ಬೆಂಗಳೂರು: ಬೆಂಗಳೂರು ನಗರದ ರಸ್ತೆಗಳ ಅವ್ಯವಸ್ಥೆ, ಇತರೆ ಮೂಲಸೌಕರ್ಯಗಳ ಕೊರತೆಯಿಂದ ಬೇಸತ್ತಿರುವ ಖಾಸಗಿ ಸಂಸ್ಥೆಯೊಂದು ಬೆಂಗಳೂರಿನಿಂದ ಹೊರ ನಡೆಯಲು ತೀರ್ಮಾನಿಸಿದೆ.
- Modi is confident that he can capture the Delimitation Commission too: Rahul Gandhi
- ಅಳವು ಅರಿಯದ ಭಾಷೆ – ತುಳುನಾಡಿನ ಅತ್ಯಂತ ಹೆಮ್ಮೆಯ ಕೃತಿ
- ಬದುಕುವ ದಾರಿ ಮಾತ್ರ ಶಿಕ್ಷಣವಲ್ಲ, ಮಾನವೀಯತೆಯೇ ನಿಜವಾದ ವಿದ್ಯೆ: ಸಿದ್ದರಾಮಯ್ಯ
- ಮರಾಠಿ ಕಡ್ಡಾಯಗೊಳಿಸಿದ ಮಹಾರಾಷ್ಟ್ರ ಮಾದರಿ ಕರ್ನಾಟಕಕ್ಕೂ ಬರಲಿ: ಟಿ.ಎ. ನಾರಾಯಣಗೌಡ
- ಅಂಬೇಡ್ಕರ್ ಸಂವಿಧಾನ ಸಮಿತಿಯಲ್ಲಿ ಇರದೇ ಇದ್ದರೆ ಸಂವಿಧಾನ ಸರ್ವವ್ಯಾಪಕವಾಗುತ್ತಿರಲಿಲ್ಲ: ಬೊಮ್ಮಾಯಿ
ಕಳೆದ ಒಂಬತ್ತು ವರ್ಷಗಳಿಂದ ಬೆಂಗಳೂರು ನಗರದಲ್ಲಿ ಕಾರ್ಯಾಚರಣೆ ನಡೆಸುತ್ತಿರುವ ಅತಿದೊಡ್ಡ ಲಾಜಿಸ್ಟಿಕ್ ಸಂಸ್ಥೆಯಾದ ಬ್ಲಾಕ್ ಬಕ್ ಕಂಪನಿ ಬೆಂಗಳೂರಿನ ಸಹವಾಸವೇ ಬೇಡ ಎಂಬ ನಿರ್ಧಾರಕ್ಕೆ ಬಂದಿದೆ.
ಕಳೆದ 2016ರಲ್ಲಿ ಲಾಜಿಸ್ಟಿಕ್ ಸೇವೆ ಆರಂಭಿಸಿದ್ದ ಬ್ಲಾಕ್ ಬಕ್ ಸಂಸ್ಥೆ ನಗರದ ಹೊರವರ್ತುಲ ರಸ್ತೆಯಲ್ಲಿ ಸೇವೆ ನೀಡುತ್ತ ಬರುತ್ತಿದೆ. ವೈಟ್‍ಫೀಲ್ಡ್, ಸರ್ಜಾಪುರ, ಮಾರತ್‍ಹಳ್ಳಿ ಮತ್ತು ಬೆಳ್ಳಂದೂರು ಕಡೆಗಳಲ್ಲಿ ಸೇವೆ ನೀಡ್ತಿರೋ ಈ ಸಂಸ್ಥೆ ನಗರದ ಅವ್ಯವಸ್ಥೆಗೆ ಬೇಸತ್ತು ಇಲ್ಲಿಂದ ಜಾಗ ಖಾಲಿ ಮಾಡಲು ನಿರ್ಧರಿಸಿದೆ.
