ರಾಜ್ಯ ಮಟ್ಟದ ಪುಸ್ತಕ ಆಯ್ಕೆಗಾಗಿ ಅರ್ಜಿ
ಬೆಂಗಳೂರು: 2024ರ ಸಾಲಿನಲ್ಲಿ ಪ್ರಥಮ ಮುದ್ರಣವಾಗಿ ಪ್ರಕಟಣೆಗೊಂಡ ಸಾಹಿತ್ಯ, ಕಲೆ, ವಿಜ್ಞಾನ, ವೃತ್ತಿ ಶಿಕ್ಷಣ, ಕೌಶಲ್ಯಾಭಿವೃದ್ಧಿ, ಆದಾಯ ಉತ್ಪಾದನಾ ಯೋಜನೆ, ಸ್ಪರ್ಧಾತ್ಮಕ, ಪಠ್ಯ ಪುಸ್ತಕ, ಸಾಂಧರ್ಬಿಕ ಮತ್ತು ಪರಾಮರ್ಶನ ಕೃತಿಗಳು ಹಾಗೂ ಮಕ್ಕಳ ಸಾಹಿತ್ಯ, ನವಸಾಕ್ಷರರ ಕೃತಿಗಳು ಇತ್ಯಾದಿ ವಿಷಯಗಳ ಕನ್ನಡ, ಆಂಗ್ಲ ಮತ್ತು ಭಾರತೀಯ ಇತರೆ ಭಾಷೆಯ ಗ್ರಂಥಗಳ ಆಯ್ಕೆಗೆ ಲೇಖಕರು, ಲೇಖಕ-ಪ್ರಕಾಶಕರು, ಪ್ರಕಾಶಕರು ಮತ್ತು ಪ್ರಕಟಣಾ ಸಂಸ್ಥೆಗಳಿಂದ ಪುಸ್ತಕಗಳನ್ನು ರಾಜ್ಯ ಮಟ್ಟದ ಪುಸ್ತಕ ಆಯ್ಕೆ ಸಮಿತಿಗೆ ಆಯ್ಕೆಗಾಗಿ ಸ್ವೀಕರಿಸಲು ಅರ್ಜಿ ಆಹ್ವಾನಿಸಲಾಗಿದೆ ಎಂದು ನಗರ ಗ್ರಂಥಾಲಯದ ಉಪನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
- ಭಾರತದ 72% IAS ಅಧಿಕಾರಿಗಳು, 90% ಹೈಕೋರ್ಟ್ ನ್ಯಾಯಮೂರ್ತಿಗಳು ಬ್ರಾಹ್ಮಣರೇ?
- ಪ್ರವಾಸಿ ಮಾರ್ಗದರ್ಶಿ ತರಬೇತಿಗೆ ಅರ್ಜಿ ಆಹ್ವಾನ
- ಬೆಂಗಳೂರು ನಗರಾಭಿವೃದ್ಧಿ ಸಚಿವ ಕೃಷ್ಣ ಬೈರೇಗೌಡ ಅವರಿಂದ ‘ಫ್ರೀಡಂ ಹಬ್ಬ’ ಘೋಷಣೆ
- ರಾಜೀನಾಮೆ ಸಲ್ಲಿಸುವ ಮೂಲಕ ಅಸಮಾಧಾನ ವ್ಯಕ್ತಪಡಿಸಿದ ಬಿ.ಆರ್.ಪಾಟೀಲ್
- ಫೆಲೋಶಿಪ್ಗೆ ಅರ್ಜಿ ಆಹ್ವಾನ
2024ನೇ ಸಾಲಿನಲ್ಲಿ ಪ್ರಥಮ ಮುದ್ರಣವಾಗಿ ಪ್ರಕಟವಾಗಿರಬೇಕು. ಮರು ಮುದ್ರಣದಲ್ಲಿ 10 ವರ್ಷಗಳ ಅಂತರವಿರಬೇಕು. ಆಯ್ಕೆಗೆ ಒಪ್ಪಿಸಿದ ಯಾವುದೇ ಭಾಷೆಯ ಪುಸ್ತಕಗಳನ್ನು ಹಿಂತಿರುಗಿಸಲಾಗುವುದಿಲ್ಲ.
ಆಸಕ್ತರು 2024ನೇ ವರ್ಷದಲ್ಲಿ ಪ್ರಥಮ ಮುದ್ರಣವಾಗಿ ಪ್ರಕಟವಾದ ಪುಸ್ತಕಗಳನ್ನು ಬೆಂಗಳೂರಿನ ಕಬ್ಬನ್ ಉದ್ಯಾನವನದ ರಾಜ್ಯ ಕೇಂದ್ರ ಗ್ರಂಥಾಲಯದಲ್ಲಿ ಜನವರಿ 1, 2025 ರ ಸಂಜೆ 5:30 ರ ರೊಳಗಾಗಿ ನೋಂದಣಿ ಮಾಡಿಸಬಹುದು.

ಪುಸ್ತಕಗಳನ್ನು ಮಾತ್ರ ರಾಜ್ಯ ಮಟ್ಟದ ಪುಸ್ತಕ ಆಯ್ಕೆ ಸಮಿತಿಯಿಂದ ಆಯ್ಕೆಗಾಗಿ ಪರಿಗಣಿಸಲಾಗುವುದು. ಅಂತಿಮ ದಿನಾಂಕದ ನಂತರ ನೋಂದಣಿಯಾಗುವ ಪುಸ್ತಕಗಳನ್ನು ಆಯ್ಕೆಗೆ ಪರಿಗಣಿಸಲಾಗುವುದಿಲ್ಲ.

ಹೆಚ್ಚಿನ ಮಾಹಿತಿಗಾಗಿ ಇಲಾಖೆಯ ವೆಬ್ ಸೈಟ್ www.dpl.karnataka.gov.in ಗೆ ಭೇಟಿ ನೀಡಬಹುದು ಅಥವಾ ದೂರವಾಣಿ 080-22864990, 22867358 ಗೆ ಸಂಪರ್ಕಿಸಬಹುದು.



