ಬೆಂಗಳೂರು: ರಾಜ್ಯದ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರಿಗೆ ಇದೀಗ ಗುಂಡು ನಿರೋಧಕ ಕಾರು ನೀಡಲಾಗಿದೆ. ಅವರ ಭದ್ರತೆಯ ಪ್ರಮಾಣವನ್ನು ಕೂಡ ಹೆಚ್ಚಿಸಲಾಗಿದೆ. ಇದರ ನಡುವೆ ರಾಜ್ಯಪಾಲರು ತಮ್ಮ ಹಲವು ಪೂರ್ವನಿಯೋಜಿತ ಸಾರ್ವಜನಿಕ ಕಾರ್ಯಕ್ರಮಗಳನ್ನು ಕೂಡ ರದ್ದುಗೊಳಿಸಿದ್ದಾರೆ.
- ಬೆಂಗಳೂರಿನಲ್ಲಿ ಕನ್ನಡ ಗಜಲ್ ಯಾತ್ರೆ 100ರ ಸಂಭ್ರಮ
- ನಕಲಿ ದೇಶಪ್ರೇಮಿಗಳ ಆಟ ಇನ್ನೂ ರಾಜ್ಯದಲ್ಲಿ ನಡೆಯಲ್ಲ: ಬಿ ಕೆ ಹರಿಪ್ರಸಾದ್
- ಕಾಂಗ್ರೆಸ್ ಪಕ್ಷಕ್ಕೆ ತಕ್ಕ ಪಾಠ ಕಲಿಸುವುದು ನೂರು ಪರ್ಸೆಂಟ್ ಗ್ಯಾರೆಂಟಿ: ಆರ್ ಅಶೋಕ್
- ದರ್ಶನ್ ಪುಟ್ಟಣ್ಣಯ್ಯ ಅವರಿಗೆ ಸಚಿವ ಸ್ಥಾನ ನೀಡಿ
- ರಾಜಕೀಯ ಸಂತ ಶಾಂತವೇರಿ ಗೋಪಾಲಗೌಡ ಕೃತಿ ಲೋಕಾರ್ಪಣೆ
ಇದು ಯಾಕೆಂದರೆ ರಾಜ್ಯಪಾಲರಿಗೆ ಇದೀಗ ಬೆದರಿಕೆ ಕರೆಗಳು ಬರುತ್ತಿವೆ. ಅಷ್ಟೇ ಅಲ್ಲ ಅವರ ಮೇಲೆ ದಾಳಿಯಾಗಬಹುದು ಎಂಬ ಎಚ್ಚರಿಕೆ ಸಂದೇಶವನ್ನು ಗುಪ್ತದಳ ನೀಡಿದೆ. ಈ ಹಿನ್ನೆಲೆಯಲ್ಲಿ ಅವರ ಭದ್ರತೆ ಹೆಚ್ಚಿಸಲಾಗಿದೆ.
ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ ನಿವೇಶನ ಹಂಚಿಕೆಯಲ್ಲಿ ನಡೆದಿರುವ ಹಗರಣದ ಕುರಿತು ಸಿಎಂ ಸಿದ್ದರಾಮಯ್ಯ ಅವರ ವಿರುದ್ಧ ತನಿಖೆ ನಡೆಸಲು ಅನುಮತಿ ನೀಡಿದ ಬೆನ್ನಲೇ ರಾಜ್ಯದಾದ್ಯಂತ ಕಾಂಗ್ರೆಸ್ ಕಾರ್ಯಕರ್ತರು ಹಾಗೂ ಸಿದ್ದರಾಮಯ್ಯ ಅಭಿಮಾನಿಗಳು ಪ್ರತಿಭಟನೆ ನಡೆಸುತ್ತಿದ್ದಾರೆ.
ಪ್ರತಿಭಟನೆ ಸಮಯದಲ್ಲಿ ಕೆಲವು ನಾಯಕರು ಪ್ರಚೋದನಕಾರಿ ಹೇಳಿಕೆಗಳನ್ನು ನೀಡಿದ್ದು, ಇವುಗಳಿಂದ ರಾಜ್ಯಪಾಲರ ಭದ್ರತೆಯ ಆತಂಕ ಹೆಚ್ಚಾಗಿದೆ.
ರಾಜ್ಯಪಾಲರು ತೆರಳುವ ಮಾರ್ಗದಲ್ಲಿ ಅವರಿಗೆ ಪ್ರತಿಭಟನೆ ಬಿಸಿತಟ್ಟುವ ಸಾಧ್ಯತೆಯಿದೆ ಎಂಬ ಮಾಹಿತಿ ಗುಪ್ತಚರ ಇಲಾಖೆ ಸಿಕ್ಕಿದ್ದು, ಭದ್ರತೆ ಹೆಚ್ಚಿಸಲಾಗಿದೆ. ಅಲ್ಲದೇ ಬುಲೆಟ್ ಪ್ರೂಫ್ ಕಾರು ನೀಡಲಾಗಿದೆ. ಮಧ್ಯಪ್ರದೇಶದಿಂದ ಬಂದ ಬಳಿಕ ಬುಲೆಟ್ ಪ್ರೂಫ್ ಕಾರನ್ನೇ ರಾಜ್ಯಪಾಲರು ಬಳಸುತ್ತಿದ್ದಾರೆ.
ಥಾವರ್ ಚಂದ್ ಗೆಹ್ಲೋಟ್ ಅವರು ರಾಜ್ಯದ ರಾಜ್ಯಪಾಲರಾಗಿ ನೇಮಕವಾದ ಮೇಲೆ ಅವರಿಗೆ ಬುಲೆಟ್ ಪ್ರೂಫ್ ಕಾರು ನೀಡಲಾಗಿತ್ತು. ಅದನ್ನು ಸರ್ಕಾರಕ್ಕೆ ವಾಪಸ್ ನೀಡಿದ್ದ ಅವರು ಇನ್ನೊವಾ ಕಾರಿನಲ್ಲೇ ಸಂಚರಿಸುತ್ತಿದ್ದರು. ಆದರೆ, ತನಿಖೆಗೆ ಅನುಮತಿ ನೀಡಿದ ಬಳಿಕ ಬುಲೆಟ್ ಪ್ರೂಫ್ ಕಾರು ಬಳಕೆ ಮಾಡುತ್ತಿದ್ದಾರೆ ಎಂದು ಮೂಲಗಳಿಂದ ತಿಳಿದುಬಂದಿದೆ.




