ಮಂಗಳೂರು: ಎಲ್ಲಾ ಧರ್ಮಗಳ ಭೋದನೆಗಳು ಸತ್ಯದ ಹಾದಿಯಲ್ಲಿದ್ದು, ಮನುಷ್ಯ ಕುಲದ ಏಳಿಗೆಗಾಗಿ ಅವುಗಳು ಶ್ರಮಿಸುತ್ತಿವೆಯೇ ಹೊರತು, ಮನುಕುಲದ ನಾಶಕ್ಕಾಗಿ ಅಲ್ಲ ಎಂದು ಸುನ್ನಿ ವಿದ್ವಾಂಸರೂ,SYS ಜಿಲ್ಲಾ ಉಪಾಧ್ಯಕ್ಷರಾದ ಬಹುಮಾನ್ಯ ಬಶೀರ್ ಮದನಿ ಅಭಿಪ್ರಾಯಪಟ್ಟರು.
- ಸಿಎನ್ಎನ್, ಎಂಎಸ್ಎನ್ಬಿಸಿ, ಪಾಲಿಟಿಕೋಗೆ ಶ್ವೇತಭವನ ಪ್ರವೇಶ ನಿಷೇಧಿಸಿದ ಟ್ರಂಪ್
- ಕೆರೆಗಳ ಪುನಶ್ಚೇತನಕ್ಕೆ ₹150 ಕೋಟಿ ವೆಚ್ಚದ ವಿಶ್ವಬ್ಯಾಂಕ್ ಯೋಜನೆ: ಈಶ್ವರ್ ಖಂಡ್ರೆ
- ದಶಕ ಮೀರಿದ ಕಾನೂನು ಹಾದಿ ಮತ್ತು ಉತ್ತರವಿಲ್ಲದ ಪ್ರಶ್ನೆಗಳು
- ಪರಿಸರವನ್ನೂ ಉಳಿಸಬೇಕು, ಮಲೆನಾಡಿನ ರೈತರ ಬದುಕನ್ನೂ ಉಳಿಸಬೇಕು: ಮಧು ಬಂಗಾರಪ್ಪ
- ಗದಗವನ್ನು ಬರಪೀಡಿತ ತಾಲೂಕುಗಳ ಪಟ್ಟಿಗೆ ಸೇರಿಸದಿದ್ದರೆ ಶಾಸಕ ಸ್ಥಾನಕ್ಕೆ ರಾಜೀನಾಮೆ: ಎಚ್ ಕೆ ಪಾಟೀಲ್
ಸಂತ ಮದರ್ ತೆರೇಸಾ ವಿಚಾರ ವೇದಿಕೆ ಹಾಗೂ ದ.ಕ.ಜಿಲ್ಲಾ ಬೀದಿಬದಿ ವ್ಯಾಪಾರಸ್ಥರ ಶ್ರೇಯೋಭಿವ್ರದ್ದಿ ಸಂಘ ಇವುಗಳ ಜಂಟಿ ಆಶ್ರಯದಲ್ಲಿ ಪ್ರೀತಿ ಹರಡಲಿ ಎಲ್ಲೆಡೆ ಎಂಬ ಘೋಷವಾಕ್ಯದೊಂದಿಗೆ,ಸರ್ವ ಧರ್ಮಗಳ ಹಬ್ಬಗಳು ಸರ್ವ ಜನತೆಯ ಹಬ್ಬವಾಗಲಿ ಎಂಬ ಆಶಯದೊಂದಿಗೆ ನಗರದ ಪುರಭವನದಲ್ಲಿ ಜರುಗಿದ ಸೌಹಾರ್ದ ಇಫ್ತಾರ್ ಕೂಟ – 2024 ಕಾರ್ಯಕ್ರಮದಲ್ಲಿ ಮಾತಾಡಿದ ಅವರು, ಕೆಲವೊಂದು ಸ್ಥಾಪಿತ ಹಿತಾಸಕ್ತಿಗಳು ಧರ್ಮವನ್ನು ತನ್ನ ಸ್ವಾರ್ಥಕ್ಕಾಗಿ ದುರ್ಬಳಕೆ ಮಾಡಿ, ಸಮಾಜದಲ್ಲಿ ದ್ವೇಷಪೂರಿತ ವಾತಾವರಣವನ್ನು ಸೃಷ್ಟಿಸಿ ತಮ್ಮ ಬೇಳೆಯನ್ನು ಬೇಯಿಸುತ್ತಿದ್ದಾರೆ. ಸಮಾಜದಲ್ಲಿ ಇಂತಹ ಕಂದಕ ಸೃಷ್ಟಿಸುವವರನ್ನು ಹಿಮ್ಮೆಟ್ಟಿಸಬೇಕಾದರೆ ಸರ್ವ ಧರ್ಮಗಳ ಜನತೆ ಒಂದುಗೂಡುವ ಸೌಹಾರ್ದ ಕಾರ್ಯಕ್ರಮಗಳು ಹೆಚ್ಚೆಚ್ಚು ನಡೆಯುವ ಮೂಲಕ ಸ್ವಾಸ್ಥ್ಯ ಸಮಾಜವನ್ನು ನಿರ್ಮಾಣ ಮಾಡಲು ಸಾಧ್ಯ ಎಂದರು.
