ಬೆಂಗಳೂರು: ಜಾತಿ ದೌರ್ಜನ್ಯಕ್ಕೊಳಗಾಗಿ ಮೃತಪಟ್ಟ ಪರಿಶಿಷ್ಟ ಜಾತಿ ಮತ್ತು ವರ್ಗಕ್ಕೆ ಸೇರಿದ ವ್ಯಕ್ತಿಗಳ ಕುಟುಂಬ ಸದಸ್ಯರಿಗೆ ಅನುಕಂಪದ ಆಧಾರದ ಮೇಲೆ ಸರ್ಕಾರಿ ಉದ್ಯೋಗ ನೀಡಲು ಸಚಿವ ಸಂಪುಟ ತೀರ್ಮಾನಿಸಿದೆ.
- Modi is confident that he can capture the Delimitation Commission too: Rahul Gandhi
- ಅಳವು ಅರಿಯದ ಭಾಷೆ – ತುಳುನಾಡಿನ ಅತ್ಯಂತ ಹೆಮ್ಮೆಯ ಕೃತಿ
- ಬದುಕುವ ದಾರಿ ಮಾತ್ರ ಶಿಕ್ಷಣವಲ್ಲ, ಮಾನವೀಯತೆಯೇ ನಿಜವಾದ ವಿದ್ಯೆ: ಸಿದ್ದರಾಮಯ್ಯ
- ಮರಾಠಿ ಕಡ್ಡಾಯಗೊಳಿಸಿದ ಮಹಾರಾಷ್ಟ್ರ ಮಾದರಿ ಕರ್ನಾಟಕಕ್ಕೂ ಬರಲಿ: ಟಿ.ಎ. ನಾರಾಯಣಗೌಡ
- ಅಂಬೇಡ್ಕರ್ ಸಂವಿಧಾನ ಸಮಿತಿಯಲ್ಲಿ ಇರದೇ ಇದ್ದರೆ ಸಂವಿಧಾನ ಸರ್ವವ್ಯಾಪಕವಾಗುತ್ತಿರಲಿಲ್ಲ: ಬೊಮ್ಮಾಯಿ
ಸಂಪುಟ ಸಭೆಯ ನಂತರ ಸುದ್ದಿಗಾರರಿಗೆ ವಿವರ ನೀಡಿದ ಕಾನೂನು ಸಚಿವ ಎಚ್ ಕೆ ಪಾಟೀಲ್ ಇಂತಹ ಸಂತ್ರಸ್ತ ಕುಟುಂಬಗಳ ಅರ್ಹ ಸದಸ್ಯರಲ್ಲಿ ಒಬ್ಬರಿಗೆ ಗ್ರೂಪ್-ಸಿ ಮತ್ತು ಗ್ರೂಪ್-ಡಿ ವೃಂದದ ಹುದ್ದೆಗಳಿಗೆ ನೇಮಕ ಮಾಡಲಾಗುವುದು ಎಂದರು.
ಬೆಳಗಾವಿಯ ಹಿಂಡಲಗಾ ಸೇರಿದಂತೆ ಇತರೆ ಕೇಂದ್ರ ಕಾರಾಗೃಹಗಳಲ್ಲಿ ಮೊಬೈಲ್ ಬಳಕೆಯಾಗುತ್ತಿರುವುದು ಆತಂಕಕಾರಿ ವಿಷಯವಾಗಿದೆ. ಈ ಬಗ್ಗೆ ಸಂಪುಟ ಸಭೆಯಲ್ಲಿ ಸುಧೀರ್ಘ ಚರ್ಚೆ ನಡೆದಿದ್ದು ಈ ಜೈಲುಗಳಲ್ಲಿ ಅತ್ಯಾಧುನಿಕ ಜಾಮರಗಳನ್ನು ಅಳವಡಿಸಲು ನಿರ್ಧರಿಸಲಾಯಿತು ಎಂದರು.
