ಮೂವರು ಹಿರಿಯ ಶಾಸಕರಿಗೆ ಸಂಪುಟ ದರ್ಜೆ ಸಚಿವ ಸ್ಥಾನಮಾನ

3 years ago

#Cabinet #level #ministerial #status #three #senior #MLAs #tbjayachandra #ashokpattana #saleemahamad #siddaramaiah

ಬೆಂಗಳೂರು: ಮಂತ್ರಿ ಸ್ಥಾನದ ಪ್ರಬಲ ಆಕಾಂಕ್ಷಿಯಾಗಿದ್ದ ಮೂವರು ಹಿರಿಯ ಶಾಸಕರಿಗೆ ಸಂಪುಟ ದರ್ಜೆ ಸಚಿವ ಸ್ಥಾನಮಾನ ನೀಡುವ ಮೂಲಕ ಅವರ ಅಸಮಧಾನ ತಣಿಸಲು ಮುಖ್ಯಮಂತ್ರಿ ಸಿದ್ದರಾಮಯ್ಯ ಮುಂದಾಗಿದ್ದಾರೆ.

ಮಂತ್ರಿ ಸ್ಥಾನಕ್ಕೆ ತೀವ್ರ ಲಾಬಿ ನಡೆಸಿ, ವಿಧಾನಸಭೆ ಅಧ್ಯಕ್ಷ ಸ್ಥಾನ ಬೇಡ ಎಂದು ಹೇಳಿದ ಹಿರಿಯ ಶಾಸಕ, ಮಾಜಿ ಸಚಿವ ಟಿ.ಬಿ.ಜಯಚಂದ್ರ ಅವರನ್ನು ರಾಜ್ಯ ಸರ್ಕಾರದ ದೆಹಲಿ ವಿಶೇಷ ಪ್ರತಿನಿಯಾಗಿ ನೇಮಕ ಮಾಡಲಾಗಿದೆ.

ಸಂಪುಟ ದರ್ಜೆ ಸ್ಥಾನಮಾನದೊಂದಿಗೆ ಟಿ.ಬಿ.ಜಯಚಂದ್ರ ಅವರು ದೆಹಲಿ ವಿಶೇಷ ಪ್ರತಿನಿಯಾಗಿ ಕಾರ್ಯ ನಿರ್ವಹಿಸಲಿದ್ದಾರೆ ಎಂದು ಮುಖ್ಯಮಂತ್ರಿ ಸಚಿವಾಲಯದ ಅಧಿಕೃತ ಪ್ರಕಟಣೆ ತಿಳಿಸಿದೆ.

ಇವರೊಂದಿಗೆ ಬೆಳಗಾವಿ ಜಿಲ್ಲೆಯ ಹಿರಿಯ ಶಾಸಕ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಆಪ್ತ ಪಿ.ಎಂ.ಅಶೋಕ್ ಪಟ್ಟಣ ಅವರನ್ನು ವಿಧಾನಸಭೆಯ ಆಡಳಿತ ಪಕ್ಷದ ಮುಖ್ಯ ಸಚೇತಕರನ್ನಾಗಿ ನೇಮಿಸಲಾಗಿದೆ.

ಪ್ರದೇಶ ಕಾಂಗ್ರೆಸ್ ಕಾರ್ಯಾಧ್ಯಕ್ಷ ಹಾಗೂ ವಿಧಾನಪರಿಷತ್ ಸದಸ್ಯ ಸಲೀಂ ಅಹಮದ್ ಅವರನ್ನು ವಿಧಾನಪರಿಷತ್ ನ ಆಡಳಿತ ಪಕ್ಷದ ಮುಖ್ಯ ಸಚೇತಕರನ್ನಾಗಿ ನೇಮಕ ಮಾಡಿದ್ದು ಈ ಇಬ್ಬರಿಗೂ ಸಂಪುಟ ದರ್ಜೆ ಸ್ಥಾನ ಮಾನ ನೀಡಲಾಗಿದೆ.

Leave a Reply