ಅರವಿಂದ ಲಿಂಬಾವಳಿ ಪರ ಬೋವಿ ಶ್ರೀ ಬ್ಯಾಟಿಂಗ್: ಬೋವಿ
ಅಭ್ಯರ್ಥಿಗಳ ಕಡೆಗಣನೆ
ಆರೋಪ

3 years ago

ಬೆಂಗಳೂರು: ಬಿಜೆಪಿಯಲ್ಲಿ ಬೋವಿ ಸಮುದಾಯಕ್ಕೆ ಸೂಕ್ತ ಪ್ರಾತಿನಿಧ್ಯ ಸಿಗುತ್ತಿಲ್ಲ ಎಂಬ ಆರೋಪ ಕೇಳಿ ಬಂದಿದೆ. ಇದರ ನಡುವೆಯೇ ಬೆಂಗಳೂರಿನ ಮಹಾದೇವಪುರ ವಿಧಾನಸಭಾ ಕ್ಷೇತ್ರದಿಂದ ಮಾಜಿ ಸಚಿವ ಅರವಿಂದ ಲಿಂಬಾವಳಿಗೆ ಟಿಕೆಟ್ ನೀಡಬೇಕೆಂದು ಬೋವಿ ಮಠದ ಇಮ್ಮಡಿ ಸಿದ್ದರಾಮೇಶ್ವರ ಸ್ವಾಮೀಜಿ ಒತ್ತಾಯಿಸಿದ್ದಾರೆ.

ಈ ಸಂಬಂಧ ವಿಡಿಯೋದಲ್ಲಿ ಮಾತನಾಡಿರುವ ಅವರು, ಬೋವಿ ಸಮಾಜದ ಪ್ರಭಾವಿ ನಾಯಕರಾಗಿರುವ ಲಿಂಬಾವಳಿಗೆ ಟಿಕೆಟ್ ನೀಡದಿದ್ದರೆ ಇಡೀ ಸಮಾಜ ತಿರುಗಿ ಬೀಳಲಿದೆ ಎಂದು ಎಚ್ಚರಿಸಿದ್ದಾರೆ.

ಒಂದನೇ ಮತ್ತು 2ನೇ ಪಟ್ಟಿಯಲ್ಲಿ ಲಿಂಬಾವಳಿಯವರ ಹೆಸರು ಇಲ್ಲದಿರುವುದು ತುಂಬ ಬೇಸರ ತಂದಿದೆ. ಯಾವ ಕಾರಣಕ್ಕಾಗಿ ಅವರ ಹೆಸರನ್ನು ಪ್ರಕಟಿಸಿಲ್ಲ ಎಂದು ಸ್ವಾಮೀಜಿ ಪ್ರಶ್ನಿಸಿದ್ದಾರೆ.

ಹಿರಿಯ ನಾಯಕ ಅರವಿಂದ್ ಲಿಂಬಾವಳಿ ಅವರು
ರಾಜ್ಯಾದ್ಯಂತ ಬೋವಿ ಸಮಾಜವನ್ನು ಸಂಘಟಿಸುತ್ತಿದ್ದಾರೆ. ಈ ಹಿಂದೆ ಅವರಿಗೆ ನೀಡಿದ ಎಲ್ಲ ಖಾತೆಗಳನ್ನು ಸಮರ್ಪಕವಾಗಿ ನಿರ್ವಹಿಸಿದ್ದಾರೆ. ಯಾವುದೇ ಖಾತೆಯನ್ನು ಕೊಟ್ಟರೂ ಸಮರ್ಪಕವಾಗಿ ನಿರ್ವಹಿಸಿದ್ದಾರೆ. ಒಬ್ಬ ಶಿಸ್ತಿನ ಸಿಪಾಯಿ ಆಗಿರುವ ಅವರಿಗೆ ಟಿಕೆಟ್ ಘೋಷಣೆ ಮಾಡದಿರುವುದು ತುಂಬ ನೋವು ತಂದಿದೆ. ಪಕ್ಷಕ್ಕೆ ದುಡಿದವರನ್ನು ಈ ರೀತಿ ನಡೆಸಿಕೊಳ್ಳುವುದು ಸರಿಯಲ್ಲ ಎಂದು ಸ್ವಾಮೀಜಿ ಆಕ್ಷೇಪಿಸಿದ್ದಾರೆ.

ಈಗಲೂ ಕಾಲ ಮಿಂಚಿಲ್ಲ. ಕೂಡಲೇ ಬಿಜೆಪಿ ವರಿಷ್ಠರು ಮೂರನೇ ಪಟ್ಟಿಯಲ್ಲಿ ಮಹದೇವಪುರದಿಂದ ಲಿಂಬಾವಳಿ ಅವರಿಗೆ ಟಿಕೆಟ್ ಘೋಷಣೆ ಮಾಡಬೇಕು. ಒಂದು ವೇಳೆ ಮೀನಾಮೇಷ ಎಣಿಸಿದರೆ ರಾಜ್ಯಾದ್ಯಂತ ಬಿಜೆಪಿಗೆ ವಿರುದ್ಧವಾಗಿ ಪ್ರಚಾರ ಮಾಡಬೇಕಾಗುತ್ತದೆ ಎಂದು ಎಚ್ಚರಿಕೆ ಕೊಟ್ಟಿದ್ದಾರೆ.

Leave a Reply