ಬೆಂಗಳೂರು: ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ ರಾಜ್ಯಕ್ಕೆ ಪ್ರಥಮ ರ‌್ಯಾಂಕ್ ಪಡೆದ ಬಾಗಲಕೋಟೆ ಜಿಲ್ಲೆಯ ಮುಧೋಳ ತಾಲೂಕಿನ ಮೆಳ್ಳಿಗೇರಿ ಮೊರಾರ್ಜಿ ವಸತಿ ಶಾಲೆಯ ವಿದ್ಯಾರ್ಥಿ ಕುಮಾರಿ ಅಂಕಿತ ಹಾಗೂ ದ್ವಿತೀಯ ರ‌್ಯಾಂಕ್ ಪಡೆದ ಮಂಡ್ಯ ತಾಲೂಕಿನ ತುಂಬಿಗೆರೆ ಮೊರಾರ್ಜಿ ಶಾಲೆಯ ವಿದ್ಯಾರ್ಥಿ ನವನೀತ್ ಕೆ.ಸಿ ಅವರನ್ನು ಸಿಎಂ ಸಿದ್ದರಾಮಯ್ಯ ಸನ್ಮಾನಿಸಿ, ಈ ಇಬ್ಬರು ಮಕ್ಕಳ ಭವಿಷ್ಯ ಉಜ್ವಲವಾಗಲೆಂದು ಶುಭ ಕೋರಿದರು.
- ಜ್ಞಾನೇಶ್ ಕುಮಾರ್ ಅವರನ್ನು ತಕ್ಷಣವೇ ಪದಚ್ಯುತಗೊಳಿಸಿ: ಸಿದ್ದರಾಮಯ್ಯ
- ಸತತ 5 ದಿನ ಬ್ಯಾಂಕ್ಗಳಿಗೆ ಬೀಗ!: ಏನಿರುತ್ತದೆ, ಏನಿಲ್ಲ? ಕಂಪ್ಲೀಟ್ ಡೀಟೈಲ್ಸ್!
- 814 ಉಪನ್ಯಾಸಕರ ನೇಮಕಾತಿಯಲ್ಲಿ ಉರ್ದುಗೆ ಸ್ಥಾನ ಎಲ್ಲಿದೆ?
- ಸಾಲ ಮನ್ನಾ ಮಾಡಿ ರೈತರ ಹಿತ ಕಾಪಾಡಿದ್ದ ಡಾ.ಮನಮೋಹನ್ ಸಿಂಗ್
- ರಾಜ್ಯದ ಅಭಿವೃದ್ಧಿಗೆ ಆರ್.ಅಶೋಕ್ ಅಡ್ಡಗಾಲು: ಕೆಪಿಸಿಸಿ

ಇದೇ ವೇಳೆ ಅಮೋಘ ಸಾಧನೆ ಮಾಡಿದ ಈ ವಿದ್ಯಾರ್ಥಿಗಳ ಮುಂದಿನ ವಿಧ್ಯಾಭ್ಯಾಸಕ್ಕೆ ಅನುಕೂಲವಾಗಲಿ ಎಂದು ಅಂಕಿತಾಗೆ 5 ಲಕ್ಷ ರೂ. ಹಾಗೂ ನವನೀತ್ ಗೆ 3 ಲಕ್ಷ ರೂ.ಗಳ ನೆರವನ್ನು ನೀಡಿದರು.

ಜೊತೆಗೆ, ಗ್ರಾಮೀಣ ಮಕ್ಕಳು ಇನ್ನಷ್ಟು ಶೈಕ್ಷಣಿಕ ಸಾಧನೆಗಳನ್ನು ಮಾಡುವಂತಾಗಲಿ, ಈ ಮಕ್ಕಳು ಓದಿದ ಶಾಲೆ ಮತ್ತಷ್ಟು ಸರ್ಕಾರಿ ಶಾಲೆಗಳಿಗೆ ಸ್ಪೂರ್ತಿಯಾಗಲಿ ಎಂದು ಅಂಕಿತಾ ಓದಿದ ಶಾಲೆಯ ಅಭಿವೃದ್ಧಿಗೆ ಒಂದು ಕೋಟಿ ರೂ. ಹಾಗೂ ನವನೀತ್ ವ್ಯಾಸಂಗ ಮಾಡಿದ ಶಾಲೆಯ ಅಭಿವೃದ್ಧಿಗೆ 50 ಲಕ್ಷ ರೂ.ಗಳ ಅನುದಾನ ನೀಡಲಾಗುವುದು ಎಂದು ಘೋಷಿಸಿದರು.





