ಹುಬ್ಬಳ್ಳಿ: ಉತ್ತರ ಕರ್ನಾಟಕದ ಪ್ರಾದೇಶಿಕ ಅಸಮಾನತೆ ನಿವಾರಣೆಗೆ ಯಾವುದೇ ಕ್ರಮ ಕೈಗೊಳ್ಳದ ಕೇವಲ ಬೆಂಗಳೂರು ಮೈಸೂರು ಭಾಗಕ್ಕೆ ಸೀಮಿತವಾದ ಬಜೆಟ್ ಇದಾಗಿದೆ ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಸಂಸದ ಬಸವರಾಜ ಬೊಮ್ಮಾಯಿ ಆರೋಪಿಸಿದರು.
- ಕೇಂದ್ರ ಸಚಿವ ಸಂಪುಟ ಸಭೆ ಬೇರೆ ರಾಜ್ಯಗಳಲ್ಲಿ ನಡೆಯಲಿ
- ಪಿ.ಪಿ.ಪಿ ಮಾದರಿ ಕೈ ಬಿಡಲು ಒತ್ತಾಯಿಸಿ ಸಚಿವ ಸಂಪುಟ ಸಭೆಗೆ ಮೆರವಣಿಗೆ: ಸಿಪಿಐಎಂ
- ಜನಸಹಭಾಗಿತ್ವದೊಂದಿಗೆ ಸ್ವಚ್ಛತಾ ಅಭಿಯಾನಕ್ಕೆ ಸಜ್ಜು
- UPI ಡಿಜಿಟಲ್ ಮೇಲಿನ ಹೆಚ್ಚುವರಿ ಶುಲ್ಕ ಪ್ರಸ್ತಾವನೆ ಹಿಂಪಡೆಯಬೇಕು
- ಪ್ರಧಾನಿ ನರೇಂದ್ರ ಮೋದಿ ಹುಟ್ಟುಹಬ್ಬ: ಪೌರ ಕಾರ್ಮಿಕರಿಗೆ ಸನ್ಮಾನ
ಹುಬ್ಬಳ್ಳಿಯಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಕಲ್ಯಾಣ ಕರ್ನಾಟಕ ಭಾಗಕ್ಕೆ5 ಸಾವಿರ ಕೋಟಿ ರೂ. ಮೀಸಲಿಟ್ಟಿದ್ದಾರೆ. ಆದರೆ ಖರ್ಚು ಮಾಡಿಲ್ಲ. ಎಸ್ಸಿ ಪಿ ಟಿಎಸ್ ಪಿ ಹಣವನ್ನೂ ಖರ್ಚು ಮಾಡುವುದಿಲ್ಲ. ಕಳೆದ ವರ್ಷ ಆದಾಯ ಸಂಗ್ರಹದಲ್ಲಿ 10 ಸಾವಿರ ಕೋಟಿ ಕಡಿಮೆ ಸಂಗ್ರಹ ಮಾಡಿದ್ದಾರೆ. ಬಂಡವಾಳ ವೆಚ್ಚ ಕೂಡ ಕಡಿಮೆ ಮಾಡಿದ್ದಾರೆ ಎಂದರು.
ಈ ವರ್ಷ ಹಣಕಾಸಿನ ಪರಿಸ್ಥಿತಿ ಸುಧಾರಿಸುವ ಯಾವುದೇ ದಿಟ್ಟ ಕ್ರಮ ಇಲ್ಲ. ಹೀಗಾಗಿ ಹೆಚ್ಚಿನ ಸಾಲ ತೆಗೆದುಕೊಳ್ಳುವುದೇ ಇವರ ಸಾಧನೆಯಾಗಿದೆ. ಈ ಬಜೆಟ್ ಕರ್ನಾಟಕವನ್ನು ಇನ್ನಷ್ಟು ಸಾಲದ ಕೂಪಕ್ಕೆ ನೂಕಿದೆ. ಕರ್ನಾಟಕ ಇನ್ನಷ್ಟು ಆರ್ಥಿಕ ಸಂಕಷ್ಟಕ್ಕೆ ಸಿಲುಕುವ ಕೊಡುಗೆ ಈ ಬಜೆಟ್ ಕೊಟ್ಟಿದೆ. ಹೀಗಾಗಿ ಇದೊಂದು ಜನ ವಿರೋಧಿ ಮತ್ತು ಅಭಿವೃದ್ಧಿ ವಿರೋಧಿ ಬಜೆಟ್ ಇದಾಗಿದೆ ಎಂದರು.
ಉತ್ತರ ಕರ್ನಾಟಕದ ಪ್ರಾದೇಶಿಕ ಅಸಮಾನತೆ ನಿವಾರಣೆಗೆ ಯಾವುದೇ ಯೋಜನೆ ಇಲ್ಲ. ಕಲ್ಯಾಣ ಕರ್ನಾಟಕ ಭಾಗಕ್ಕೆ ಕಳೆದ ವರ್ಷವೂ 5 ಸಾವಿರ ಕೋಟಿ ಕೊಟ್ಟಿದ್ದರು. ಈ ವರ್ಷವೂ ಕೊಟ್ಟಿದ್ದಾರೆ. ಆದರೆ, ಹಣ ಖರ್ಚು ಮಾಡುವುದಿಲ್ಲ. ಕಿತ್ತೂರು ಕರ್ನಾಕಟ ಭಾಗಕ್ಕೆ ಶೂನ್ಯ ಕೊಡುಗೆ ನೀಡಿದ್ದು, ಇದು ಬೆಂಗಳೂರು ಮೈಸೂರು ಭಾಗಕ್ಕೆ ಸೀಮಿತವಾದ ಬಜೆಟ್ ಆಗಿದೆ ಎಂದರು.




