ಬೆಂಗಳೂರು: ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯ ಕಂಡಕ್ಟರ್ ಮರಾಠಿಯಲ್ಲಿ ಮಾತನಾಡಲಿಲ್ಲ ಎಂಬ ಕಾರಣಕ್ಕೆ ಎಂಇಎಸ್ ಕಾರ್ಯಕರ್ತರಿಂದ ಹಲ್ಲೆ ನಡೆದ ಕಾರಣಕ್ಕೆ ಸ್ಥಗಿತಗೊಂಡಿರುವ ಮಹಾರಾಷ್ಟ್ರ ಮತ್ತು ಕರ್ನಾಟಕ ನಡುವಿನ ಬಸ್ ಸಂಚಾರ ಪುನರಾರಂಭಗೊಳ್ಳಲಿದೆ.
- ಮಹಿಳೆಯರಿಗೆ ಶೇ.33ರಷ್ಟು ಮೀಸಲಾತಿ ಮಸೂದೆ ಅಂಗೀಕಾರವಾಗಿದೆ
- ಮಹಿಳಾ ಮೀಸಲಾತಿ ವಿಷಯದಲ್ಲಿ ಮೋದಿ ಸರ್ಕಾರದಿಂದ ಮಹಿಳೆಯರಿಗೆ ದ್ರೋಹ: ಸಿದ್ದರಾಮಯ್ಯ
- ಕಾಂಗ್ರೆಸ್ಗೆ ಮಹಿಳಾ ಮೀಸಲಾತಿ ಬೇಕಿಲ್ಲ ಎಂಬುದು ಸ್ಪಷ್ಟ: ಬಸವರಾಜ ಬೊಮ್ಮಾಯಿ
- ಸಾರ್ವಜನಿಕ ಆರೋಗ್ಯ ವ್ಯವಸ್ಥೆ ಎಷ್ಟು ಹದಗೆಟ್ಟಿದೆ ಎನ್ನುವುದಕ್ಕೆ ಕನ್ನಡಿ: ಆರ್ ಅಶೋಕ್
- ನಮ್ಮ ಪ್ರತಿಭೆಗಳು ದೆಹಲಿಯಲ್ಲಿ ನಿರ್ಣಾಯಕ ಪಾತ್ರ ವಹಿಸುತ್ತಿರುವುದು ಸಂತಸದ ವಿಷಯ: ಕೆ.ಸುಧಾಕರ್
ಘಟನೆಯ ನಂತರ ಉಭಯ ರಾಜ್ಯಗಳ ನಡುವೆ ಉಂಟಾಗಿರುವ ಉದ್ವಿಗ್ನ ಪರಿಸ್ಥಿತಿ ತಿಳಿಗೊಳಿಸುವ ಕುರಿತಂತೆ ಸಿ ಎಂ ಸಿದ್ದರಾಮಯ್ಯ ಅವರ ಸಲಹೆ ಮೇರೆಗೆ ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ, ಶಾಲಿನಿ ರಜನೀಶ್ ಮಹಾರಾಷ್ಟ್ರ ಸರ್ಕಾರದ ಮುಖ್ಯ ಕಾರ್ಯದರ್ಶಿ ಜೊತೆ ಮಾತುಕತೆ ನಡೆಸಿದರು.
ಉಭಯ ರಾಜ್ಯಗಳ ನಡುವೆ ಉಂಟಾಗಿರುವ ಬಿಕ್ಕಟ್ಟು ಸರಿಪಡಿಸುವ ನಿಟ್ಟಿನಲ್ಲಿ ಇಬ್ಬರು ಅಧಿಕಾರಿಗಳು ಮೊದಲ ಹಂತದ ಮಾತುಕತೆ ನಡೆಸಿದರು. ನಂತರ ಪ್ರತ್ಯೇಕವಾಗಿ ಎರಡೂ ರಾಜ್ಯಗಳ ಕಾನೂನು ವ್ಯವಸ್ಥೆ ಕುರಿತಂತೆ ಪೊಲೀಸ್ ಮಹಾ ನಿರ್ದೇಶಕರು ಮತ್ತು ಗೃಹ ಇಲಾಖೆ ಪ್ರಧಾನ ಕಾರ್ಯದರ್ಶಿಗಳ ಜೊತೆ ಸಮಾಲೋಚನೆ ನಡೆಸಿ ನಂತರ ಒಂದು ತೀರ್ಮಾನಕ್ಕೆ ಬಂದಿದ್ದಾರೆ.