CSI ಕರ್ನಾಟಕ ದಕ್ಷಿಣ ಪ್ರಾಂತದ ಧರ್ಮಾಧ್ಯಕ್ಷ ಹೇಮಚಂದ್ರ ಕುಮಾರ್ ಮಾತನಾಡಿ, ಇಫ್ತಾರ್ ಕೂಟವು ನಿಜಕ್ಕೂ ಸೌಹಾರ್ದದ ಸಂದೇಶ ಸಾರುವ ಆಚರಣೆಯಾಗಿದೆ. ಮಾತ್ರವಲ್ಲ ಭಾಂಧವ್ಯದ ಸಂಕೇತವಾಗಿದೆ. ಒಬ್ಬರನ್ನೊಬ್ಬರನ್ನು ಪರಸ್ಪರ ಗೌರವಿಸಲು ಇಂತಹ ವೇದಿಕೆಗಳನ್ನು ಸದ್ಬಳಕೆ ಮಾಡಬೇಕಾಗಿದೆ ಎಂದರು.
ಚಿಂತಕ ಡಾ.ಕೆ.ಪ್ರಕಾಶ್ ಮಾತನಾಡಿ, ಜಗತ್ತಿನ 126 ದೇಶಗಳ ಪೈಕಿ ಭಾರತದ ಹಸಿವಿನ ಸೂಚ್ಯಂಕವು 114ನೇ ಸ್ಥಾನದಲ್ಲಿದೆ. ದೇಶದಲ್ಲಿ ಹಸಿವಿನ ಹೆಚ್ಚಳದ ಜೊತೆಗೆ ಅಸಮಾನತೆಯೂ ಹೆಚ್ಚುತ್ತಿದೆ. ಸೌಹಾರ್ದತೆ ಕಡಿಮೆಯಾಗುತ್ತಿದೆ ಎಂದರು.
ಸಭೆಯ ಅಧ್ಯಕ್ಷತೆಯನ್ನು ಸಂತ ಮದರ್ ತೆರೇಸಾ ವಿಚಾರ ವೇದಿಕೆ ಅಧ್ಯಕ್ಷ ರೋಯ್ ಕ್ಯಾಸ್ಟಲಿನೋ ವಹಿಸಿದ್ದರು. ವೇದಿಕೆಯಲ್ಲಿ ಜಿಲ್ಲಾ ವಕ್ಫ್ ಸಲಹಾ ಸಮಿತಿಯ ಅಧ್ಯಕ್ಷ ಬಿ.ಎ.ನಾಸಿರ್ ಲಕ್ಕಿಸ್ಟಾರ್,ಕೊಂಕಣಿ ಸಾಹಿತ್ಯ ಅಕಾಡೆಮಿ ಅಧ್ಯಕ್ಷ ಸ್ಟಾನಿ ಅಲ್ವಾರೀಸ್, ಬೀದಿಬದಿ ವ್ಯಾಪಾರಸ್ಥರ ಸಂಘದ ಗೌರವಾಧ್ಯಕ್ಷ ಬಿ.ಕೆ.ಇಮ್ತಿಯಾಜ್, ಅಧ್ಯಕ್ಷ ಮಹಮ್ಮದ್ ಮುಸ್ತಾಫ, ಪ್ರಧಾನ ಕಾರ್ಯದರ್ಶಿ ಹರೀಶ್ ಪೂಜಾರಿ ಉಪಸ್ಥಿತರಿದ್ದರು.
ಸಂತ ಮದರ್ ತೆರೇಸಾ ವಿಚಾರ ವೇದಿಕೆಯ ಪ್ರಧಾನ ಕಾರ್ಯದರ್ಶಿ ಸುನಿಲ್ ಕುಮಾರ್ ಬಜಾಲ್ ಪ್ರಾರಂಭದಲ್ಲಿ ಪ್ರಾಸ್ತಾವಿಕ ಮಾತುಗಳನ್ನಾಡಿ ಬಳಿಕ ಕಾರ್ಯಕ್ರಮ ನಿರೂಪಿಸಿದರು.



