ಬೆಂಗಳೂರು: ರಾಜ್ಯ ಸರ್ಕಾರದ ಅನುಮತಿ ಇಲ್ಲದೆ ಕರ್ನಾಟಕದಲ್ಲಿ ಸಿಬಿಐ ಸ್ವಯಂ ಪ್ರೇರಿತವಾಗಿ ಯಾವುದೇ ಪ್ರಕರಣಗಳ ತನಿಖೆ ನಡೆಸಲು ಇನ್ನು ಮುಂದೆ ಅವಕಾಶ ಇಲ್ಲ.
- Modi is confident that he can capture the Delimitation Commission too: Rahul Gandhi
- ಅಳವು ಅರಿಯದ ಭಾಷೆ – ತುಳುನಾಡಿನ ಅತ್ಯಂತ ಹೆಮ್ಮೆಯ ಕೃತಿ
- ಬದುಕುವ ದಾರಿ ಮಾತ್ರ ಶಿಕ್ಷಣವಲ್ಲ, ಮಾನವೀಯತೆಯೇ ನಿಜವಾದ ವಿದ್ಯೆ: ಸಿದ್ದರಾಮಯ್ಯ
- ಮರಾಠಿ ಕಡ್ಡಾಯಗೊಳಿಸಿದ ಮಹಾರಾಷ್ಟ್ರ ಮಾದರಿ ಕರ್ನಾಟಕಕ್ಕೂ ಬರಲಿ: ಟಿ.ಎ. ನಾರಾಯಣಗೌಡ
- ಅಂಬೇಡ್ಕರ್ ಸಂವಿಧಾನ ಸಮಿತಿಯಲ್ಲಿ ಇರದೇ ಇದ್ದರೆ ಸಂವಿಧಾನ ಸರ್ವವ್ಯಾಪಕವಾಗುತ್ತಿರಲಿಲ್ಲ: ಬೊಮ್ಮಾಯಿ
ಕ್ರಿಮಿನಲ್ ಪ್ರಕರಣಗಳ ಬಗ್ಗೆ ರಾಜ್ಯ ಸರ್ಕಾರದ ಅನುಮತಿ ಇಲ್ಲದೆ ಸಿಬಿಐ ತನಿಖೆ ನಡೆಸಲು ಅವಕಾಶ ಇಲ್ಲ ಎಂದು ಹೊರಡಿಸಿದ್ದ ಆದೇಶವನ್ನು ಈ ಹಿಂದಿನ ಬಿಜೆಪಿ ಸರ್ಕಾರ ವಾಪಸ್ ಪಡೆದಿದ್ದನ್ನು ರದ್ದುಪಡಿಸಲು ರಾಜ್ಯ ಸಚಿವ ಸಂಪುಟ ಸಭೆ ತೀರ್ಮಾನಿಸಿದೆ.
ಡಿ.ಕೆ.ಶಿವಕುಮಾರ್ ವಿರುದ್ಧದ ಅಕ್ರಮ ಆಸ್ತಿ ಗಳಿಕೆ ಪ್ರಕರಣ ಸಂಬಂಧ ಸಿ ಬಿ ಐ ರಾಜ್ಯ ಸರ್ಕಾರದ ಅನುಮತಿಗೆ ಕಾಯದೆ ತನಿಖೆ ನಡೆಸಬಹುದು ಎಂದು ಆದೇಶ ಹೊರಡಿಸಿದ್ದ ಈ ಹಿಂದಿನ ಸರ್ಕಾರ ಈ ಪ್ರಕರಣ ಮಾತ್ರವಲ್ಲದೆ ಯಾವುದೇ ಕ್ರಿಮಿನಲ್ ಪ್ರಕರಣಗಳ ತನಿಖೆಗೆ ಸಿಬಿಐ ರಾಜ್ಯ ಸರ್ಕಾರದ ಅನುಮತಿಗೆ ಕಾಯುವಂತಿಲ್ಲ ಎಂದು ತಿಳಿಸಿತ್ತು.
