ಸಚಿವ ಸಂಪುಟಕ್ಕೆ ಸರ್ಜರಿ ಸುಳಿವು ನೀಡಿದ ಸಿಎಂ
ಮೈಸೂರು: ರಾಜ್ಯ ವಿಧಾನಸಭೆಯ 3 ಕ್ಷೇತ್ರಗಳಿಗೆ ನಡೆಯುತ್ತಿರುವ ಉಪಚುನಾವಣೆ ಫಲಿತಾಂಶ ಹೊರ ಬೀಳುತ್ತಿದ್ದಂತೆ ರಾಜ್ಯ ಸಚಿವ ಸಂಪುಟಕ್ಕೆ ಸರ್ಜರಿ ನಡೆಯಲಿದೆ. ಸ್ವತಃ ಸಿಎಂ ಸಿದ್ದರಾಮಯ್ಯ ಅವರೇ ಈ ಬಗ್ಗೆ ಸುಳಿವು ನೀಡಿದ್ದಾರೆ.
- ಪೌರಕಾರ್ಮಿಕರ ದಿನಾಚರಣೆ ಪ್ರಯುಕ್ತ ಕಸ ಸಂಗ್ರಹಣೆ ಇಲ್ಲ
- ಸರಳ, ವೇಗ, ಪಾರದರ್ಶಕ, ಜನಸ್ನೇಹಿ ಆಸ್ತಿ ದಾಖಲೆ ವ್ಯವಸ್ಥೆ ಇ-ಆಸ್ತಿ 2.0: ಕೃಷ್ಣ ಬೈರೇಗೌಡ
- ರೈತರಿಗೆ ನಿರಂತರ 6 ತಾಸು ಸಮರ್ಪಕ ವಿದ್ಯುತ್ ಕುಡಿಯುವ ನೀರು ಪೂರೈಕೆಗೆ ಆದ್ಯತೆ
- ಕೆಟಿವಿಎ ಗೃಹ ಪತ್ರಿಕೆ ಟಿವಿ – ಠೀವಿ ಪುನರಾರಂಭ
- ಸಿಎನ್ಎನ್, ಎಂಎಸ್ಎನ್ಬಿಸಿ, ಪಾಲಿಟಿಕೋಗೆ ಶ್ವೇತಭವನ ಪ್ರವೇಶ ನಿಷೇಧಿಸಿದ ಟ್ರಂಪ್
ಮೈಸೂರಿನ ಎಚ್ ಡಿ ಕೋಟೆ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ ನೀಡಿ ಮಾತನಾಡಿದ ಅವರು, ವಾಲ್ಮೀಕಿ ಸಮುದಾಯಕ್ಕೆ ಸೇರಿದ ಬಿ ನಾಗೇಂದ್ರ ಮತ್ತೆ ಮಂತ್ರಿಯಾಗಲಿದ್ದಾರೆ ಎಂದರು.
ವಾಲ್ಮೀಕಿ ಅಭಿವೃದ್ಧಿ ನಿಗಮದ ಹಣಕಾಸು ವರ್ಗಾವಣೆ ಅಕ್ರಮ ಆರೋಪದ ಹಿನ್ನೆಲೆಯಲ್ಲಿ ಅವರಿಂದ ಮಂತ್ರಿ ಸ್ಥಾನಕ್ಕೆ ರಾಜೀನಾಮೆ ಪಡೆಯಲಾಗಿತ್ತು. ಈ ವೇಳೆ ಅವರಿಗೆ ಮತ್ತೆ ಸಚಿವ ಸ್ಥಾನ ಕೊಡುವ ಭರವಸೆ ನೀಡಿದ್ದೆ. ಅದರಂತೆ ಇದೀಗ ಅವರನ್ನು ಮಂತ್ರಿ ಮಾಡುತ್ತೇನೆ ಎಂದರು.
