭಿವೃದ್ಧಿಗೆ ಆರ್.ಅಶೋಕ್ ಅಡ್ಡಗಾಲು: ಕೆಪಿಸಿಸಿ
ಸುದ್ದಿಗಾರರೊಂದಿಗೆ ಮಾತನಾಡಿದ ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ, ಧರ್ಮಸ್ಥಳದ ವಿರುದ್ಧ ಮಾಡಲಾದ ಆರೋಪಗಳಿಂದ ಜನರ ಮನಸ್ಸಿನಲ್ಲಿ ಗೊಂದಲ ಉಂಟಾಗಿದೆ. ಇದನ್ನು ದೂರ ಮಾಡುವ ದೃಷ್ಟಿಯಿಂದ ಸೆಪ್ಟೆಂಬರ್ ಒಂದರಿಂದ ಬಿಜೆಪಿ ಧರ್ಮಸ್ಥಳ ಚಲೋ ಅಭಿಯಾನ ನಡೆಸಲಾಗುವುದು ಎಂದರು.
ಧರ್ಮಸ್ಥಳ ವಿರುದ್ಧ ಆರೋಪ ಬಂದಾಗ ಕೋಟ್ಯಂತರ ಭಕ್ತರಲ್ಲಿ ಆತಂಕ ಆದ ಹಾಗೆ ನಮಗೂ ಆತಂಕ ಆಗಿತ್ತು. ಎಲ್ಲಾ ಆರೋಪಗಳ ಬಗ್ಗೆ ನಿಷ್ಪಕ್ಷಪಾತ ತನಿಖೆ ಆಗಲಿ ನೋಡೋಣ ಎಂದು ನಾವು ಸುಮನಿದ್ದವು. ಆದರೆ, ಈ ತನಿಖೆ, ಅಪಪ್ರಚಾರಕ್ಕೆ ಕಡಿವಾಣ ಹಾಕಲಿಲ್ಲ. ಬದಲಿಗೆ ಇನ್ನಷ್ಟು ಅನುಮಾನಗಳು ಉಂಟಾಗುವಂತೆ ಮಾಡಿದೆ. ಈ ಹಿನ್ನೆಲೆಯಲ್ಲಿ ಶ್ರೀ ಕ್ಷೇತ್ರದ ಜೊತೆ ನಾವಿದ್ದೇವೆ ಎಂಬ ಸಂದೇಶ ನೀಡಲು ಧರ್ಮಸ್ಥಳ ಛಲೋ ನಡೆಸುತ್ತಿರುವುದಾಗಿ ಹೇಳಿದರು.
ರಾಜ್ಯ ಸರ್ಕಾರ ಧರ್ಮಸ್ಥಳ ವಿಚಾರದಲ್ಲಿ ಎಡವಿದೆ. ಆ ಕಾರಣಕ್ಕಾಗಿಯೇ ಕೆಲವು ಕಾಂಗ್ರೆಸ್ ನಾಯಕರು ಕೇಸರಿ ಶಲ್ಯ ಹಾಕಿಕೊಂಡು ಧರ್ಮಸ್ಥಳಕ್ಕೆ ಹೊರಟಿದ್ದಾರೆ. ಕಾಂಗ್ರೆಸ್‌ನವರು ಧರ್ಮಸ್ಥಳ ಭೇಟಿ ಪಾಪ ಪ್ರಾಯಶ್ಚಿತ್ತಕ್ಕಾಗಿ ಎಂದರು.
ಬಿಜೆಪಿ ಆಯೋಜಿಸಿರುವ ಧರ್ಮಸ್ಥಳ ಚಲೋ ಹಿಂದೂಗಳಲ್ಲಿ ಜಾಗೃತಿ ಮೂಡಿಸುವ ಕಾರ್ಯಕ್ರಮ. ಇದರಲ್ಲಿ ಯಾರು ಬೇಕಾದರೂ ಭಾಗವಹಿಸಬಹುದು. ನಾವು ಬಾಯಿ ಮುಚ್ಚಿಕೊಂಡಿರಲು ಕಾಂಗ್ರೆಸ್ ನವರಲ್ಲ. ಈ ಸರ್ಕಾರವನ್ನು ಬಗ್ಗಿಸುವ ಶಕ್ತಿ ಹಿಂದೂಗಳಿಗೆ ಇದೆ ಎಂದರು.
ಡಿಸಿಎಂ ಡಿ.ಕೆ.ಶಿವಕುಮಾರ್ ಅವರ ದೈವಭಕ್ತಿ ಬಗ್ಗೆ ನಾನು ಪ್ರಶ್ನೆ ಮಾಡುವುದಿಲ್ಲ. ಅವರಿಗೂ ಸಹ ಧರ್ಮಸ್ಥಳದ ಬಗ್ಗೆ ಶ್ರದ್ಧೆ ಭಕ್ತಿ ಇದೆ. ಆದರೆ, ಷಡ್ಯಂತ್ರದ ಬಗ್ಗೆ ಉಪಮುಖ್ಯಮಂತ್ರಿಯಾಗಿ ಅವರು ಕೈಕಟ್ಟಿ ಕೂರುವುದು ಸರಿಯಲ್ಲ. ಸಿಎಂ ಮೇಲೆ ಒತ್ತಡ ತಂದು ಪ್ರಕರಣವನ್ನು ಎನ್‌ಐಎಗೆ ವಹಿಸಲಿ ಎಂದರು.
ಧರ್ಮಸ್ಥಳದ ವಿರುದ್ಧ ದೊಡ್ಡ ಮಟ್ಟದಲ್ಲಿ ಷಡ್ಯಂತ್ರ ನಡೆದಿದೆ. ಈ ಅಪಪ್ರಚಾರದ ಹಿಂದೆ ಇರುವ ಎಲ್ಲಾ ಶಕ್ತಿಗಳು ಬೆಳಕಿಗೆ ಬರಲೇಬೇಕು. ತಪ್ಪಿತಸ್ಥರಿಗೆ ತಕ್ಕ ಶಿಕ್ಷೆಯಾಗಬೇಕು. ಹೀಗಾಗಿ ಪ್ರಕರಣವನ್ನು ಎನ್ ಐ ಎ ತನಿಖೆಗೆ ವಹಿಸಬೇಕು ಎಂದು ಒತ್ತಾಯಿಸಿದರು.




