ಖರೀದಿದಾರರು ಸರಕು ಮತ್ತು ಸೇವಾ ತೆರಿಗೆ ಪಾವತಿಸುವುದು ಕಡ್ಡಾಯ: ಹೈಕೋರ್ಟ್

2 years ago

ಬೆಂಗಳೂರು: ವಸತಿ ಸಂಕೀರ್ಣದ ಕಟ್ಟಡ ನಿರ್ಮಾಣಕ್ಕೂ ಮುನ್ನ ನಿವೇಶನ ಕಾಯ್ದಿರಿಸಿದ್ದರೆ ಅಂತಹ ಸಮಯದಲ್ಲಿ ಖರೀದಿದಾರರು ಸರಕು ಮತ್ತು ಸೇವಾ ತೆರಿಗೆ (ಜಿಎಸ್‌ಟಿ) ಪಾವತಿಸುವುದು ಕಡ್ಡಾಯ ಎಂದು ಹೈಕೋರ್ಟ್‌ ಆದೇಶಿಸಿದೆ.

ಕೇಂದ್ರ, ಸರಕು ಮತ್ತು ಸೇವಾ ತೆರಿಗೆ ಕಾಯ್ದೆ-2017ರ (ಸಿಜಿಎಸ್‌ಟಿ) ಅನ್ವಯ ಫ್ಲ್ಯಾಟ್‌ ನೋಂದಣಿಗೂ ಮುನ್ನ ಜಿಎಸ್‌ಟಿ ಪಾವತಿಸಬೇಕು ಎಂದು ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರ (ಬಿಡಿಎ) ನೀಡಿದ್ದ ನೋಟಿಸ್‌ ಪ್ರಶ್ನಿಸಿ ಮಲ್ಲತ್ತಹಳ್ಳಿಯ ಬಿ.ಜಿ.ಪರಮೇಶ್ವರ ಸೇರಿದಂತೆ ಇತರರು ಸಲ್ಲಿಸಿದ್ದ ರಿಟ್ ಅರ್ಜಿಗಳನ್ನು ವಜಾಗೊಳಿಸಿರುವ ನ್ಯಾಯಮೂರ್ತಿ ಎಂ.ಜಿ.ಎಸ್.ಕಮಲ್‌ ಅವರಿದ್ದ ಏಕಸದಸ್ಯ ನ್ಯಾಯಪೀಠ ಆದೇಶಿಸಿದೆ.

ಕಟ್ಟಡದ ಸಿಸಿ (ಕಂಪ್ಲೀಶನ್‌ ಸರ್ಟಿಫಿಕೇಟ್‌-ಪೂರ್ಣತಾ ಪ್ರಮಾಣ ಪತ್ರ) ವಿತರಣೆಗೂ ಮುನ್ನ ಭಾಗಶಃ ಅಥವಾ ಪೂರ್ಣ ಹಣ ಪಾವತಿಸಿದ್ದರೆ ಅದು ಸೇವೆಯಾಗಲಿದೆ. ಹಾಗಾಗಿ, ಅದಕ್ಕೆ ಜಿಎಸ್‌ಟಿ ಅನ್ವಯವಾಗುತ್ತದೆ ಎಂದಿದೆ.

ಸುಪ್ರೀಂ ಕೋರ್ಟ್‌ನ ಹಲವು ತೀರ್ಪುಗಳನ್ನು ಉಲ್ಲೇಖಿಸಿರುವ ನ್ಯಾಯಪೀಠ, ಸಿಜಿಎಸ್‌ಟಿ ನಿಬಂಧನೆ ಅನುಸಾರ ಕಟ್ಟಡದ ನಿರ್ಮಾಣ ಕಾರ್ಯ ಪೂರ್ಣಗೊಳ್ಳುವ ಮೊದಲೇ ಒಪ್ಪಂದ ಮಾಡಿಕೊಂಡರೆ ಅದು ಕೆಲಸದ ಒಪ್ಪಂದ ಎನಿಸುತ್ತದೆ. ಅದಕ್ಕೆ ನಿರ್ದಿಷ್ಟ ದರದಲ್ಲಿ ಸೇವಾ ತೆರಿಗೆ ಪಾವತಿಸಲೇಬೇಕಾಗುತ್ತದೆ ಎಂದಿದೆ.

Leave a Reply