ಕೇಂದ್ರದಲ್ಲಿ ಈ ಮೊದಲು ಅಸ್ತಿತ್ವದಲ್ಲಿದ್ದ ಸರ್ಕಾರ ಸಿಬಿಐ ಅನ್ನು ದುರ್ಬಳಕೆ ಮಾಡಿಕೊಂಡು ಕ್ರಿಮಿನಲ್ ಪ್ರಕರಣದ ತನಿಖೆ ಹೆಸರಲ್ಲಿ ರಾಜ್ಯದ ಪ್ರಭಾವಿ ನಾಯಕರ ವರ್ಚಸ್ಸಿಗೆ ಮಸಿ ಬಳಿಯಲು ಯತ್ನಿಸುತ್ತಿದೆ ಎಂದು ಹೇಳಿ ದೆಹಲಿ ಪೊಲೀಸ್ ಕಾಯ್ದೆ ರಚನೆಯಾಗಿತ್ತು. ಸಿಬಿಐ ರಾಜ್ಯ ಸರ್ಕಾರದ ಅನುಮತಿ ಇಲ್ಲದೆ ರಾಜ್ಯಕ್ಕೆ ಸಂಬಂಧಪಟ್ಟ ಪ್ರಕರಣಗಳ ತನಿಖೆಗೆ ಅವಕಾಶ ಇಲ್ಲ ಎಂಬ ತೀರ್ಮಾನ ಕೈಗೊಂಡಿತ್ತು.
ಆದರೆ ಯಡಿಯೂರಪ್ಪ ನೇತೃತ್ವದ ಸರ್ಕಾರ ಈ ಆದೇಶವನ್ನು ವಾಪಸ್ ಪಡೆದಿದ್ದು, ಇದೀಗ ಮತ್ತೊಂದು ಆದೇಶದ ಮೂಲಕ ಹಿಂದಿನ ಸರ್ಕಾರದ ಆದೇಶವನ್ನು ಮಾರ್ಪಾಡು ಮಾಡಲು ಸಂಪುಟ ಸಭೆಯಲ್ಲಿ ತೀರ್ಮಾನಿಸಲಾಗಿದೆ ಎಂದು ಕಾನೂನು ಸಚಿವ ಎಚ್ ಕೆ ಪಾಟೀಲ್ ತಿಳಿಸಿದರು.
ಕೇಂದ್ರ ಸರ್ಕಾರ ರಾಜಕೀಯ ಕಾರಣಕ್ಕಾಗಿ ಸಿಬಿಐ ಸೇರಿದಂತೆ ಕೇಂದ್ರದ ತನಿಖಾ ಸಂಸ್ಥೆಗಳನ್ನು ದುರ್ಬಳಕೆ ಮಾಡಿಕೊಳ್ಳುತ್ತಿದೆ. ಅನೇಕ ಪ್ರಕರಣಗಳಲ್ಲಿ ಸಿಬಿಐ ಪೂರ್ವಗ್ರಹ ಪೀಡಿತವಾಗಿ ಕೆಲಸ ಮಾಡುತ್ತಿರುವುದನ್ನು ಗಮನಿಸಿದ್ದೇವೆ ಎಂದರು.
ಪರೇಶ್ ಮೇಸ್ತಾ ಹತ್ಯೆ ಪ್ರಕರಣ ಸೇರಿದಂತೆ ಹಲವು ಪ್ರಕರಣಗಳನ್ನು ತನಿಖೆ ನಡೆಸಲು ಸಿಬಿಐಗೆ ನೀಡಲಾಗಿತ್ತು. ಆದರೆ ಈ ಯಾವುದೇ ಪ್ರಕರಣಗಳ ತನಿಖೆಯನ್ನು ಸಿಬಿಐ ಇಲ್ಲಿಯವರೆಗೆ ಪೂರ್ಣಗೊಳಿಸಲು ಸಾಧ್ಯವಾಗಿಲ್ಲ. ಈ ಹಿನ್ನೆಲೆಯಲ್ಲಿ ಈ ಸಂಸ್ಥೆ ರಾಜ್ಯ ಸರ್ಕಾರದ ಪೂರ್ವಾನುಮತಿ ಇಲ್ಲದೆ ಯಾವುದೇ ಕ್ರಿಮಿನಲ್ ಪ್ರಕರಣಗಳ ಬಗ್ಗೆ ರಾಜ್ಯದಲ್ಲಿ ತನಿಖೆ ನಡೆಸಲು ಅವಕಾಶ ಇಲ್ಲ ಎಂಬ ಆದೇಶ ಹೊರಡಿಸಲು ನಿರ್ಧರಿಸಲಾಯಿತು ಎಂದರು.