ಬ್ಲಾಕ್‍ಬಕ್ ಸಂಸ್ಥೆ ಸಹ-ಸಂಸ್ಥಾಪಕ ಮತ್ತು ಸಿಇಒ ರಾಜೇಶ್ ಯಬಾಜಿ ಅವರು ಎಕ್ಸ್ ಮಾಡಿ ತಮ್ಮ ಈ ನಿರ್ಧಾರ ಪ್ರಕಟಿಸಿದ್ದಾರೆ. ಪೋಸ್ಟ್ ನಲ್ಲಿ ಕಳೆದ 9 ವರ್ಷದಿಂದ ಬೆಂಗಳೂರಿನಲ್ಲಿ ಸೇವೆ ನೀಡೋಕೆ ಕಷ್ಟ ಆಗ್ತಿದೆ. ಬೆಳ್ಳಂದೂರಿನಲ್ಲಿ ಸೇವೆ ನೀಡೋಕೆ ಕಷ್ಟ ಆಗ್ತಿದೆ. ನಮ್ಮ ಕಚೇರಿ ಇದೀಗ ಕಚೇರಿ ಪ್ಲಸ್ ಮನೆಯಾಗಿ ಪರಿವರ್ತನೆಯಾಗಿದೆ. ಇಲ್ಲಿ ನಾವು ಮುಂದುವರೆಯುವುದು ಕಷ್ಟ ಆಗಲಿದೆ. ನಾವು ಹೊರಗೆ ಹೋಗಲು ತೀರ್ಮಾನಿಸಿದ್ದೇವೆ ಎಂದು ಅಸಮಧಾನ ವ್ಯಕ್ತಪಡಿಸಿದ್ದಾರೆ.
ನಮ್ಮ ಸಹೋದ್ಯೋಗಿಗಳ ಪ್ರಯಾಣದ ಸಮಯ ಒಂದೂವರೆ ಗಂಟೆಗೂ ಹೆಚ್ಚಿದೆ. ರಸ್ತೆಗಳು ಗುಂಡಿ ಮತ್ತು ಧೂಳಿನಿಂದ ತುಂಬಿವೆ. ಹಾಳಾದ ರಸ್ತೆಗಳನ್ನ ರಿಪೇರಿ ಮಾಡಲು ಹಿಂದೇಟು ಹಾಕಲಾಗುತ್ತಿದೆ. ಮುಂದಿನ ಐದು ವರ್ಷ ಯಾವುದೇ ಬದಲಾವಣೆ ಕಂಡುಬರುವುದು ಕಷ್ಟ ಸಾಧ್ಯ ಎನ್ನುವ ಪರಿಸ್ಥಿತಿ ಇರುವ ಹಿನ್ನೆಲೆಯಲ್ಲಿ ಇಂತಹ ನಿರ್ಧಾರ ಕೈಗೊಳ್ಳುವುದು ಅನಿವಾರ್ಯ ಎಂದು ಅವರು ಅಲವತ್ತುಕೊಂಡಿದ್ದಾರೆ.
ಕೆಆರ್ ಪುರಂ ನಿಂದ ಸಿಲ್ಕ್ ಬೋರ್ಡ್ ವರೆಗೆ 500ಕ್ಕೂ ಐಟಿ ಸಂಸ್ಥೆಗಳಿವೆ ಇಲ್ಲಿ 9.5 ಲಕ್ಷಕ್ಕೂ ಹೆಚ್ಚು ಉದ್ಯೋಗಿಗಳು ಕೆಲಸ ಮಾಡುತ್ತಿದ್ದಾರೆ. ರಾಜ್ಯದ ವಾರ್ಷಿಕ ಆದಾಯದಲ್ಲಿ ಶೆ. 36ರಷ್ಟು ಕೊಡುಗೆ ನಮ್ಮದೆ ಇದೇ. ಪರಿಸ್ಥಿತಿ ಹೀಗಿದ್ದರೂ ನಮಗೆ ಸೂಕ್ತ ಮೂಲಭೂತ ಸೌಲಭ್ಯ ಸಿಗುತ್ತಿಲ್ಲ ಎಂದು ಅವರು ತಮ್ಮ ಅಸಮಾಧಾನ ಹೊರ ಹಾಕಿದ್ದಾರೆ.