ಕೇಂದ್ರ ಕಾರಾಗೃಹಗಳಾದ ಬಳ್ಳಾರಿ, ವಿಜಯಪುರ, ಧಾರವಾಡ, ಶಿವಮೊಗ್ಗ, ಬೆಳಗಾವಿ, ಮೈಸೂರು, ಕಲಬುರಗಿ ಮತ್ತು ತುಮಕೂರು ಜಿಲ್ಲಾ ಕಾರಾಗೃಹಗಳಲ್ಲಿ ಒಟ್ಟು 16.75 ಕೋಟಿ ರೂ.ಗಳ ಮೊತ್ತದಲ್ಲಿ 10 ಸಂಖ್ಯೆಯ ಜಾಮರ್‌ಗಳನ್ನು ಅಳವಡಿಸಲು ಸಂಪುಟ ಆಡಳಿತಾತ್ಮಕ ಅನುಮೋದನೆ ನೀಡಲಾಗಿದೆ ಎಂದರು.
ಮುಂಬರುವ ಸ್ಥಳೀಯ ಸಂಸ್ಥೆ ಚುನಾವಣೆಗಳಲ್ಲಿ ಇವಿಎಂ ಬದಲಿಗೆ ಮತಪತ್ರಗಳನ್ನು ಬಳಸಲು ತೀರ್ಮಾನಿಸಲಾಗಿದೆ ಇದಕ್ಕೆ ಅಗತ್ಯವಿರುವ ಕಾನೂನುಗಳನ್ನು ಸುಗ್ರೀವಾಜ್ಞೆ ಮೂಲಕ ಜಾರಿಗೊಳಿಸಲು ಚರ್ಚೆ ಮಾಡಲಾಗಿದೆ ಈ ಕುರಿತಂತೆ ರಾಜ್ಯ ಮುಖ್ಯ ಚುನಾವಣಾ ಆಯೋಗದ ಜೊತೆ ಚರ್ಚೆ ನಡೆಸಿ ತೀರ್ಮಾನ ತೆಗೆದುಕೊಳ್ಳಲು ನಿರ್ಧರಿಸಲಾಯಿತು ಎಂದರು.
ಸಂಪುಟದ ಇತರೆ ನಿರ್ಧಾರಗಳು:
ಉತ್ತರ ಕನ್ನಡ ಜಿಲ್ಲೆಯ ಶಿರಸಿ ತಾಲ್ಲೂಕಿನ ಪ್ರಜಾಸೌಧ, ಶಿರಸಿ ತಾಲ್ಲೂಕು ಆಡಳಿತ ಕೇಂದ್ರ ಕಟ್ಟಡದ 2ನೇ ಹಂತದಲ್ಲಿ ಮೂರನೇ ಮಹಡಿಯ ನಿರ್ಮಾಣದ ಕಾಮಗಾರಿಗೆ ಹಾಗೂ ಸದರಿ ಕಟ್ಟಡಕ್ಕೆ ಪೀಠೋಪಕರಣಗಳನ್ನು ಹಾಗೂ ಇತರ ಮೂಲಭೂತ ಸೌಕರ್ಯಗಳನ್ನು ಒದಗಿಸಲು ಒಟ್ಟು 16 ಕೋಟಿ ರೂ.ಗಳ ಪರಿಷ್ಕೃತ ಅಂದಾಜು ಮೊತ್ತಕ್ಕೆ ಸಂಪುಟ ಆಡಳಿತಾತ್ಮಕ ಅನುಮೋದನೆ.
ಉತ್ತರ ಕನ್ನಡ ಜಿಲ್ಲೆಯ ಕಾರವಾರದಲ್ಲಿ ನಿರ್ಮಿಸುತ್ತಿರುವ ಪ್ರಜಾಸೌಧ, ಜಿಲ್ಲಾ ಆಡಳಿತ ಕೇಂದ್ರ ಕಟ್ಟಡದ 3ನೇ ಮತ್ತು 4ನೇ ಮಹಡಿಯ ನಿರ್ಮಾಣ ಹಾಗೂ ಹಾಗೂ ಭವಿಷ್ಯದಲ್ಲಿ 5ನೇ ಮತ್ತು 6ನೇ ಮಹಡಿಯನ್ನು ವಿಸ್ತರಿಸುವ ಕಾಮಗಾರಿಯ 55.00 ಕೋಟಿ ರೂ.ಗಳ ಪರಿಷ್ಕೃತ ಅಂದಾಜು ಮೊತ್ತಕ್ಕೆ ಸಂಪುಟ ಆಡಳಿತಾತ್ಮಕ ಅನುಮೋದನೆ.
