ಬೆಂಗಳೂರು: ಕಾಂಗ್ರೆಸ್ ಮುಖಂಡ, ಅಲ್ಪಸಂಖ್ಯಾತ ನಿಗಮ ಅಧ್ಯಕ್ಷ ಬಿ.ಕೆ ಅಲ್ತಾಫ್ ಖಾನ್ ಗೆ ಅಪರಿಚಿತ ವ್ಯಕ್ತಿಯಿಂದ ಬೆದರಿಕೆ ಕರೆ ಬಂದಿದ್ದು, ಈ ಸಂಬಂಧ ಜೆ.ಜೆ.ನಗರ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ. ಅಪರಿಚಿತ ವ್ಯಕ್ತಿ ಕಳೆದ ಫೆ.5ರಂದು ರಾತ್ರಿ 8ಗಂಟೆ ವೇಳೆಗೆ ಕರೆ ಮಾಡಿ ಬೆದರಿಕೆ ಹಾಕಿದ್ದಾರೆ. ಈ ಸಂಬಂಧ ಎಫ್ಐಆರ್ ದಾಖಲಿಸಿರುವ ಪೊಲೀಸರು ಮುಂದಿನ ತನಿಖೆ ಕೈಗೊಂಡಿದ್ದಾರೆ.
- ಕಳ್ಳಾಟ ಇಲ್ಲದಿದ್ದರೆ ಮುಚ್ಚಿಡುವುದಕ್ಕೇನಿದೆ?
- ಮೊದಲ ಸಿನಿಮಾ ಚಿತ್ರ ಬಿಡುಗಡೆ ನೆನಪು ಮಾಡಿಕೊಂಡ ಅನಿರುದ್ಧ
- ಮಲೆನಾಡ ಶೈಲಿಯ ಬಿಸಿಬಿಸಿ ‘ನೀರುಪ್ಪಿಟ್ಟು’ ಮಾಡುವ ವಿಧಾನ
- ದಸರಾ ಪುಸ್ತಕ ಮೇಳದಲ್ಲಿ ಹೊಸ ಪುಸ್ತಕಗಳ ಬಿಡುಗಡೆಗೆ ಅರ್ಜಿ ಆಹ್ವಾನ
- ಎಸ್ಐಆರ್ ರಾಜಕೀಯಕ್ಕೆ ಬಳಕೆ ಸರಿಯಲ್ಲ: ಡಿ ಕೆ ಶಿವಕುಮಾರ್
ಅಲ್ತಾಫ್ ಖಾನ್ ಗೆ ದೂರವಾಣಿ ಕರೆ ಮಾಡಿ ಬೆದರಿಕೆ ಹಾಕಿದ ವ್ಯಕ್ತಿ, ನೀನು ಪಿಎಫ್ಐ ಸಂಘಟನೆಯವರೊಂದಿಗೆ ಆಟವಾಡಬೇಡ, ಆರ್ಎಸ್ಎಸ್ ಏಜೆಂಟ್ ಆಗಿ ಕೆಲಸ ಮಾಡಬೇಡ. ನಾಳೆ ನಿನ್ನ ಮಗಳ ಮದುವೆ ಇದೆ. ನಮ್ಮಿಂದ ನೀನು ಹಲವು ಬಾರಿ ಬಚಾವ್ ಆಗಿದ್ದೀಯಾ. ಇನ್ಮುಂದೆ ನೀನು ಬಚಾವ್ ಆಗಲು ಆಗಲ್ಲ. ನಿನ್ನ ತಮ್ಮಂದಿರನ್ನು ನೀನು ಉಳಿಸಿಕೊಳ್ಳಲು ಸಾಧ್ಯವಾಗುವುದಿಲ್ಲ. ಮತ್ತು ನಿನ್ನ ಕುಟುಂಬದವರನ್ನು ಜೀವ ಸಹಿತ ಬಿಡುವುದಿಲ್ಲ. ನೀನು ನ್ಯಾಯಾಲಯದಲ್ಲಿ ಕೇಸ್ ಗೆ ಸಾಕ್ಷಿ ಹೇಳಲು ಹೋಗಬಾರದು. ಹೋದರೇ ನೀನೇ ಉಳಿಯುವುದಿಲ್ಲ. ಆರ್ಎಸ್ಎಸ್ಗೆ ಚಮಚಗಿರಿ ಮಾಡಿದರೆ ಪಿಎಫ್ಐ ನಿನ್ನನ್ನು ಸುಮ್ಮನೆ ಬಿಡುವುದಿಲ್ಲ ಎಂದು ಅಪರಿಚಿತ ವ್ಯಕ್ತಿ ಬೆದರಿಕೆ ಹಾಕಿದ್ದಾನೆ ಎಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ.
ಪ್ರಕರಣ ಜೆಜೆ ನಗರ ಠಾಣೆಯಿಂದ ಸಿಸಿಬಿಗೆ ವರ್ಗಾವಣೆವಾಗಿದೆ. ಸಿಸಿಬಿ ಅಧಿಕಾರಿಗಳ ತನಿಖೆ ವೇಳೆ ದುಬೈ ನಿಂದ ಅಲ್ತಾಫ್ ಗೆ ಕರೆ ಮಾಡಿರುವುದು ಬಯಲಾಗಿದೆ. ದುಬೈ ಮೂಲದ ವ್ಯಕ್ತಿ ಜೊತೆ ಸಂಪರ್ಕದಲ್ಲಿದ್ದವನನ್ನು ಸಿಸಿಬಿ ವಶಕ್ಕೆ ಪಡೆದು, ವಿಚಾರಣೆ ನಡೆಸಿದೆ.




