ಸಿಎಂ ರಾಜಕೀಯ ಸಲಹೆಗಾರರ ಹುದ್ದೆಗೆ ಬಿ.ಆರ್‌.ಪಾಟೀಲ್‌ ರಾಜೀನಾಮೆ

2 years ago

ಬೆಂಗಳೂರು: ಅಚ್ಚರಿಯ ಮತ್ತು ದಿಡೀರ್ ರಾಜಕೀಯ ವಿದ್ಯಮಾನವೊಂದಲ್ಲಿ ಸಿಎಂ ರಾಜಕೀಯ ಸಲಹೆಗಾರರ ಹುದ್ದೆಗೆ ಆಳಂದ ಕ್ಷೇತ್ರದ ಶಾಸಕ ಬಿ.ಆರ್‌.ಪಾಟೀಲ್‌ ರಾಜೀನಾಮೆ ಸಲ್ಲಿಸಿದ್ದಾರೆ.

ಬಿ.ಆರ್‌.ಪಾಟೀಲ್‌ ಸಿಎಂ ಸಿದ್ದರಾಮಯ್ಯನವರ ಹಳೆಯ ಸ್ನೇಹಿತ ಹಾಗೂ ಪರಮಾಪ್ತರಲ್ಲಿ ಒಬ್ಬರು. ಸಚಿವ ಸ್ಥಾನದ ಮೇಲೆ ಕಣ್ಣಿಟ್ಟಿದ್ದ ಅವರಿಗೆ ಪ್ರಿಯಾಂಕ್ ಖರ್ಗೆ ಹಾಗೂ ಶರಣಪ್ರಕಾಶ್‌ ಪಾಟೀಲ್‌ ಕಲಬುರಗಿ ಜಿಲ್ಲೆಯಿಂದ ಅಡ್ಡಲಾಗಿದ್ದರು. ಹೀಗಾಗಿ ಬಿ.ಆರ್‌.ಪಾಟೀಲ್‌ ಹಲವು ಬಾರಿ ಬಹಿರಂಗವಾಗಿ ಹೇಳಿಕೆಗಳನ್ನು ನೀಡುವ ಮೂಲಕ ಸರ್ಕಾರ ಹಾಗೂ ಪಕ್ಷಕ್ಕೆ ಮುಜುಗರ ಉಂಟು ಮಾಡಿದ್ದರು.

ಇವರನ್ನು ಸಮಾಧಾನ ಪಡಿಸಲು ಯತ್ನಿಸಿದ ಸಿದ್ದರಾಮಯ್ಯ, ಬಿ ಆರ್ ಪಾಟೀಲ್ ಅವರನ್ನು ಮುಖ್ಯಮಂತ್ರಿಗಳ ಸಲಹೆಗಾರರನ್ನಾಗಿ ನೇಮಿಸಿ ಸಂಪುಟ ದರ್ಜೆಯ ಸ್ಥಾನಮಾನ ನೀಡಿದ್ದರು. ಆದರೆ ಬಿ.ಆರ್‌.ಪಾಟೀಲ್‌ ರಾಜ್ಯ ಹಾಗೂ ಜಿಲ್ಲಾ ರಾಜಕಾರಣದಿಂದ ಬೇಸತ್ತು ತಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ ಎನ್ನಲಾಗಿದೆ.

Leave a Reply