ಬೆಳಗಾವಿ ಜಿಲ್ಲೆಯ ಅಥಣಿ ತಾಲ್ಲೂಕಿನ ಅಥಣಿ ಗ್ರಾಮದ ಗಾಯರಾಣ ರಿ.ಸ.ನಂ. 880 4-00 ಎಕರೆ ಜಮೀನನ್ನು ಶ್ರೀ ಮಹಾಲಕ್ಷ್ಮೀ ದೇವಿ (ಲಕ್ಕವ್ವದೇವಿ) ದೇವಸ್ಥಾನ, ಕಟಗೇರಿ ಇವರಿಗೆ ಮಂಜೂರು.
ಅಧಿಕಾರಿ/ನೌಕರರು ಮುಂಬಡ್ತಿ ಹೊಂದಲು ತರಬೇತಿ ಕಡ್ಡಾಯಗೊಳಿಸಲು ಒಪ್ಪಿಗೆ.
ರಾಜ್ಯದ 9,337 ಶಾಲೆಗಳಲ್ಲಿ ಮಧ್ಯಾಹ್ನದ ಬಿಸಿಯೂಟವನ್ನು ಸಿದ್ಧಪಡಿಸಲು ಹೊಸ ಪಾತ್ರೆ ಪರಿಕರಗಳು ಅಗತ್ಯವಿದ್ದು, ಇದಕ್ಕೆ ಬೇಕಾದ ಅನುದಾನವನ್ನು ರಾಜ್ಯ ಸರ್ಕಾರದ ಕ್ಷೀರಭಾಗ್ಯ ಯೋಜನೆಯಡಿ ನೀಡಲು ಒಪ್ಪಿಗೆ. ಒಟ್ಟಾರೆ 21.55 ಕೋಟಿ ರೂ.ಗಳ ಅಂದಾಜು ಮೊತ್ತ ಭರಿಸಲು ಸಂಪುಟ ಅಸ್ತು.
ಕೊಡಗು ವೈದ್ಯಕೀಯ ವಿಜ್ಞಾನಗಳ ಸಂಸ್ಥೆಯಲ್ಲಿ ಸಾರ್ವಜನಿಕ ಖಾಸಗಿ ಸಹಭಾಗಿತ್ವದಲ್ಲಿ (ಪಿಪಿಪಿ ಮಾದರಿ) ಕಾರ್ಡಿಯಾಕ್ ಯೂನಿಟ್ ಸ್ಥಾಪಿಸಲು ಅಗತ್ಯವಿರುವ ವೈದ್ಯಕೀಯ ಉಪಕರಣಗಳನ್ನು 10.89 ಕೋಟಿ ರೂ.ಗಳ ಅಂದಾಜು ಮೊತ್ತದಲ್ಲಿ ಖರೀದಿಸಲು ಸಂಪುಟ ಒಪ್ಪಿಗೆ.
ಉಡುಪಿ ಜಿಲ್ಲೆಯ ಕಾರ್ಕಳ ತಾಲ್ಲೂಕಿನ ಕುಕ್ಕುಂದೂರು ಗ್ರಾಮದ 534/1ಎ1ರಲ್ಲಿ 0.14 (14 ಗುಂಟೆ) ವಿಸ್ತೀರ್ಣದ ಜಮೀನನ್ನು ಕಾಂಗ್ರೆಸ್ ಭವನ ಕಟ್ಟಡ ನಿರ್ಮಾಣದ ಉದ್ದೇಶಕ್ಕೆ ಕಾಂಗ್ರೆಸ್ ಭವನ ಟ್ರಸ್ಟ್ (ರಿ) ಬೆಂಗಳೂರಿಗೆ ಮಂಜೂರು.