ಇದರ ಬೆನ್ನಲ್ಲೇ ಆಂಧ್ರ ಪ್ರದೇಶದ ಸಚಿವ ನಾರಾ ಲೋಕೇಶ್ ಅವರು ರಾಜೇಶ್ ಯಾಬಾಜಿಗೆ ಆಂಧ್ರ ಪ್ರದೇಶಕ್ಕೆ ಬರುವಂತೆ ಆಹ್ವಾನ ನೀಡಿದ್ದಾರೆ. ಆಂಧ್ರ ಪ್ರದೇಶದ ಮಾಹಿತಿ ತಂತ್ರಜ್ಞಾನ ಮತ್ತು ಒಳಾಡಳಿತ ಸಚಿವ ನಾರಾ ಲೋಕೇಶ್, ಎಕ್ಸ್ ಖಾತೆ ಮೂಲಕ ಆಹ್ವಾನ ನೀಡಿದ್ದಾರೆ.
ಕೂಡಲೇ ಈ ಕಂಪನಿಯನ್ನ ತಮ್ಮ ರಾಜ್ಯಕ್ಕೆ ಆಹ್ವಾನಿಸುತ್ತಿದ್ದೇನೆ. ನೀವು ನಿಮ್ಮ ಕಂಪನಿಯನ್ನು ವೈಜಾಗ್ ಸ್ಥಳಾಂತರಿಸಬಹುದು. ನಾವು ಭಾರತದ ಟಾಪ್ 5 ಸ್ವಚ್ಛ ನಗರಗಳಲ್ಲಿ ಒಂದೆಂದು ರೇಟಿಂಗ್ ಪಡೆದಿದ್ದೇವೆ. ಅತ್ಯುತ್ತಮ ಮೂಲಸೌಕರ್ಯಗಳನ್ನು ನಿರ್ಮಿಸುತ್ತಿದ್ದೇವೆ. ಮಹಿಳೆಯರಿಗೆ ಸುರಕ್ಷಿತ ನಗರವೆಂದು ರೇಟಿಂಗ್ ಪಡೆದಿದ್ದೇವೆ. ನಿಮಗೆ ಆಸಕ್ತಿ ಇದ್ದರೆ ದಯವಿಟ್ಟು ನನಗೆ ಮೆಸೇಜ್ ಮಾಡಿ ಎಂದು ಪೋಸ್ಟ್ ಮಾಡಿದ್ದಾರೆ.
ಬೆಂಗಳೂರಿನ ರಸ್ತೆ ಗುಂಡಿಗಳ ಅವಾಂತರದ ಬಗ್ಗೆ ಲಾಜಿಸ್ಟಿಕ್ಸ್ ಟೆಕ್ ಪ್ಲಾಟ್ಫಾರ್ಮ್ ಬ್ಲಾಕ್ಬಕ್ ಸಹ-ಸಂಸ್ಥಾಪಕ ರಾಜೇಶ್ ಯಾಬಾಜಿ ಅಸಮಾಧಾನ ಹೊರಹಾಕಿದರುವ ಬೆನ್ನಲ್ಲೇ ಎಚ್ಚೆತ್ತ ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ನಗರದ ರಸ್ತೆಗಳ ಗುಂಡಿ ಮುಚ್ಚಲು ಟಾರ್ಗೆಟ್ ನೀಡಿದ್ದಾರೆ.
ಈ ಕುರಿತು ಸಾಮಾಜಿಕ ಜಾಲತಾಣ ಎಕ್ಸ್ ನಲ್ಲಿ ಮಾಹಿತಿ ನೀಡಿರುವ ಅವರು, ಬೆಂಗಳೂರಿನ ರಸ್ತೆ ಗುಂಡಿಗಳ ಸಮಸ್ಯೆಯನ್ನು ಬಗೆಹರಿಸಲು ನವೆಂಬರ್ ಒಳಗೆ ರಸ್ತೆ ಗುಂಡಿಗಳನ್ನು ಮುಚ್ಚುವಂತೆ ಗುತ್ತಿಗೆದಾರರಿಗೆ ಅಂತಿಮ ಗಡುವು ನೀಡಲಾಗಿದೆ. ಸ್ವಚ್ಛ ಬೆಂಗಳೂರು ಹಾಗೂ ಸುಗಮ ಸಂಚಾರವೇ ನಮ್ಮ ಗುರಿಯಾಗಿರುವುದರಿಂದ ಆದಷ್ಟು ಬೇಗ ರಸ್ತೆ ಗುಂಡಿಗಳಿಗೆ ಜಿಬಿಎ ಮುಕ್ತಿ ನೀಡಲಿದೆ ಎಂದಿದ್ದಾರೆ.
