ಬೆಂಗಳೂರು: ರಾಜ್ಯ ಹಿಂದುಳಿದ ವರ್ಗಗಳ ಆಯೋಗದ ವತಿಯಿಂದ ಕರ್ನಾಟಕ ರಾಜ್ಯದ ನಾಗರಿಕರ ಸಾಮಾಜಿಕ ಮತ್ತು ಶೈಕ್ಷಣಿಕ ಸ್ಥಿತಿಗಳ ಬಗ್ಗೆ ಸಮೀಕ್ಷೆಯನ್ನು ಕೈಗೊಳ್ಳಲು ಸಚಿವ ಸಂಪುಟ ನಿರ್ಧರಿಸಿದೆ.
- ಬಸವಣ್ಣನವರ ವಚನಗಳು ವಿಶ್ವವಿದ್ಯಾಲಯಗಳು ಹೇಳಿಕೊಡುವ ಪಾಠಕ್ಕಿಂತ ಕಡಿಮೆಯಲ್ಲ: ಸಾಜೀದ್ ಮುಲ್ಲಾ
- ಮಹಿಳೆಯರಿಗೆ ಶೇ.33ರಷ್ಟು ಮೀಸಲಾತಿ ಮಸೂದೆ ಅಂಗೀಕಾರವಾಗಿದೆ
- ಮಹಿಳಾ ಮೀಸಲಾತಿ ವಿಷಯದಲ್ಲಿ ಮೋದಿ ಸರ್ಕಾರದಿಂದ ಮಹಿಳೆಯರಿಗೆ ದ್ರೋಹ: ಸಿದ್ದರಾಮಯ್ಯ
- ಕಾಂಗ್ರೆಸ್ಗೆ ಮಹಿಳಾ ಮೀಸಲಾತಿ ಬೇಕಿಲ್ಲ ಎಂಬುದು ಸ್ಪಷ್ಟ: ಬಸವರಾಜ ಬೊಮ್ಮಾಯಿ
- ಸಾರ್ವಜನಿಕ ಆರೋಗ್ಯ ವ್ಯವಸ್ಥೆ ಎಷ್ಟು ಹದಗೆಟ್ಟಿದೆ ಎನ್ನುವುದಕ್ಕೆ ಕನ್ನಡಿ: ಆರ್ ಅಶೋಕ್
ಸಮೀಕ್ಷೆಯನ್ನು ಡಿಜಿಟಲ್ ವ್ಯವಸ್ಥೆ ಮೂಲಕ ಕೈಗೊಳ್ಳುವುದು ಮತ್ತು ಸಮೀಕ್ಷೆಯನ್ನು ಡಿಜಿಟಲ್ ವಿಧಾನದಲ್ಲಿ ಮಾಡಲು ತಂತ್ರಾಂಶದ ಅಭಿವೃದ್ಧಿ ಮತ್ತು ಉಸ್ತುವಾರಿಯನ್ನು ಇ-ಆಡಳಿತ ಇಲಾಖೆ ಮೂಲಕ ಕೈಗೊಳ್ಳಲು; ಹಾಗೂ ಸಮೀಕ್ಷೆಯಲ್ಲಿ ನಮೂದಿಸಲಾಗುವ 6 ವರ್ಷ ಮೇಲ್ಪಟ್ಟ ಪ್ರತಿ ವ್ಯಕ್ತಿಯ ಆಧಾರ್ ದೃಢೀಕರಣವನ್ನು ಕಡ್ಡಾಯಗೊಳಿಸಲು ನಿರ್ಧರಿಸಲಾಗಿದೆ ಎಂದು ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಎಚ್ ಕೆ ಪಾಟೀಲ್ ತಿಳಿಸಿದರು.
ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ನಡೆದ ಸಚಿವ ಸಂಪುಟ ಸಭೆ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನ್ಯಾ.ನಾಗಮೋಹನ್ದಾಸ್ ಅವರ ನೇತೃತ್ವದಲ್ಲಿ ಒಳಮೀಸಲಾತಿಗೆ ಸಂಬಂಧಿಸಿದಂತೆ ಪರಿಶಿಷ್ಟ ಜಾತಿ ಸಮೀಕ್ಷೆಗೆ ಸಾರ್ವಜನಿಕವಾಗಿ ಲಭ್ಯವಿರುವ ಚುನಾವಣಾ ಮತದಾರರ ಪಟ್ಟಿಯನ್ನು ಉಪಯೋಗಿಸಿರುತ್ತಾರೆ. ಅದೇ ರೀತಿಯಾಗಿ ಹಿಂದುಳಿದ ವರ್ಗಗಳ ಆಯೋಗವು ನಡೆಸುವ ಸಮೀಕ್ಷೆಗೆ ಸಾರ್ವಜನಿಕವಾಗಿ ಲಭ್ಯವಿರುವ ಚುನಾವಣಾ ಮತದಾರರ ಪಟ್ಟಿಯನ್ನು ಉಪಯೋಗಿಸಿಕೊಂಡು ಸಮೀಕ್ಷಾ ಕಾರ್ಯವನ್ನು ಕೈಗೊಳ್ಳಲು ಮತ್ತು ಸಮೀಕ್ಷಾ ಕಾರ್ಯವನ್ನು ಯಶಸ್ವಿಯಾಗಿ ಪೂರ್ಣಗೊಳಿಸಲು ಆಯೋಗದ ಮೇಲುಸ್ತುವಾರಿಯಲ್ಲಿ ಅಗತ್ಯವಿರುವ ಅಧಿಕಾರಿಗಳು, ಶಿಕ್ಷಕರು ಹಾಗೂ ಇತರೆ ಸಿಬ್ಬಂದಿಗಳು ಕೆಲಸ ಮಾಡುವರು ಎಂದರು.
ಅನುಮೋದನೆ: ಇದಲ್ಲದೆ ಹಲವು ಕಾನೂನುಗಳಿಗೆ ಸಂಪುಟ ಸಭೆ ಅನುಮೋದನೆ ನೀಡಿದ್ದು ಅವುಗಳನ್ನು ಮುಂಬರುವ ವಿಧಾನಮಂಡಲದ ಅಧಿವೇಶನದಲ್ಲಿ ಮಂಡಿಸಲಾಗುವುದು ಎಂದರು.
ಕರ್ನಾಟಕ ಸೌಹಾರ್ದ ಸಹಕಾರಿ (ತಿದ್ದುಪಡಿ) ವಿಧೇಯಕ, 2025”ಕ್ಕೆ ಅನುಮೋದನೆ, ಕರ್ನಾಟಕ ವಿಧಾನ ಮಂಡಲದ ಉಭಯ ಸದನಗಳ ಅನುಮೋದನೆ ಪಡೆದು, ರಾಜ್ಯಪಾಲರ ಒಪ್ಪಿಗೆಗೆ ಸಲ್ಲಿಸಿ, ರಾಜ್ಯಪಾಲರ ಅವಲೋಕನಗೊಳಗಾಗಿ ಹಿಂದಿರುಗಿಸಲ್ಪಟ್ಟ ಕರ್ನಾಟಕ ಸೌಹಾರ್ದ ಸಹಕಾರಿ (ತಿದ್ದುಪಡಿ) ವಿಧೇಯಕ 2024”ನ್ನು ಹಿಂಪಡೆಯಲು; ಮತ್ತು ಕರ್ನಾಟಕ ಸೌಹಾರ್ದ ಸಹಕಾರಿ (ತಿದ್ದುಪಡಿ) ವಿಧೇಯಕ 2025”ಕ್ಕೆ ಸಚಿವ ಸಂಪುಟ ಅನುಮೋದನೆ ನೀಡಿದೆ ಎಂದರು.
ವಿಧಾನಮಂಡಲದ ಅಧಿವೇಶನದಲ್ಲಿ ಮಂಡಿಸಲಾಗುವ ಮಸೂದೆಗಳು:
ಕರ್ನಾಟಕ ಅಪರಾಧ ಮುಕ್ತಗೊಳಿಸುವಿಕೆ (ಉಪಬಂಧಗಳ ತಿದ್ದುಪಡಿ) ವಿಧೇಯಕ, 2025
ಕರ್ನಾಟಕ ಸರಕು ಮತ್ತು ಸೇವೆಗಳ ತೆರಿಗೆ (ತಿದ್ದುಪಡಿ) ವಿಧೇಯಕ
ನೋಂದಣಿ (ಕರ್ನಾಟಕ ತಿದ್ದುಪಡಿ) ವಿಧೇಯಕ 2025
ಕರ್ನಾಟಕ ಪ್ರವಾಸೋದ್ಯಮ ವ್ಯಾಪಾರ (ಅನುಕೂಲತೆ ಮತ್ತು ನಿಯಂತ್ರನಾ (ತಿದ್ದುಪಡಿ), ವಿಧೇಯಕ 2025
