ವಿಧಾನಸೌಧ ಆವರಣದಲ್ಲಿ ಪುಸ್ತಕ ಮೇಳ: ಪ್ರಕಾಶಕರು/ ಮಾರಾಟಗಾರರಿಂದ ಅರ್ಜಿ ಆಹ್ವಾನ

1 year ago

ಬೆಂಗಳೂರು: ಕರ್ನಾಟಕ ವಿಧಾನ ಸಭೆ ಸಚಿವಾಲಯದಿಂದ ಪ್ರಥಮ ಬಾರಿಗೆ ನಾಡಿನ ಜನತೆಗೆ ಅತೀ ಅಮೂಲ್ಯವಾದ ಪುಸ್ತಕಗಳನ್ನು ವೀಕ್ಷಿಸಲು ಮತ್ತು ಖರೀದಿಸಲು ಕರ್ನಾಟಕ ವಿಧಾನಸಭಾ ಸಚಿವಾಲಯದ ವತಿಯಿಂದ ಫೆಬ್ರವರಿ 27  ರಿಂದ ಮಾರ್ಚ್ 3ರ ವರೆಗೆ ವಿಧಾನಸೌಧದ ಆವರಣದಲ್ಲಿ ಪುಸ್ತಕ ಮೇಳವನ್ನು ಹಮ್ಮಿಕೊಳ್ಳಲಾಗಿದೆ ಎಂದು ಕರ್ನಾಟಕ ವಿಧಾನಸಭೆಯ ಕಾರ್ಯದರ್ಶಿ ಎಂ.ಕೆ.ವಿಶಾಲಾಕ್ಷಿ ತಿಳಿಸಿದ್ದಾರೆ.

ಈ ಪುಸ್ತಕ ಮೇಳದಲ್ಲಿ ಭಾಗವಹಿಸಲು ಇಚ್ಛಿಸುವ ನಾಡಿನ ಪ್ರಕಾಶಕರು / ಮಾರಾಟಗರಾರು ನಿಗದಿತ ಅರ್ಜಿ ನಮೂನೆಯನ್ನು ಮುಖ್ಯ ಗ್ರಂಥಪಾಲಕರು, ಕರ್ನಾಟಕ ವಿಧಾನ ಸಭೆ ಸಚಿವಾಲಯ, ವಿಧಾನಸೌಧ, ಬೆಂಗಳೂರು, ಇವರಿಂದ ಅಥವಾ ವಿಧಾನ ಸಭೆ ಸಚಿವಾಲಯದ ವೆಬ್ ಸೈಟ್ www.kla.kar.nic.in ನಲ್ಲಿ ಉಚಿತವಾಗಿ ಪಡೆದುಕೊಳ್ಳಬಹುದಾಗಿದೆ.

ಮೇಳದಲ್ಲಿ ಭಾಗವಹಿಸುವ ಪ್ರಕಾಶಕರು/ಮಾರಾಟಗಾರರು ಮಳಿಗೆಯೊಂದಕ್ಕೆ ರೂ.1,000/-ಗಳ ಭದ್ರತಾ ಠೇವಣಿ ಡಿ.ಡಿ ಯನ್ನು ಕಾರ್ಯದರ್ಶಿಗಳು, ಕರ್ನಾಟಕ ವಿಧಾನಸಭೆ ಸಚಿವಾಲಯ, ವಿಧಾನಸೌಧ, ಬೆಂಗಳೂರು ಇವರ ಹೆಸರಿನಲ್ಲಿ ಸಲ್ಲಿಸುವುದು.

ಭರ್ತಿ ಮಾಡಿದ ಅರ್ಜಿಯನ್ನು ಡಿ.ಡಿ.ಯೊಂದಿಗೆ 2025ನೇ ಫೆಬ್ರವರಿ 12ರಂದು ಸಂಜೆ 5.00 ಗಂಟೆಯೊಳಗೆ ಕಾರ್ಯದರ್ಶಿಗಳು, ಕರ್ನಾಟಕ ವಿಧಾನಸಭೆ ಸಚಿವಾಲಯ, ವಿಧಾನಸೌಧ, ಬೆಂಗಳೂರು ಇವರಿಗೆ ಸಲ್ಲಿಸಬಹುದು. 

Leave a Reply