ದೆಹಲಿ: ಹಾಸನದಲ್ಲಿ ಡಿಸೆಂಬರ್ 5ರಂದು ಕಾಂಗ್ರೆಸ್ ಪಕ್ಷ ಹಾಗೂ ಹಿಂದುಳಿದ ವರ್ಗಗಳ ಒಕ್ಕೂಟದ ಆಶ್ರಯದಲ್ಲಿ ಸ್ವಾಭಿಮಾನಿ ಸಮಾವೇಶ ಅಯೋಜಿಸಲಾಗಿದೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು.
- ಕೆಪಿಸಿಸಿ ಅಧ್ಯಕ್ಷ ಬಿ ಕೆ ಹರಿಪ್ರಸಾದ್ ಅವರಿಗೆ ಫೇಕುಗಳ ಕಾಟ!
- ಇತಿಹಾಸದಲ್ಲೇ ದಾಖಲೆ ಬರೆಯುವಂತೆ ಬಸ್ ಟಿಕೆಟ್ ದರ ಏರಿಕೆ: ಆರ್ ಅಶೋಕ್
- ನವೆಂಬರ್ 07 ರಿಂದ ಎರಡನೇ ಹಂತದ ‘ವಾರ್ಡ್ ಒನ್’ ಅಭಿಯಾನ
- ಆ್ಯಕ್ಸಿಡೆಂಟಲ್ ಸಿಎಂ ಬೊಮ್ಮಾಯಿ ಅವರೇ ಹಾವೇರಿ ಕ್ಷೇತ್ರದ ಬಗ್ಗೆ ಗಮನ ಕೊಡಿ: ಬಿ ಕೆ ಹರಿಪ್ರಸಾದ್
- 40 ದಾಟಿದ ಪುರುಷರ ಮನಸ್ಸನ್ನು ಅರ್ಥಮಾಡಿಕೊಳ್ಳುವುದು ಹೇಗೆ?
ದೆಹಲಿಯಲ್ಲಿ ಮಾಧ್ಯಮ ಪ್ರತಿನಿಧಿಗಳ ಪ್ರಶ್ನೆಗಳಿಗೆ ಪ್ರತಿಕ್ರಿಯೆ ನೀಡಿದ ಅವರು, ಸಮಾವೇಶಕ್ಕೆ ಕೆಪಿಸಿಸಿ ಅಧ್ಯಕ್ಷರಾದ ಡಿ.ಕೆ. ಶಿವಕುಮಾರ್ ಹಾಗೂ ರಾಜ್ಯ ಉಸ್ತುವಾರಿ, ಎಐಸಿಸಿ ಪ್ರಧಾನ ಕಾರ್ಯದರ್ಶಿ ರಣದೀಪ್ ಸಿಂಗ್ ಸುರ್ಜೆವಾಲ ಅವರನ್ನೂ ಸಂಘಟಕರು ಆಹ್ವಾನಿಸಿದ್ದಾರೆ ಎಂದರು.
ಸಮಾವೇಶ ಕುರಿತಂತೆ ಹೈಕಮಾಂಡ್ ಗೆ ಅನಾಮಧೇಯ ಪತ್ರ ಹೋಗಿರುವ ಬಗ್ಗೆ ನನಗೆ ಮಾಹಿತಿ ಇಲ್ಲ. ಖರ್ಗೆ ಅವರೂ ಈ ಬಗ್ಗೆ ಚರ್ಚೆ ಮಾಡಲಿಲ್ಲ ಎಂದರು.
ಸಂಪುಟ ಪುನರ್ ರಚನೆ ಕಲ್ಪಿತ ಸುದ್ದಿ: ಮಾಧ್ಯಮಗಳು ಸಂಪುಟ ಪುನರ್ ರಚನೆಯ ಬಗ್ಗೆ ಸುದ್ದಿಗಳನ್ನು ಬಿತ್ತರಿಸುತ್ತಿವೆ. ಸಂಭವನೀಯ ಸಚಿವರ ಪಟ್ಟಿಯನ್ನೂ ಪ್ರಕಟಿಸುತ್ತಿವೆ. ಹೀಗಾಗಿ ಪುನರ್ರಚನೆ, ವಿಸ್ತರಣೆ ಕುರಿತಾದ ಪ್ರಶ್ನೆಗಳಿಗೆ ಮಾಧ್ಯಮಗಳೇ ಉತ್ತರಿಸಬೇಕು ಎಂದು ಹೇಳಿದರು.
ಸಂಪುಟ ಪುನಾರಚನೆ, ವಿಸ್ತರಣೆ ಕುರಿತಂತೆ ನಾನು ರಾಹುಲ್ ಗಾಂಧಿಯವರು ಅಥವಾ ಮಲ್ಲಿಕಾರ್ಜುನ ಖರ್ಗೆ ಅವರೊಂದಿಗೆ ಚರ್ಚೆ ಮಾಡಿಲ್ಲ. ನಾಗೇಂದ್ರ ಅವರು ಸಂಪುಟಕ್ಕೆ ಸೇರ್ಪಡೆ ಆಗಲಿದ್ದಾರೆ. ಆದರೆ ಈಗಲೇ ಅಲ್ಲ ಎಂದರು.