ಬಳಿಕ ಉಭಯ ಅಧಿಕಾರಿಗಳು ತಮ್ಮ ರಾಜ್ಯದ ಮುಖ್ಯಮಂತ್ರಿಗಳ ಜೊತೆ ಮಾತುಕತೆ ನಡೆಸಿ, ಇದೀಗ ಎರಡೂ ರಾಜ್ಯಗಳ ನಡುವೆ ಎಂದಿನಂತೆ ಬಸ್ ಸಂಚಾರ ಪುನರಾರಂಭ ಮಾಡಲು ತೀರ್ಮಾನಿಸಿದ್ದಾರೆ.
ಬಸ್ ಸಂಚಾರದ ವೇಳೆ ಕರ್ನಾಟಕದ ಗಡಿಯಲ್ಲಿ ಮಹಾರಾಷ್ಟ್ರದ ಬಸ್ಸು ಗಳಿಗೆ ಪ್ರಯಾಣಿಕರಿಗೆ ಮತ್ತು ಸಿಬ್ಬಂದಿಗೆ ಕರ್ನಾಟಕ ಸರ್ಕಾರ ಭದ್ರತೆ ನೀಡಬೇಕು. ಅದರಂತೆ ಮಹಾರಾಷ್ಟ್ರ ಗಡಿಯಲ್ಲಿ ಅಲ್ಲಿನ ಸರ್ಕಾರ ಕರ್ನಾಟಕದ ಬಸ್ಸುಗಳು ಸಿಬ್ಬಂದಿ ಮತ್ತು ಪ್ರಯಾಣಿಕರಿಗೆ ಭದ್ರತೆ ನೀಡುವ ತೀರ್ಮಾನಕ್ಕೆ ಬಂದಿದ್ದಾರೆ.
ಘಟನೆಯಿಂದ ಉಭಯ ರಾಜ್ಯಗಳ ಗಡಿಯಲ್ಲಿ ಉಂಟಾಗಿರುವ ಪರಿಸ್ಥಿತಿ ತಿಳಿಯಾಗುವವರೆಗೆ ಎರಡು ರಾಜ್ಯಗಳ ಗಡಿಯಲ್ಲಿಭದ್ರತೆ ಹೆಚ್ಚಿಸಿಕೊಳ್ಳಲು ಇಬ್ಬರೂ ಪೊಲೀಸ್ ವರಿಷ್ಠಾಧಿಕಾರಿಗಳು ಒಪ್ಪಿಕೊಂಡಿದ್ದಾರೆ.
ಈ ಹಿನ್ನೆಲೆಯಲ್ಲಿ ಕರ್ನಾಟಕ ಗಡಿಯಿಂದ ರಾಜ್ಯ ರಸ್ತೆ ಸಾರಿಗೆ ಸಂಸ್ಥೆ ಬಸ್ ಮಹಾರಾಷ್ಟ್ರಕ್ಕೆ ತೆರಳಲಿದೆ. ಅದೇ ರೀತಿ ಮಹಾರಾಷ್ಟ್ರ ಗಡಿಯಿಂದ ಮಹಾರಾಷ್ಟ್ರ ಬಸ್ ಕರ್ನಾಟಕದತ್ತ ಪ್ರಯಾಣ ಬೆಳೆಸಲಿದೆ. ಪುನಃ ಬಸ್ ಸೇವೆ ಆರಂಭಿಸಲು ಎಲ್ಲ ವ್ಯವಸ್ಥೆ ಮಾಡಿದ್ದೇವೆ ಎಂದರು.
ಕರ್ನಾಟಕದ ಬೆಳಗಾವಿ ಮಾತ್ರವಲ್ಲದೆ ಬೀದರ್, ವಿಜಯಪುರ, ಚಿತ್ರದುರ್ಗ, ಬೆಂಗಳೂರು ಸೇರಿದಂತೆ ಎಲ್ಲೆಲ್ಲಿ ಅಹಿತಕರ ಘಟನೆ ನಡೆದಿದೆಯೋ ಅಲ್ಲಿ ಎಲ್ಲ ಕಡೆ ಭದ್ರತೆ ಹೆಚ್ಚಿಸಲು ಸೂಚಿಸಲಾಗಿದೆ. ಅದೇ ರೀತಿ ಮಹಾರಾಷ್ಟ್ರದ ಕೊಲ್ಹಾಪುರ ಅಷ್ಟೇ ಅಲ್ಲದೇ ಸಾಂಗಲಿ, ಸೊಲ್ಲಾಪುರ ಸೇರಿ ಎಲ್ಲೆಲ್ಲಿ ಅಹಿತಕರ ಘಟನೆಗಳು ಸಂಭವಿಸಿವೆಯೋ ಅಲ್ಲೆಲ್ಲಾ ಸೂಕ್ತ ಬಂದೋಬಸ್ತ್ ನೀಡಬೇಕು ಎಂಬ ನಿರ್ಧಾರಕ್ಕೆ ಬರಲಾಗಿದೆ.