ಕರ್ನಾಟಕ ಸೌಹಾರ್ದ (ತಿದ್ದುಪಡಿ) ವಿಧೇಯಕ
ಕರ್ನಾಟಕ ಸಹಕಾರ (ತಿದ್ದುಪಡಿ) ವಿಧೇಯಕ
ಕರ್ನಾಟಕ ಬಂದರು (ಲ್ಯಾಂಡಿಂಗ್ & ಶಿಪ್ಪಿಂಗ್ ಫೀಸ್ (ತಿದ್ದುಪಡಿ) ವಿಧೇಯಕ, 2025
ಕರ್ನಾಟಕ ಸರ್ಕಾರಿ ವ್ಯಾಜ್ಯ ನಿರ್ವಹಣೆ (ತಿದ್ದುಪಡಿ) ವಿಧೇಯಕ, 2025
ಕರ್ನಾಟಕ ಭೂ ಸುಧಾರಣೆಗಳು ಮತ್ತು ಇತರೆ ಕಾನೂನು (ತಿದ್ದುಪಡಿ) ವಿಧೇಯಕ, 2025
ಕರ್ನಾಟಕ ನಗರಪಾಲಿಕೆಗಳ (ತಿದ್ದುಪಡಿ) , 2025
ಗ್ರೇಟರ್ ಬೆಂಗಳೂರು ಆಡಳಿತ (ತಿದ್ದುಪಡಿ) ವಿಧೇಯಕ, 2025
ಕರ್ನಾಟಕ ಅತ್ಯಾವಶ್ಯಕ ಸೇವೆಗಳ ನಿರ್ವಹಣಾ (ತಿದ್ದುಪಡಿ) ವಿಧೇಯಕ, 2025
ಕರ್ನಾಟಕ ಪುರಸಭೆಗಳ ಹಾಗೂ ಇತರೆ ಕಾನೂನುಗಳ (ತಿದ್ದುಪಡಿ) ವಿಧೇಯಕ 2025
ಕರ್ನಾಟಕ ಸೌಹಾರ್ದ (ತಿದ್ದುಪಡಿ) ವಿಧೇಯಕ
ಕರ್ನಾಟಕ ಸಹಕಾರ (ತಿದ್ದುಪಡಿ) ವಿಧೇಯಕ
ಕರ್ನಾಟಕ ಬಂದರು (ಲ್ಯಾಂಡಿಂಗ್ & ಶಿಪ್ಪಿಂಗ್ ಫೀಸ್ (ತಿದ್ದುಪಡಿ) ವಿಧೇಯಕ, 2025
ಕರ್ನಾಟಕ ಸರ್ಕಾರಿ ವ್ಯಾಜ್ಯ ನಿರ್ವಹಣೆ (ತಿದ್ದುಪಡಿ) ವಿಧೇಯಕ, 2025
ಕರ್ನಾಟಕ ಭೂ ಸುಧಾರಣೆಗಳು ಮತ್ತು ಇತರೆ ಕಾನೂನು (ತಿದ್ದುಪಡಿ) ವಿಧೇಯಕ, 2025
ಕರ್ನಾಟಕ ದೇವದಾಸಿ ಪದ್ಮತಿ (ತಡೆಗಟ್ಟುವಿಕೆ, ನಿಷೇಧ, ಪರಿಹಾರ ಮತ್ತು ಪುನರ್ವಸತಿ) ವಿಧೇಯಕ, 2025
ಕರ್ನಾಟಕ ನಾಗರೀಕ ಸೇವಾ ಸಾಮಾನ್ಯ ನೇಮಕಾತಿ ತಿದ್ದುಪಡಿ ನಿಯಮಗಳು 2025
ಕರ್ನಾಟಕ ರೋಹಿತ್ ವೇಮುಲಾ(ಹೊರಗಿಡುವಿಕೆ- ಅನ್ಯಾಯ ತಡೆಗಟ್ಟುವಿಕೆ) ಶಿಕ್ಷಣ ಮತ್ತು ಘನತೆಯ ಹಕ್ಕು ವಿಧೇಯಕ 2025
ಕರ್ನಾಟಕ ಅಂತರ್ಜಲ ಅಭಿವೃದ್ಧಿ ಮತ್ತು ನಿರ್ವಹಣೆ ನಿಯಂತ್ರಣ ತಿದ್ದುಪಡಿ ವಿಧೇಯಕ 2025
ಕರ್ನಾಟಕ ನಗರ ಮತ್ತು ಗ್ರಾಮಾಂತರ ಯೋಜನೆ ಹಾಗೂ ಇತರೇ ಸಂಬಂಧಿತ ನಿಯಮಗಳು ತಿದ್ದುಪಡಿ ವಿಧೇಯಕ 2025
ಗದಗ ಬೆಟಗೇರಿ ವಾಣಿಜ್ಯ ಸಾಂಸ್ಕೃತಿಕ ಮತ್ತು ಪ್ರದರ್ಶನ ಪ್ರಾಧಿಕಾರ ತಿದ್ದುಪಡಿ ವಿಧೇಯಕ 2025
ಕರ್ನಾಟಕ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ತಿದ್ದುಪಡಿ ನಿಯಮಗಳು 2025




