ಚಿತ್ರದುರ್ಗ: IISc, IIT ಮತ್ತು NIT ಸಂಸ್ಥೆಗಳ ಮೂಲಕ Artificial intelligence and machine learing ವೃತ್ತಿಪರ ತರಬೇತಿ ಕೋರ್ಸ್ ಗಳಲ್ಲಿ ಭಾಗವಹಿಸುವ ಪರಿಶಿಷ್ಟ ಪಂಗಡದ 200 ಇಂಜಿನಿಯರಿಂಗ್ ಪದವೀಧರರಿಗೆ ಶಿಷ್ಯವೇತನ, ತರಬೇತಿ ನೀಡುವ ಸಂಬಂಧ ಮತ್ತೊಮ್ಮೆ ಅರ್ಜಿ ಸಲ್ಲಿಸಲು ಅವಕಾಶ ಕಲ್ಪಿಸಲಾಗಿದ್ದು, ಏ.25 ಅರ್ಜಿ ಸಲ್ಲಿಸಲು ಕೊನೆಯ ದಿನವಾಗಿದೆ ಎಂದು ಜಿಲ್ಲಾ ಪರಿಶಿಷ್ಟ ವರ್ಗಗಳ ಕಲ್ಯಾಣಾಧಿಕಾರಿಗಳು ತಿಳಿಸಿದ್ದಾರೆ.
- ಸರಳ, ವೇಗ, ಪಾರದರ್ಶಕ, ಜನಸ್ನೇಹಿ ಆಸ್ತಿ ದಾಖಲೆ ವ್ಯವಸ್ಥೆ ಇ-ಆಸ್ತಿ 2.0: ಕೃಷ್ಣ ಬೈರೇಗೌಡ
- ರೈತರಿಗೆ ನಿರಂತರ 6 ತಾಸು ಸಮರ್ಪಕ ವಿದ್ಯುತ್ ಕುಡಿಯುವ ನೀರು ಪೂರೈಕೆಗೆ ಆದ್ಯತೆ
- ಕೆಟಿವಿಎ ಗೃಹ ಪತ್ರಿಕೆ ಟಿವಿ – ಠೀವಿ ಪುನರಾರಂಭ
- ಸಿಎನ್ಎನ್, ಎಂಎಸ್ಎನ್ಬಿಸಿ, ಪಾಲಿಟಿಕೋಗೆ ಶ್ವೇತಭವನ ಪ್ರವೇಶ ನಿಷೇಧಿಸಿದ ಟ್ರಂಪ್
- ಕೆರೆಗಳ ಪುನಶ್ಚೇತನಕ್ಕೆ ₹150 ಕೋಟಿ ವೆಚ್ಚದ ವಿಶ್ವಬ್ಯಾಂಕ್ ಯೋಜನೆ: ಈಶ್ವರ್ ಖಂಡ್ರೆ
ಸರ್ಕಾರದ ಆದೇಶದಂತೆ IISc, IIT ಮತ್ತು NIT ಸಂಸ್ಥೆಗಳ ಮೂಲಕ Artificial intelligence and machine learing ವ್ಯಕ್ತಿಪರ ತರಬೇತಿ ಕೋರ್ಸಗಳಲ್ಲಿ ಭಾಗವಹಿಸುವ ಪರಿಶಿಷ್ಟ ಪಂಗಡದ 200 ಇಂಜಿನಿಯರಿಂಗ್ ಪದವೀಧರರಿಗೆ ರೂ.15,000/-ಗಳ ಶಿಷ್ಯವೇತನ ನೀಡಲಾಗುವುದು. ಅರ್ಜಿ ನಮೂನೆಗಳನ್ನು ಜಿಲ್ಲಾ ಪರಿಶಿಷ್ಟ ವರ್ಗಗಳ ಕಲ್ಯಾಣಾಧಿಕಾರಿಗಳ ಕಚೇರಿ, ಚಿತ್ರದುರ್ಗ ಇಲ್ಲಿ ಪಡೆಯಬಹುದು. ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂಖ್ಯೆ 08194-225427ಗೆ ಸಂಪರ್ಕಿಸಬಹುದು.