ರಾಜ್ಯ ಸರ್ಕಾರ ನೀಡಿದ್ದ ಮಾಹಿತಿಯ ಪ್ರಕಾರ ಬೆಂಗಳೂರಿನ 69 ರಸ್ತೆಗಳು ಗುಂಡಿಮಯವಾಗಿವೆ. ಬಿಬಿಎಂಪಿ ರಸ್ತೆ ಮೂಲಭೂತ ಸೌಕರ್ಯ ವಿಭಾಗದ ಆರ್ಟಿರಿಯಲ್ ಹಾಗೂ ಸಬ್ ಆರ್ಟಿರಿಯಲ್ ರಸ್ತೆಗಳ ಪೈಕಿ ಗುಂಡಿಗಳಿಲ್ಲದ ರಸ್ತೆಗಳ ಸಂಖ್ಯೆ 485 ಇವೆ. ಆದರೆ ಹೆಚ್ಚು ಸಂಖ್ಯೆಯಲ್ಲಿ ಗುಂಡಿಗಳು ಇರುವ ರಸ್ತೆಗಳ ಸಂಖ್ಯೆ 69 ರಷ್ಟಿದೆ ಎಂದಿದ್ದಾರೆ.
ಬೆಂಗಳೂರು ನಗರದಲ್ಲಿ ಕಳೆದ 2 ವರ್ಷಗಳಲ್ಲಿ ರಸ್ತೆ ಗುಂಡಿಗಳನ್ನು ಮುಚ್ಚಿಸಲು ರಾಜ್ಯ ಸರ್ಕಾರ ಸುಮಾರು 19 ಕೋಟಿ ಖರ್ಚು ಮಾಡಿದೆ. ಅದೇ ರೀತಿಯಲ್ಲಿ 2023 ಹಾಗೂ 24ನೇ ಸಾಲಿನಲ್ಲಿ 7 ಕೋಟಿ ಖರ್ಚು ಮಾಡಲಾಗಿದೆ. 2024 ಹಾಗೂ 25ನೇ ಸಾಲಿನಲ್ಲಿ 12.25 ಕೋಟಿಯಷ್ಟು ಖರ್ಚು ಮಾಡಲಾಗಿದೆ ಎಂದಿದ್ದಾರೆ.
2024-25 ರಲ್ಲಿ ಬೆಂಗಳೂರಿನಲ್ಲಿ ಒಟ್ಟು 1,78,792 ಚದರ ಮೀಟರ್ ರಸ್ತೆ ಗುಂಡಿಗಳನ್ನ ಮುಚ್ಚಲಾಗಿದೆ. 2023 ಹಾಗೂ 24 ರಲ್ಲಿ ಒಟ್ಟು 1,07,771 ಚದರ ಮೀಟರ್ ರಸ್ತೆ ಗುಂಡಿಗಳನ್ನು ಮುಚ್ಚಿಸಲಾಗಿದೆ. ಹೀಗಿದ್ದರೂ ಹಲವು ರಸ್ತೆಗಳಲ್ಲಿ ಗುಂಡಿಗಳು ಎದ್ದು ಕಾಣಿಸುತ್ತಿವೆ. ಇವುಗಳನ್ನು ಡೆಡ್ ಲೈನ್ ಒಳಗಡೆ ಮುಚ್ಚಿಸಲಾಗುತ್ತದೆಯೇ ಕಾದು ನೋಡಬೇಕಿದೆ.




