ಬೆಂಗಳೂರು: ವಾಲ್ಮೀಕಿ ಅಭಿವೃದ್ಧಿ ನಿಗಮದ ಹಣ ಅಕ್ರಮ ವರ್ಗಾವಣೆ ಹಗರಣದ ಸಂಬಂಧ ಮಾಜಿ ಸಚಿವ ಬಿ.ನಾಗೇಂದ್ರ ಬಂಧನದ ಬೆನ್ನಲ್ಲೇ ಜಾರಿ ನಿರ್ದೇಶನಾಲಯ(ಇಡಿ) ಅಧಿಕಾರಿಗಳು ಅವರ ಪತ್ನಿ ಮಂಜುಳಾ ಅವರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದ್ದಾರೆ.
- ಈ ದೇಶ ಕಟ್ಟಿದ್ದೇ ದಲಿತರು, ನೀಲಿ ಶಾಲು ಬಗ್ಗೆ ಮಾತಾಡೋಕೆ ನೀನ್ಯಾವನೋ?
- ಜ್ಞಾನೇಶ್ ಕುಮಾರ್ ಅವರನ್ನು ತಕ್ಷಣವೇ ಪದಚ್ಯುತಗೊಳಿಸಿ: ಸಿದ್ದರಾಮಯ್ಯ
- ಸತತ 5 ದಿನ ಬ್ಯಾಂಕ್ಗಳಿಗೆ ಬೀಗ!: ಏನಿರುತ್ತದೆ, ಏನಿಲ್ಲ? ಕಂಪ್ಲೀಟ್ ಡೀಟೈಲ್ಸ್!
- 814 ಉಪನ್ಯಾಸಕರ ನೇಮಕಾತಿಯಲ್ಲಿ ಉರ್ದುಗೆ ಸ್ಥಾನ ಎಲ್ಲಿದೆ?
- ಸಾಲ ಮನ್ನಾ ಮಾಡಿ ರೈತರ ಹಿತ ಕಾಪಾಡಿದ್ದ ಡಾ.ಮನಮೋಹನ್ ಸಿಂಗ್
ಡಾಲರ್ಸ್ ಕಾಲೋನಿ ನಿವಾಸದಿಂದ ಶಾಸಕ ನಾಗೇಂದ್ರ ಪತ್ನಿ ಮಂಜುಳಾರನ್ನು ವಶಕ್ಕೆ ಪಡೆದು ಇಡಿ ಕಚೇರಿ ಕರೆ ತಂದು ಹಲವು ಮಾಹಿತಿ ಪಡೆದರು.
ವಾಲ್ಮೀಕಿ ಅಭಿವೃದ್ಧಿ ನಿಗಮ ಹಗರಣಕ್ಕೆ ಸಂಬಂಧಿಸಿದಂತೆ ಮಂಜುಳಾ ಅವರ ಹೆಸರಲ್ಲಿ ಹಣದ ವಹಿವಾಟು ನಡೆದಿರುವ ಹಿನ್ನೆಲೆಯಲ್ಲಿ ಅವರನ್ನು ವಶಕ್ಕೆ ಪಡೆಯಲಾಗಿದೆ ಎಂದು ಮೂಲಗಳು ತಿಳಿಸಿವೆ.
ಅವ್ಯವಹಾರ ನಡೆದ ಸಮಯದಲ್ಲಿ ಮಂಜುಳಾ ಅವರ ಬ್ಯಾಂಕ್ ಖಾತೆಗಳಿಗೂ ಹಣ ಬಂದಿರುವ ಹಿನ್ನೆಲೆಯಲ್ಲಿ ಇಡಿ ಅಧಿಕಾರಿಗಳು ವಹಿವಾಟಿನ ಮೂಲ ಪ್ರಶ್ನಿಸಿದ್ದಾರೆ.