ಪ್ರಕರಣದಲ್ಲಿ ಅವರು ಇದೀಗ ಜಾಮೀನು ಪಡೆದುಕೊಂಡು ಹೊರಗೆ ಬಂದಿದ್ದಾರೆ. ಮೂರು ವಿಧಾನಸಭೆ ಕ್ಷೇತ್ರಗಳ ಉಪಚುನಾವಣೆ ಫಲಿತಾಂಶ ಹೊರಬಂದ ನಂತರ ಮಂತ್ರಿಮಂಡಲ ವಿಸ್ತರಣೆ ಪ್ರಕ್ರಿಯೆ ಮಾಡಲಾಗುವುದು. ಆಗ ನಾಗೇಂದ್ರ ಅವರನ್ನು ಸಂಪುಟಕ್ಕೆ ಸೇರ್ಪಡೆ ಮಾಡಿಕೊಳ್ಳುತ್ತೇನೆ. ತಾವು ಕೊಟ್ಟ ಮಾತಿಗೆ ತಪ್ಪುವುದಿಲ್ಲ ಎಂದರು.
ಈ ಹೇಳಿಕೆ ಹೊರ ಬಿದ್ದ ಬೆನ್ನಲ್ಲೇ ರಾಜ್ಯ ಕಾಂಗ್ರೆಸ್ ನಲ್ಲಿ ವಿದ್ಯಾಮಾನಗಳು ಚುರುಕುಗೊಂಡಿವೆ. ನಿರೀಕ್ಷಿತ ಪ್ರಮಾಣ ದಲ್ಲಿ ಕೆಲಸ ಮಾಡದ ಆರೋಪಕ್ಕೆ ಸಿಲುಕಿರುವ ಮತ್ತು ಇತರೆ ಅರ್ಹರಿಗೆ ಅವಕಾಶ ನೀಡುವ ನಿಟ್ಟಿನಲ್ಲಿ ಸಂಪುಟದಿಂದ ಐವರನ್ನು ಕೈ ಬಿಟ್ಟು ಹೊಸದಾಗಿ ಐವರನ್ನು ಸೇರ್ಪಡೆ ಮಾಡಿಕೊಳ್ಳಲು ಸಿಎಂ ತೀರ್ಮಾನಿಸಿದ್ದಾರೆ ಎನ್ನಲಾಗಿದೆ.
ಕೆಲವು ಜಿಲ್ಲೆಗಳಿಗೆ ಮತ್ತು ಸಮುದಾಯಗಳಿಗೆ ಅತಿಯಾದ ಪ್ರಾತಿನಿಧ್ಯ ಸಿಕ್ಕಿದೆ. ಇದನ್ನು ತಪ್ಪಿಸಿ ಎಲ್ಲ ಜಿಲ್ಲೆಗಳಿಗೂ ಸೂಕ್ತ ಪ್ರಾತಿನಿಧ್ಯ ಸಾಮಾಜಿಕ ನ್ಯಾಯ ಮತ್ತು ಪಕ್ಷ ಸಂಘಟನೆಗೆ ವಿಶೇಷವಾಗಿ ಒತ್ತು ನೀಡಿದವರಿಗೆ ಗೌರವ ನೀಡುವ ದೃಷ್ಟಿಯಿಂದ ಮೊದಲ ಹಂತದಲ್ಲಿ ಐವರನ್ನು ಕೈ ಬಿಟ್ಟು ಹೊಸದಾಗಿ ಐವರಿಗೆ ಸಚಿವ ಸ್ಥಾನ ಕಲ್ಪಿಸಲಿದ್ದಾರೆ ಎಂದು ಮೂಲಗಳಿಂದ ತಿಳಿದುಬಂದಿದೆ.
ಶಿಕ್ಷಣ ಸಚಿವ ಮಧು ಬಂಗಾರಪ್ಪ, ಅಬಕಾರಿ ಸಚಿವ ಆರ್ ಬಿ ತಿಮ್ಮಾಪುರ, ಯೋಜನಾ ಸಚಿವ ಡಿ. ಸುಧಾಕರ್, ನಗರಾಭಿವೃದ್ಧಿ ಸಚಿವ ಭೈರತಿ ಸುರೇಶ್ ಅವರನ್ನು ಸಂಪುಟದಿಂದ ಕೈ ಬಿಟ್ಟು ಅವರ ಬದಲಿಗೆ ಹಿರಿಯ ನಾಯಕ ಬಿ ಕೆ ಹರಿಪ್ರಸಾದ್, ಲಕ್ಷ್ಮಣ ಸವದಿ ಸೇರಿದಂತೆ ಇತರರಿಗೆ ಸಂಪುಟದಲ್ಲಿ ಸ್ಥಾನ ಕಲ್ಪಿಸುವ ಸಾಧ್ಯತೆ ಇದೆ.




