ಬಳ್ಳಾರಿ: ಜಿಲ್ಲೆಯ ಸಿರುಗುಪ್ಪ ತಾಲೂಕಿನ ಭೈರಗಾಮದಿನ್ನೆ ಗ್ರಾಮದ ಕಾರಂತ ರಂಗಲೋಕ ಕಲಾತ್ಮಕ ಮನಸ್ಸುಗಳ ತಾಣ (ರಿ) ಸಂಸ್ಥೆಯ ದಶಮಾನೋತ್ಸವದ ಸವಿನೆನಪಿಗಾಗಿ ಪ್ರತಿ ವರ್ಷದಂತೆ ಈ ವರ್ಷವೂ ಕೂಡ ನಾಟಕಕಾರರಿಗೆಂದೇ ಕೊಡ ಮಾಡುವ ರಾಜ್ಯ ಮಟ್ಟದ ಕಾರಂತ ಸಾಹಿತ್ಯ ರತ್ನ ಪ್ರಶಸ್ತಿಗೆ 2013 ರಿಂದ 2023ರ ಕಾಲಾವಧಿಯಲ್ಲಿ ಪ್ರಕಟವಾಗಿರುವ ನಾಟಕ ಕೃತಿಗಳನ್ನು ಆಹ್ವಾನಿಸಲಾಗಿದೆ.
ನಿಯಮಗಳು:
- ಈ ಪ್ರಶಸ್ತಿಯನ್ನು ಕೇವಲ ನಾಟಕ ಕೃತಿಗಳಿಗೆ ಮಾತ್ರ ನೀಡಲಾಗುತ್ತದೆ.
- ಪ್ರಶಸ್ತಿಗೆ ಎಲ್ಲಾ ವಯಸ್ಸಿನವರು ಅರ್ಜಿ ಸಲ್ಲಿಸಬಹುದಾಗಿದೆ.
- ಈ ಹಿಂದೆ ಪ್ರಶಸ್ತಿ ಪಡೆದವರು ಈ ವರ್ಷದ ಪ್ರಶಸ್ತಿಗೆ ಅರ್ಹರಾಗಿರುವುದಿಲ್ಲ.
- ತಮ್ಮ ಕೃತಿಯ ಮೂರು ಪ್ರತಿಗಳನ್ನು ಪ್ರತ್ಯೇಕ ಹಾಳೆಯಲ್ಲಿ ಬರೆದ ಸ್ವಪರಿಚಯ, ಸಂಪೂರ್ಣ ಅಂಚೆ ವಿಳಾಸ ಮತ್ತು ಇತ್ತೀಚಿನ ಪಾಸ್ಪೋರ್ಟ್ ಅಳತೆಯ ಭಾವಚಿತ್ರದೊಂದಿಗೆ ಕೆಳಗಿನ ವಿಳಾಸಕ್ಕೆ ಅಂಚೆಯ ಮೂಲಕವೇ (Printed Book Registered Post) ತಮ್ಮ ಕೃತಿಗಳನ್ನು ಕಳಿಸಬಹುದಾಗಿದೆ.
- ಒಬ್ಬ ಲೇಖಕ ತನ್ನ ಎರಡು ಕೃತಿಗಳ ಮೂಲಕ ಈ ಪ್ರಶಸ್ತಿಗೆ ಅರ್ಜಿ ಸಲ್ಲಿಸಬಹುದಾಗಿದೆ.
- ಪ್ರಶಸ್ತಿಯು ನಗದು, ನೆನಪಿನ ಕಾಣಿಕೆ, ಆಕರ್ಷಕ ಪ್ರಶಸ್ತಿ ಪತ್ರದ ಜೊತೆ ಶಾಲು, ಹಾರದ ಸನ್ಮಾನವನ್ನು ಒಳಗೊಂಡಿದೆ.
- ಪ್ರಶಸ್ತಿಗೆ ಕಳುಹಿಸಿದ ಕೃತಿಗಳನ್ನು ಹಿಂತಿರುಗಿಸಲಾಗುವುದಿಲ್ಲ. ಅಲ್ಲದೇ ಯಾವುದೇ ಪತ್ರ ವ್ಯವಹಾರಕ್ಕೆ ಅವಕಾಶವಿಲ್ಲ.
- ಅರ್ಜಿ ಸಲ್ಲಿಕೆಗೆ ಕೊನೆಯ ದಿನಾಂಕ: 15 ಅಕ್ಟೋಬರ್ 2023
ಪುಸ್ತಕಗಳನ್ನು ಕಳುಹಿಸಬೇಕಾದ ವಿಳಾಸ: ಆರ್.ಪಿ.ಮಂಜುನಾಥ್.ಬಿ.ಜಿ.ದಿನ್ನೆ, ಕಾರ್ಯದರ್ಶಿಗಳು, ಕಾರಂತ ರಂಗಲೋಕ ಕಲಾತ್ಮಕ ಮನಸ್ಸುಗಳ ತಾಣ (ರಿ) ಭೈರಗಾಮದಿನ್ನೆ ಗ್ರಾಮ, ಕೊತ್ತಲಚಿಂತ ಅಂಚೆ, ಸಿರುಗುಪ್ಪ ತಾಲ್ಲೂಕು, ಬಳ್ಳಾರಿ ಜಿಲ್ಲೆ – 583114, ಮೊ :9379857775




