ಕಲಬುರ್ಗಿ: ಸುಮಾರು ಒಂದು ದಶಕದ ನಂತರ ಕಲಬುರ್ಗಿಯಲ್ಲಿ ನಡೆದ ರಾಜ್ಯ ಸಚಿವ ಸಂಪುಟ ಸಭೆಯಲ್ಲಿ ಕಲ್ಯಾಣ ಕರ್ನಾಟಕಕ್ಕೆ ಭರಪೂರ ಕೊಡುಗೆಗಳನ್ನು ಘೋಷಿಸಲಾಗಿದೆ.
- ಬೆಂಗಳೂರಿನಲ್ಲಿ ಕನ್ನಡ ಗಜಲ್ ಯಾತ್ರೆ 100ರ ಸಂಭ್ರಮ
- ನಕಲಿ ದೇಶಪ್ರೇಮಿಗಳ ಆಟ ಇನ್ನೂ ರಾಜ್ಯದಲ್ಲಿ ನಡೆಯಲ್ಲ: ಬಿ ಕೆ ಹರಿಪ್ರಸಾದ್
- ಕಾಂಗ್ರೆಸ್ ಪಕ್ಷಕ್ಕೆ ತಕ್ಕ ಪಾಠ ಕಲಿಸುವುದು ನೂರು ಪರ್ಸೆಂಟ್ ಗ್ಯಾರೆಂಟಿ: ಆರ್ ಅಶೋಕ್
- ದರ್ಶನ್ ಪುಟ್ಟಣ್ಣಯ್ಯ ಅವರಿಗೆ ಸಚಿವ ಸ್ಥಾನ ನೀಡಿ
- ರಾಜಕೀಯ ಸಂತ ಶಾಂತವೇರಿ ಗೋಪಾಲಗೌಡ ಕೃತಿ ಲೋಕಾರ್ಪಣೆ
ಕಲ್ಯಾಣ ಕರ್ನಾಟಕ ಸಂಪೂರ್ಣ ಆರೋಗ್ಯ ಅಭಿವೃದ್ಧಿ ಯೋಜನೆ ಜಾರಿಗೆ ಅನುಮೋದನೆ ನೀಡಲಾಗಿದ್ದು, ಇದರ ಅಡಿಯಲ್ಲಿ ಕಲ್ಯಾಣ ಕರ್ನಾಟಕ ಪ್ರದೇಶದಲ್ಲಿ 45 ಹೊಸ ಆರೋಗ್ಯ ಕೇಂದ್ರಗಳು ಸ್ಥಾಪನೆಯಾಗಲಿವೆ. 31 ಸಮುದಾಯ ಆರೋಗ್ಯ ಕೇಂದ್ರಗಳ ಮೇಲ್ದರ್ಜೆಗೆ ಏರಲಿವೆ. 9 ತಾಲೂಕು ಆಸ್ಪತ್ರೆಗಳನ್ನು ಉಪ ವಿಭಾಗೀಯ ಆಸ್ಪತ್ರೆಗಳಾಗಿ ಮೇಲ್ದರ್ಜೆಗೇರಿಸುವುದು. 2 ತಾಲೂಕು ಆಸ್ಪತ್ರೆಗಳನ್ನು ಜಿಲ್ಲಾ ಆಸ್ಪತ್ರೆಗಳನ್ನಾಗಿ ಮೇಲ್ದರ್ಜೆಗೇರಿಸುವ ನಿರ್ಧಾರ ಮಾಡಲಾಗಿದೆ.
