ಬಳ್ಳಾರಿ: ಪತ್ರಿಕೋದ್ಯಮಕ್ಕೆ ಹಾಗೂ ಮಾಧ್ಯಮ ಜಗತ್ತಿಗೆ ಸಂಬಂಧಿಸಿದ 40 ಕ್ಕೂ ಹೆಚ್ಚು ಪುಸ್ತಕಗಳು ಕರ್ನಾಟಕ ಮಾಧ್ಯಮ ಅಕಾಡೆಮಿಯಲ್ಲಿ ರಿಯಾಯಿತಿ ದರದಲ್ಲಿ ಮಾರಾಟಕ್ಕೆ ಲಭ್ಯವಿದ್ದು, ಆಸಕ್ತರು, ವಿಶೇಷವಾಗಿ ವಿದ್ಯಾರ್ಥಿಗಳು ಇದರ ಸದುಪಯೋಗ ಪಡೆದುಕೊಳ್ಳುವಂತೆ ಕರ್ನಾಟಕ ಮಾಧ್ಯಮ ಅಕಾಡೆಮಿ ಅಧ್ಯಕ್ಷೆ ಆಯೇಶಾ ಖಾನಂ ತಿಳಿಸಿದ್ದಾರೆ.
- ಗದಗವನ್ನು ಬರಪೀಡಿತ ತಾಲೂಕುಗಳ ಪಟ್ಟಿಗೆ ಸೇರಿಸದಿದ್ದರೆ ಶಾಸಕ ಸ್ಥಾನಕ್ಕೆ ರಾಜೀನಾಮೆ: ಎಚ್ ಕೆ ಪಾಟೀಲ್
- ತುಳು ರಾಜ್ಯದ ಎರಡನೇ ಹೆಚ್ಚುವರಿ ಅಧಿಕೃತ ಭಾಷೆಯಾಗಿ ಮಾನ್ಯತೆ: ಸಿದ್ದರಾಮಯ್ಯ
- ಪೆರಿಯಾರ್ ಆಗ್ನೇಯ ಏಷ್ಯಾದ ಸಾಕ್ರೆಟಿಸ್: ಎ.ಜಿ.ಕಾಂಬಳೆ
- ಕೇಂದ್ರ ಸಚಿವ ಸಂಪುಟ ಸಭೆ ಬೇರೆ ರಾಜ್ಯಗಳಲ್ಲಿ ನಡೆಯಲಿ
- ಪಿ.ಪಿ.ಪಿ ಮಾದರಿ ಕೈ ಬಿಡಲು ಒತ್ತಾಯಿಸಿ ಸಚಿವ ಸಂಪುಟ ಸಭೆಗೆ ಮೆರವಣಿಗೆ: ಸಿಪಿಐಎಂ
ಕರ್ನಾಟಕ ಮಾಧ್ಯಮ ಅಕಾಡೆಮಿ ಕೆಲವು ದಶಕಗಳಿಂದ ಹಲವು ಪುಸ್ತಕಗಳನ್ನು ಪ್ರಕಟಿಸಿದ್ದು, ಮಾರಾಟಕ್ಕೆ ಲಭ್ಯವಿವೆ. ಹಿರಿಯ ಪತ್ರಕರ್ತರು, ಪರಿಣತರು ಬರೆದಿರುವ ಈ ಪುಸ್ತಕಗಳು ಯುವ ಪತ್ರಕರ್ತರು ಹಾಗೂ ಪತ್ರಿಕೋದ್ಯಮ ವಿದ್ಯಾರ್ಥಿಗಳಿಗೆ ಅತ್ಯಂತ ಉಪಯುಕ್ತವಾಗಿವೆ. ಈ ಪುಸ್ತಕಗಳ ಮೇಲೆ ಶೇ. 20 ರ ವರೆಗೆ ರಿಯಾಯಿತಿ ನೀಡಲಾಗುತ್ತಿದೆ.
ಆಸಕ್ತರು ಪುಸ್ತಕಗಳ ಕುರಿತ ಮಾಹಿತಿಯನ್ನು ಎಕ್ಸ್, ಇನ್‌ಸ್ಟಾಗ್ರಾಂ ಮತ್ತು ಫೇಸ್‌ಬುಕ್ ಗಳಲ್ಲಿನ ಅಕಾಡೆಮಿಯ ಖಾತೆ @karmediaacademy/ Karnataka Media Academy ಗಳಲ್ಲಿ ಪಡೆಯಬಹುದಾಗಿದೆ.
ಆಸಕ್ತರು, ಪತ್ರಿಕೋದ್ಯಮ ಬೋಧಿಸುವ ಕಾಲೇಜು ಹಾಗೂ ವಿಶ್ವವಿದ್ಯಾಲಯಗಳ ಗ್ರಂಥಾಲಯಗಳಿಗೆ ಸಗಟು ಖರೀದಿ ಮಾಡಲು ಬಯಸುವವರು ಅಕಾಡೆಮಿಯ ಕಚೇರಿ ದೂ. 080 22860264 ಗೆ ಕಚೇರಿ ವೇಳೆಯಲ್ಲಿ ಸಂಪರ್ಕಿಸಬಹುದು.





