ದಾವಣಗೆರೆ: ರಾಜ್ಯ ಚುನಾವಣಾ ಆಯೋಗದ ನಿರ್ದೇಶನದಂತೆ ಖಾಲಿ ಇರುವ ಗ್ರಾಮ ಪಂಚಾಯಿತಿ ಸದಸ್ಯ ಸ್ಥಾನಗಳಿಗೆ ನವೆಂಬರ್ 23ರಂದು ಮತದಾನ ನಡೆಯಲಿದೆ. ಉಪಚುನಾವಣೆ ನಡೆಯುವ ಗ್ರಾಮ ಪಂಚಾಯಿತಿಗಳ ವ್ಯಾಪ್ತಿಯಲ್ಲಿ ನಡೆಯುವ ಸಂತೆ, ಜಾತ್ರೆಗಳನ್ನು ನಿಷೇಧಿಸಿ ಜಿಲ್ಲಾ ದಂಡಾಧಿಕಾರಿ ಜಿ.ಎಂ.ಗಂಗಾಧರಸ್ವಾಮಿ ಆದೇಶಿಸಿದ್ದಾರೆ.
- ಗದಗವನ್ನು ಬರಪೀಡಿತ ತಾಲೂಕುಗಳ ಪಟ್ಟಿಗೆ ಸೇರಿಸದಿದ್ದರೆ ಶಾಸಕ ಸ್ಥಾನಕ್ಕೆ ರಾಜೀನಾಮೆ: ಎಚ್ ಕೆ ಪಾಟೀಲ್
- ತುಳು ರಾಜ್ಯದ ಎರಡನೇ ಹೆಚ್ಚುವರಿ ಅಧಿಕೃತ ಭಾಷೆಯಾಗಿ ಮಾನ್ಯತೆ: ಸಿದ್ದರಾಮಯ್ಯ
- ಪೆರಿಯಾರ್ ಆಗ್ನೇಯ ಏಷ್ಯಾದ ಸಾಕ್ರೆಟಿಸ್: ಎ.ಜಿ.ಕಾಂಬಳೆ
- ಕೇಂದ್ರ ಸಚಿವ ಸಂಪುಟ ಸಭೆ ಬೇರೆ ರಾಜ್ಯಗಳಲ್ಲಿ ನಡೆಯಲಿ
- ಪಿ.ಪಿ.ಪಿ ಮಾದರಿ ಕೈ ಬಿಡಲು ಒತ್ತಾಯಿಸಿ ಸಚಿವ ಸಂಪುಟ ಸಭೆಗೆ ಮೆರವಣಿಗೆ: ಸಿಪಿಐಎಂ
ನ್ಯಾಮತಿ ತಾಲ್ಲೂಕಿನ ಚಿನ್ನಿಕಟ್ಟಿ, ಹರಿಹರ ತಾಲ್ಲೂಕಿನ ಸಾರಥಿ, ಉಕ್ಕಡಗಾತ್ರಿ, ದಾವಣಗೆರೆ ತಾಲ್ಲೂಕಿನ ಗೋಪನಾಳ, ಹೆಬ್ಬಾಳು, ಚನ್ನಗಿರಿ ತಾಲ್ಲೂಕಿನ ಕೆರೆಬಿಳಚಿ, ತಣಿಗೆರೆ, ಬೆಳ್ಳಗನೂರು, ಸಂತೆಬೆನ್ನೂರು, ಜಗಳೂರು ತಾಲ್ಲೂಕಿನ ಹನುಮಂತಾಪುರ, ಬಸವನಕೋಟೆ, ಹೊನ್ನಾಳಿ ತಾಲ್ಲೂಕಿನ ಕುಂದೂರು ಗ್ರಾಮ ಪಂಚಾಯಿತಿಗಳಲ್ಲಿ ನವೆಂಬರ್ 23ರಂದು ನಡೆಯುವ ಸಂತೆ, ಜಾತ್ರೆಯನ್ನು ನಿಷೇಧಿಸಲಾಗಿದೆ.




