ಸಾಂಸ್ಕೃತಿಕ ಸಂಘಸಂಸ್ಥೆಗಳಿಗೆ ಧನಸಹಾಯಕ್ಕೆ ಅರ್ಜಿ ಆಹ್ವಾನ

2 years ago

#Call #applications #funding #cultural #organizations

ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಯೋಜನೆ

ಬೆಂಗಳೂರು: ನಾಡಿನ ಕಲೆ, ಸಾಹಿತ್ಯ, ಸಂಗೀತ, ಜನಪದ, ನೃತ್ಯ, ನಾಟಕ ಸೇರಿದಂತೆ ಇತರೆ ಕಲಾಪ್ರಕಾರಗಳನ್ನು ಉಳಿಸಿ ಬೆಳೆಸುವ ಸಲುವಾಗಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯಿಂದ 2023-23ನೇ ಸಾಲಿನ ಸಾಮಾನ್ಯ, ವಿಶೇಷ ಘಟಕ ಮತ್ತು ಗಿರಿಜನ ಉಪಯೋಜನೆಯಡಿ, ಕನ್ನಡ ಭಾಷೆ, ಸಾಹಿತ್ಯ, ಸಂಗೀತ, ನೃತ್ಯ, ಜಾನಪದ, ನಾಟಕ, ಯಕ್ಷಗಾನ, ಚಿತ್ರಕಲೆ, ಶಿಲ್ಪಕಲೆ ಮುಂತಾದ ಸೃಜನಶೀಲ ಕಲಾಪ್ರಕಾರಗಳಲ್ಲಿ ನಿರಂತರ ಸಾಂಸ್ಕೃತಿಕ ಚಟುವಟಿಕೆಗಳನ್ನು ನಡೆಸುತ್ತಿರುವ ಸಂಘ ಸಂಸ್ಥೆಗಳಿಗೆ ಪ್ರೋತ್ಸಾಹ ರೂಪದಲ್ಲಿ ಧನಸಹಾಯ ನೀಡಲು ಸೇವಾಸಿಂಧು Sevasindhu.karnataka.gov.in ಮುಖಾಂತರ ಅರ್ಜಿ ಆಹ್ವಾನಿಸಲಾಗಿದೆ.

ಅರ್ಜಿಯನ್ನು ಡಿಸೆಂಬರ್ 13 ರೊಳಗಾಗಿ ಸಲ್ಲಿಸಬೇಕು. ಹೆಚ್ಚಿನ ಮಾಹಿತಿಗಾಗಿ ಸೇವಾಸಿಂಧು ಪೋರ್ಟಲ್ ಹಾಗೂ ಇಲಾಖೆಯ ವೆಬ್ಸೈಟ್ www.kannadasiri.karnataka.gov.in 08022279954, 9986837037, 8792662814, 8792662816, 08022213530 ಅನ್ನು ಹಾಗೂ ಆಯಾ ಜಿಲ್ಲೆಯ ವ್ಯವಸ್ಥಾಪಕರು, ಸೇವಾ ಸಿಂಧು ಇವರನ್ನು ಸಂಪರ್ಕಿಸಬಹುದಾಗಿದೆ.

ನಿಗದಿತ ದಿನಾಂಕದ ನಂತರ ಸಲ್ಲಿಸುವ ಅರ್ಜಿಗಳನ್ನು ಪರಿಗಣಿಸಲಾಗುವುದಿಲ್ಲ ಹಾಗೂ ಅರ್ಜಿಗಳನ್ನು ನೇರವಾಗಿ ಇಲಾಖೆಯಲ್ಲಿ ಸ್ವೀಕರಿಸುವುದಿಲ್ಲವೆಂದು ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Leave a Reply