ಇತ್ತೀಚೆಗೆ ರಾಜ್ಯದ ರಾಜ್ಯಪಾಲರು ಸಣ್ಣ ಸಣ್ಣ ವಿಷಯಗಳಿಗೂ ಸರ್ಕಾರಕ್ಕೆ ಪತ್ರ ಬರೆದು ವಿವರಣೆ ಕೇಳುತ್ತಿದ್ದಾರೆ. ಆಡಳಿತದ ಪ್ರತಿ ಹಂತದಲ್ಲೂ ಅವರು ನಡೆಸುತ್ತಿರುವ ಹಸ್ತಕ್ಷೇಪದ ಬಗ್ಗೆ ಸಂಪುಟ ಸಭೆ ತೀವ್ರ ಕಳವಳ ವ್ಯಕ್ತಪಡಿಸಿತು ಎಂದರು.
ರಾಜ್ಯ ಸಚಿವ ಸಂಪುಟದ ಸಲಹೆಯ ಮೇರೆಗೆ ರಾಜ್ಯಪಾಲರು ಕರ್ತವ್ಯ ನಿರ್ವಹಿಸಬೇಕು. ಆದರೆ ಅವರು ತಮ್ಮ ವಿವೇಚನಾ ಅಧಿಕಾರ ಎಂಬ ಹೆಸರಿನಲ್ಲಿ ಪ್ರತಿಯೊಂದು ವಿಷಯದ ಬಗ್ಗೆ ಹಸ್ತಕ್ಷೇಪ ಮಾಡಿ ವಿವರಣೆ ಕೇಳುತ್ತಿದ್ದಾರೆ ಇದು ಪ್ರಜಾತಂತ್ರ ವಿರೋಧಿ ನಡವಳಿಕೆಯಾಗಿದೆ ಎಂದು ಸಂಪುಟ ಸಭೆ ಅಭಿಪ್ರಾಯಪಟ್ಟಿದೆ ಎಂದರು.
ರಾಜ್ಯ ಸಚಿವ ಸಂಪುಟಕ್ಕೆ ಮಾಹಿತಿ ನೀಡದೆ ರಾಜ್ಯಪಾಲರ ಯಾವುದಕ್ಕೆ ಪತ್ರಕ್ಕೆ ವಿವರಣೆ ನೀಡಬಾರದು ಎಂದು ಸರ್ಕಾರದ ಮುಖ್ಯ ಕಾರ್ಯದರ್ಶಿಗಳಿಗೆ ಸೂಚನೆ ನೀಡಲು ತೀರ್ಮಾನಿಸಲಾಯಿತು ಎಂದರು.
ರಾಜ್ಯಪಾಲರು ಬರೆಯುವ ಪತ್ರ ಮತ್ತು ನೀಡುವ ಸೂಚನೆಯ ಬಗ್ಗೆ ಸರ್ಕಾರದ ಮುಖ್ಯ ಕಾರ್ಯದರ್ಶಿ ಸಂಪುಟ ಸಭೆಯ ಗಮನಕ್ಕೆ ತರಬೇಕು. ಸಂಪುಟ ಸಭೆಯಲ್ಲಿ ಈ ಕುರಿತು ಕೈಗೊಂಡ ತೀರ್ಮಾನದ ಆಧಾರದಲ್ಲಿ ಮಾಹಿತಿ ನೀಡಬೇಕು ಎಂದು ಸೂಚಿಸಲು ನಿರ್ಧರಿಸಲಾಗಿದೆ ಎಂದರು.




