ಬೆಂಗಳೂರು: ಪೆಟ್ರೋಲ್, ಡೀಸೆಲ್ ಮತ್ತು ಹಾಲು ಮಾರಾಟ ದರ ಹೆಚ್ಚಳದ ಬೆನ್ನಲ್ಲೇ ಸಾರಿಗೆ ಸಂಸ್ಥೆ ಬಸ್ ಗಳ ಪ್ರಯಾಣ ದರವೂ ಹೆಚ್ಚಳವಾಗಲಿದೆ ಎಂಬ ಚರ್ಚೆ ನಡೆದಿದೆ. ಇಂತಹ ಚರ್ಚೆಯ ನಡುವೆ ರಾಜ್ಯ ಸರ್ಕಾರ ಸಾರಿಗೆ ಸಂಸ್ಥೆಯ ನಿವೃತ್ತ ನೌಕರರಿಗೆ ಬಂಪರ್ ಕೊಡುಗೆ ನೀಡಿದೆ.
- ಹೈಕಮಾಂಡ್ಗೆ ಕೊಡಲು ಹಣವಿದೆ, ರೈತರಿಗೆ ಕೊಡಲು ಹಣವಿಲ್ಲ: ಆರ್.ಅಶೋಕ
- ಯಶವಂತರಾಯಗೌಡ ಪಾಟೀಲ್ ರಾಜೀನಾಮೆ ಕುರಿತು ಡಿ ಕೆ ಶಿವಕುಮಾರ್ ಹೇಳಿದ್ದೇನು?
- ಬರ ಘೋಷಣೆಗಿರುವ ನಿಯಮಗಳನ್ನು ಕೇಂದ್ರ ಸರ್ಕಾರ ಸಡಿಲಿಸಲಿ: ಡಾ. ಜಿ. ಪರಮೇಶ್ವರ್
- ಧನುಷ್ ನಟನೆಯ ‘OM’ ಬಿಡುಗಡೆ ದಿನಾಂಕ ಮುಂದೂಡಿಕೆ!
- ಈ ದೇಶ ಕಟ್ಟಿದ್ದೇ ದಲಿತರು, ನೀಲಿ ಶಾಲು ಬಗ್ಗೆ ಮಾತಾಡೋಕೆ ನೀನ್ಯಾವನೋ?
ಈ ವಿಷಯವಾಗಿ ಸಾರಿಗೆ ಸಚಿವ ರಾಮಲಿಂಗ ರೆಡ್ಡಿ ವಿಶೇಷ ಆಸಕ್ತಿ ವಹಿಸಿ ಕ್ರಮ ಕೈಗೊಂಡ ಪರಿಣಾಮ ರಾಜ್ಯದ ನಾಲ್ಕು ಸಾರಿಗೆ ನಿಗಮಗಳ ನಿವೃತ್ತ ನೌಕರರಿಗೆ ವೇತನ ಪರಿಷ್ಕರಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.
2023ರ ಮಾರ್ಚ್ನಲ್ಲಿ ನಿವೃತ್ತಿಯಾದ ನೌಕರರಿಗೆ ಶೇ.15ರಷ್ಟು ಹೆಚ್ಚುವರಿ ನಿವೃತ್ತಿ ವೇತನ ಇನ್ನು ಮುಂದೆ ಸಿಗಲಿದೆ. 2023ರ ಮಾರ್ಚ್ನಲ್ಲಿ ನಿವೃತ್ತಿ ಹೊಂದಿದ ಅಧಿಕಾರಿ ಮತ್ತು ನೌಕರರಿಗೆ 2019ರ ಡಿಸೆಂಬರ್ 31ರಂದು ಅವರು ಪಡೆಯುತ್ತಿದ್ದ ಮೂಲವೇತನ ಪರಿಗಣಿಸಿ ಶೇ.15ರಷ್ಟು ಹೆಚ್ಚಿಸಿ ವೇತನ ಶ್ರೇಣಿ ಪರಿಷ್ಕರಿಸಲು ಆದೇಶ ಹೊರಡಿಸಲಾಗಿದೆ
ನಿವೃತ್ತಿಯಾದ ನೌಕರರಿಗೆ ವೇತನ ಪರಿಷ್ಕರಣೆಯ ಹೆಚ್ಚಿಸಿದ ಹಣ ನೀಡಲು ನಾಲ್ಕು ಸಾರಿಗೆ ನಿಗಮಗಳಿಗೆ ಅಂದಾಜು 220 ಕೋಟಿ ರೂ. ಅಗತ್ಯವಿದೆ ಎಂದು ಅಂದಾಜಿಸಲಾಗಿದೆ. 2023ರ ಮಾರ್ಚ್ 1ರಂದು ಸಂಸ್ಥೆಯ ಸೇವೆಯಲ್ಲಿದ್ದ ಅಧಿಕಾರಿ ನೌಕರರಿಗೆ 2020ರ ಜನವರಿ 1 ರಿಂದ 2023ರ ಫೆಬ್ರವರಿ 28ರ ಅವಧಿಯನ್ನು ನೋಷನಲ್ ಆಗಿ ಪರಿಗಣಿಸಿ ವೇತನ ನಿಗದಿಪಡಿಬೇಕು. ಈ ವರ್ಷದ ಕೊನೆಯಲ್ಲಿ ನಿವೃತ್ತಿ ನೌಕರರಿಗೆ ವೇತನ ಪಾವತಿಸಬೇಕು ಎಂದು ಆದೇಶದಲ್ಲಿ ತಿಳಿಸಲಾಗಿದೆ.




