ಮೈಸೂರು: ಪಂಚಮಸಾಲಿ ಸಮುದಾಯಕ್ಕೆ 2ಎ ಮೀಸಲಾತಿ ನೀಡುವ ವಿಚಾರಕ್ಕೆ ಸಂಬಂಧಿಸಿದಂತೆ ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ಅವರ ವಿರೋಧವಿಲ್ಲ ಎಂದು ರಾಜ್ಯ ಬಿಜೆಪಿ ಉಪಾಧ್ಯಕ್ಷ ಬಿ ವೈ ವಿಜಯೇಂದ್ರ ಹೇಳಿದರು.
ಮೈಸೂರಿನಲ್ಲಿ ಸುದ್ದಿಗಾರರೊಂದಿಗೆ ಪ್ರತಿಕ್ರಿಯೆ ನೀಡಿದ ಅವರು, ಪಂಚಮಸಾಲಿ ಸಮುದಾಯಕ್ಕೆ 2ಎ ಮೀಸಲಾತಿ ವಿಚಾರದಲ್ಲಿ ಬಿ.ಎಸ್.ಯಡಿಯೂರಪ್ಪ ಮತ್ತು ನನ್ನ ಹೆಸರನ್ನ ಎಳೆದು ತರುತ್ತಿದ್ದಾರೆ. ಪಂಚಮಸಾಲಿ ಸಮಾಜದ ವಿರೋಧಿ ಎಂದು ಬಿಂಬಿಸುವ ಯತ್ನ ಮಾಡಲಾಗುತ್ತಿದೆ ಎಂದು ಅಸಮಾಧಾನ ವ್ಯಕ್ತಪಡಿಸಿದರು.
ಯಾರೋ ರಾಜಕೀಯ ಕಾರಣಕ್ಕೆ ಶ್ರೀಗಳ ಮನಸು ಕೆಡಿಸಿದ್ದಾರೆ. ಸ್ವಾಮೀಜಿಗಳಿಗೆ ಇಲ್ಲಸಲ್ಲದ್ದನ್ನು ಹೇಳಿ ದಾರಿತಪ್ಪಿಸುತ್ತಿದ್ದಾರೆ ಎಂದರು.




