ಬೆಂಗಳೂರು: ಅತ್ಯಾಚಾರ ಆರೋಪಿ ಭಾರತಕ್ಕೆ ಮರಳುವ ಸೂಚನೆ ಸಿಗುತ್ತಿದ್ದಂತೆಯೇ ಬ್ರದರ್ ಸ್ವಾಮಿಗಳು ಫ್ಯಾಮಿಲಿ ಸಮೇತ ಟ್ರಿಪ್ ಹೋಗಿದ್ದಾರೆ ಎಂದು ಕೆಪಿಸಿಸಿ ಹೇಳಿದೆ.
- ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆದ ಪೋಸ್ಟ್ ಕುರಿತು ಯೋಗೇಶ್ ಮಾಸ್ಟರ್ ಸ್ಪಷ್ಟೀಕರಣ
- ಕುಡಿಯುವ ನೀರು ಮತ್ತು ಒಳಚರಂಡಿ ವ್ಯವಸ್ಥೆಗಾಗಿ ದೀರ್ಘಾವಧಿ ಯೋಜನೆ: ಕೃಷ್ಣ ಬೈರೇಗೌಡ
- ಹಾರಿಕಾ ಮಂಜುನಾಥ್ ವಿದೇಶಿ ವಿಶ್ವವಿದ್ಯಾಲಯಗಳಿಂದ ಡಿಗ್ರಿ ಪಡೆದಿದ್ದಾರೆಯೇ?
- ಪೌರ ಕಾರ್ಮಿಕರ ದಿರಿಸಿನಲ್ಲಿ ಡಿ ಕೆ ಶಿವಕುಮಾರ್
- ಹಾಸನದಲ್ಲಿ ಭಗತ್ ಸಿಂಗ್ ಜನ್ಮದಿನದ ಅಂಗವಾಗಿ ‘ನಾನೇಕೆ ನಾಸ್ತಿಕ’ ಸಮಾವೇಶ
ಲೈಂಗಿಕ ದೌರ್ಜನ್ಯ ಪ್ರಕರಣದ ಆರೋಪದ ಹಿನ್ನೆಲೆಯಲ್ಲಿ ಲೋಕಸಭೆ ಚುನಾವಣೆ ನಂತರ ನಾಪತ್ತೆಯಾಗಿದ್ದ ಪ್ರಜ್ವಲ್ ರೇವಣ್ಣ ನಿನ್ನೆ ರಾತ್ರಿ ಬೆಂಗಳೂರಿಗೆ ಆಗಮಿಸಿದ್ದು, ಈ ನಡುವೆ ಮಾಜಿ ಸಿಎಂ ಎಚ್.ಡಿ.ಕುಮಾರಸ್ವಾಮಿ ಕುಟುಂಬ ಸಮೇತ ಪ್ರವಾಸಕ್ಕೆ ತೆರಳಿದ್ದಾರೆ. ಈ ಹಿನ್ನೆಲೆಯಲ್ಲಿ ಸಾಮಾಜಿಕ ಜಾಲತಾಣಗಳಲ್ಲಿ ಕುಮಾರಸ್ವಾಮಿ ವಿರುದ್ಧ ಮುಗಿಬಿದ್ದಿರುವ ಕೆಪಿಸಿಸಿ, ಈ ಸಂದರ್ಭದಲ್ಲಿ ಜಾಲಿ ಟ್ರಿಪ್ ಗೆ ಹೋಗಿದ್ದು ಪ್ರಕರಣದ ಕುರಿತು ಎದುರಾಗುವ ಪ್ರಶ್ನೆಗಳಿಗೆ ಉತ್ತರಿಸಲಾಗದ ಹೇಡಿತನವೊ ಅಥವಾ ರೇವಣ್ಣ ಕುಟುಂಬಕ್ಕೂ ನನಗೂ ಸಂಬಂಧವಿಲ್ಲ ಎಂದು ಸಂದೇಶ ನೀಡುವುದಕ್ಕೋ? ಎಂದು ಪ್ರಶ್ನಿಸಿದೆ.

ಪ್ರಜ್ವಲ್ ಪ್ರಕರಣದಲ್ಲಿ ಬ್ರದರ್ ಸ್ವಾಮಿಗಳು ಇದುವರೆಗೂ ಒಮ್ಮೆಯೂ ಹೊಣೆಗಾರಿಕೆಯಿಂದ ವರ್ತಿಸಿದ ಉದಾಹರಣೆ ಇಲ್ಲ. ತಮ್ಮದೇ ಪಕ್ಷದ, ತಮ್ಮದೇ ಕುಟುಂಬದ ವ್ಯಕ್ತಿಯೊಬ್ಬನಿಂದ ಇಡೀ ರಾಜ್ಯವೇ ತಲೆತಗ್ಗಿಸುವ ಕೆಲಸ ನಡೆದಿದ್ದರೂ ಬ್ರದರ್ ಸ್ವಾಮಿಗಳಿಗೆ ಕಿಂಚಿತ್ ಪಶ್ಚಾತ್ತಾಪವಿಲ್ಲದೆ ಜಾಲಿ ಟ್ರಿಪ್ ಹೊಡೆಯುತ್ತಿರುವುದು ನಾಚಿಕೆಗೇಡು ಎಂದಿದೆ.