ಕಲ್ಯಾಣ ಕರ್ನಾಟಕ ಪ್ರದೇಶದಲ್ಲಿ 45 ಆರೋಗ್ಯ ಕೇಂದ್ರಗಳ ಸ್ಥಾಪನೆಗೆ ಸಂಪುಟ ಸಭೆಯಲ್ಲಿ ಅನುಮತಿ ನೀಡಲಾಗಿದೆ. 31 ಸಮುದಾಯ ಆರೋಗ್ಯ ಕೇಂದ್ರಗಳ ಮೇಲ್ದರ್ಜೆಗೆ ಏರಿಸಲು ನಿರ್ಧರಿಸಲಾಗಿದೆ. 9 ತಾಲೂಕು ಆಸ್ಪತ್ರೆ ಉಪ ವಿಭಾಗೀಯ ಆಸ್ಪತ್ರೆಗಳಾಗಿ ಮೇಲ್ದರ್ಜೆಗೆ ಏರಿಸಲು ನಿರ್ಧರಿಸಲಾಗಿದೆ. 2 ತಾಲೂಕು ಆಸ್ಪತ್ರೆಗಳು ಜಿಲ್ಲಾ ಆಸ್ಪತ್ರೆಗಳಾಗಿ ಮೇಲ್ದರ್ಜೆಗೆ ಏರಲಿವೆ. ಒಟ್ಟು 890 ಕೋಟಿ ರೂ. ಪ್ರಸ್ತಾವನೆಗೆ ಸಚಿವ ಸಂಪುಟ ಸಭೆಯಲ್ಲಿ ಆಡಳಿತಾತ್ಮಕ ಅನುಮೋದನೆ ನೀಡಲಾಗಿದೆ.
ಕಲಬುರ್ಗಿ ಜಿಲ್ಲೆಯ ಚಿತ್ತಾಪುರ ತಾಲೂಕಿನ ತೆಲಂಗಾಣ ಗಡಿ ಪುಟ್ಟ ಪಾಕ ರಾಜ್ಯ ಹೆದ್ದಾರಿಯಲ್ಲಿ ಕಾಗಿನ ನದಿಗೆ ಅಡ್ಡಲಾಗಿ ಸೇತುವೆ ನಿರ್ಮಾಣಕ್ಕೆ ಕಾಮಗಾರಿಯನ್ನು 53 ಕೋಟಿ ರೂ., ಕೊಪ್ಪಳದಲ್ಲಿ ನೂತನ ನ್ಯಾಯಾಲಯ ಸಂಕೀರ್ಣ ನಿರ್ಮಾಣ ಕಾಮಗಾರಿಗೆ 56 ಕೋಟಿ ರೂ., ಅಂಜನಾದ್ರಿ ಬೆಟ್ಟದಲ್ಲಿ ಪ್ರವಾಸಿಗರಿಗೆ ಮೂಲಭೂತ ಸೌಕರ್ಯಗಳ ಕಲ್ಪಿಸಲು ನೂರು ಕೋಟಿಗಳ ಅಂದಾಜು ಮೊತ್ತದಲ್ಲಿ ಕೈಗೊಳ್ಳಲು ಹಾಗೂ 77.28 ಎಕರೆ ಸ್ವಾಧೀನ ಪಡಿಸಿಕೊಳ್ಳಲು 29.51 ಕೋಟಿ ರೂ.ಗಳನ್ನು ಕೊಪ್ಪಳ ಜಿಲ್ಲಾಧಿಕಾರಿಗೆ ಬಿಡುಗಡೆ ಮಾಡಲು ಸಂಪುಟ ಸಭೆಯಲ್ಲಿ ತೀರ್ಮಾನಿಸಲಾಗಿದೆ.
ಕನ್ನಡದ ಪ್ರಾಚೀನ ವಿಶ್ವವಿದ್ಯಾನಿಲಯವೆಂದು ಪ್ರಖ್ಯಾತಿ ಹೊಂದಿರುವ ನಾಗಾವಿ ಪಾರಂಪರಿಕ ಪ್ರದೇಶದ ಅಭಿವೃದ್ಧಿ ಕಾಮಗಾರಿಗಳನ್ನು ಕೈಗೊಳ್ಳಲು 68 ಕೋಟಿ ರೂ. ಮೊತ್ತದ ಯೋಜನೆಗೆ ಅನುಮತಿ ನೀಡಿರುವ ಸಂಪುಟ ಸಭೆ, ರಾಯಚೂರು ಜಿಲ್ಲೆಯ ಮಸ್ಕಿಯಲ್ಲಿರುವ ಅಶೋಕನ ಶಿಲಾ ಶಾಸನ ಪ್ರದೇಶದಲ್ಲಿ 10 ಕೋಟಿ ರೂ.ಗಳ ಅಂದಾಜು ವೆಚ್ಚದಲ್ಲಿ ಅಗತ್ಯ ಪ್ರವಾಸಿ ಸೌಲಭ್ಯಗಳನ್ನು ಒದಗಿಸಲು ಅನುಮೋದಿಸಲಾಗಿದೆ.




