ಮಂಗಳೂರು: ಕೇಂದ್ರ ಕಾರ್ಮಿಕ ಸಂಘಟನೆಯಾದ CITU ನ 18ನೇ ದ.ಕ.ಜಿಲ್ಲಾ ಸಮ್ಮೇಳನ ಅಕ್ಟೋಬರ್ 5 ಮತ್ತು 6ರಂದು ಎರಡು ದಿನಗಳ ಕಾಲ ಮಂಗಳೂರಿನ ಬೋಳಾರದಲ್ಲಿ ಅತ್ಯಂತ ಯಶಸ್ವಿಯಾಗಿ ಜರುಗಿತು.
- ಗದಗವನ್ನು ಬರಪೀಡಿತ ತಾಲೂಕುಗಳ ಪಟ್ಟಿಗೆ ಸೇರಿಸದಿದ್ದರೆ ಶಾಸಕ ಸ್ಥಾನಕ್ಕೆ ರಾಜೀನಾಮೆ: ಎಚ್ ಕೆ ಪಾಟೀಲ್
- ತುಳು ರಾಜ್ಯದ ಎರಡನೇ ಹೆಚ್ಚುವರಿ ಅಧಿಕೃತ ಭಾಷೆಯಾಗಿ ಮಾನ್ಯತೆ: ಸಿದ್ದರಾಮಯ್ಯ
- ಪೆರಿಯಾರ್ ಆಗ್ನೇಯ ಏಷ್ಯಾದ ಸಾಕ್ರೆಟಿಸ್: ಎ.ಜಿ.ಕಾಂಬಳೆ
- ಕೇಂದ್ರ ಸಚಿವ ಸಂಪುಟ ಸಭೆ ಬೇರೆ ರಾಜ್ಯಗಳಲ್ಲಿ ನಡೆಯಲಿ
- ಪಿ.ಪಿ.ಪಿ ಮಾದರಿ ಕೈ ಬಿಡಲು ಒತ್ತಾಯಿಸಿ ಸಚಿವ ಸಂಪುಟ ಸಭೆಗೆ ಮೆರವಣಿಗೆ: ಸಿಪಿಐಎಂ
ಜಿಲ್ಲೆಯ ಕಾರ್ಮಿಕ ವರ್ಗಕ್ಕೆ ಬಾಧಿಸುವ ಹಲವಾರು ಅಂಶಗಳ ಬಗ್ಗೆ ನಿರ್ಣಯಗಳನ್ನು ಕೈಗೊಂಡ ಸಮ್ಮೇಳನವು ಮುಂಬರುವ ದಿನಗಳಲ್ಲಿ ಪ್ರಬಲ ಹೋರಾಟಗಳನ್ನು ರೂಪಿಸಲು ತೀರ್ಮಾನ ಕೈಗೊಂಡಿತು.ಸಮ್ಮೇಳನವು ಮುಂದಿನ ಮೂರು ವರ್ಷಕ್ಕೆ ನೂತನ ಜಿಲ್ಲಾ ಸಮಿತಿಯನ್ನು ಆಯ್ಕೆಗೊಳಿಸಿತು.
ನೂತನ ಜಿಲ್ಲಾಧ್ಯಕ್ಷರಾಗಿ ಬಿ ಎಂ ಭಟ್,ಪ್ರಧಾನ ಕಾರ್ಯದರ್ಶಿಯಾಗಿ ಸುನಿಲ್ ಕುಮಾರ್ ಬಜಾಲ್ ಹಾಗೂ ಖಜಾಂಚಿಯಾಗಿ ಯೋಗೀಶ್ ಜಪ್ಪಿನಮೊಗರುರರವರನ್ನು ಸರ್ವಾನುಮತದಿಂದ ಆರಿಸಲಾಯಿತು. ಉಪಾಧ್ಯಕ್ಷರುಗಳಾಗಿ ಜೆ ಬಾಲಕೃಷ್ಣ ಶೆಟ್ಟಿ, ಸುಕುಮಾರ್ ತೊಕ್ಕೋಟು, ವಸಂತ ಆಚಾರಿ, ಪದ್ಮಾವತಿ ಶೆಟ್ಟಿ, ರಮಣಿ ಮೂಡಬಿದ್ರೆ, ಯಾದವ ಶೆಟ್ಟಿ, ಸುಂದರ ಕುಂಪಲ, ನೋಣಯ್ಯಗೌಡ ಹಾಗೂ ಕಾರ್ಯದರ್ಶಿಗಳಾಗಿ ರಾಧಾ ಮೂಡಬಿದ್ರೆ, ರವಿಚಂದ್ರ ಕೊಂಚಾಡಿ, ಗಿರಿಜಾ ಮೂಡಬಿದ್ರೆ, ಬಿ ಕೆ ಇಮ್ತಿಯಾಜ್, ವಸಂತಿ ಕುಪ್ಪೆಪದವು, ಲೋಕಾಕ್ಷಿ ಬಂಟ್ವಾಳ, ಈಶ್ಬರೀ ಬೆಳ್ತಂಗಡಿ, ರೋಹಿದಾಸ್ ಭಟ್ನಗರ, ಭವ್ಯಾ ಮುಚ್ಚೂರುರವರು ಆಯ್ಕೆಗೊಂಡರು. ಜಿಲ್ಲಾ ಸಮಿತಿ ಸದಸ್ಯರುಗಳಾಗಿ ವಿವಿಧ ಯೂನಿಯನ್ ಹಾಗೂ ಸಂಘಟನೆಗಳ 35 ಮಂದಿ ಪ್ರಮುಖ ನಾಯಕರುಗಳನ್ನು ಆರಿಸಲಾಯಿತು.




