ಬೆಂಗಳೂರು: ರಾಜ್ಯ ಬಿಜೆಪಿಯಲ್ಲಿ ನಡೆಯುತ್ತಿರುವ ವಿದ್ಯಮಾನಗಳು ಕುತೂಹಲಕರ ಘಟ್ಟ ತಲುಪಿದ್ದು, ಪಕ್ಷದ ರಾಜ್ಯಾಧ್ಯಕ್ಷ ವಿಜಯೇಂದ್ರ ವಿರುದ್ಧ ಸಮರ ಸಾರಿರುವ ಭಿನ್ನಮತೀಯ ನಾಯಕರು ಇದೀಗ ವಿಜಯೇಂದ್ರ ಪದಚ್ಯುತಿಗಾಗಿ ಮಾಡು ಇಲ್ಲವೇ ಮಡಿ ಹೋರಾಟಕ್ಕೆ ಕರೆ ನೀಡಿದ್ದಾರೆ.
- ಭಾರತದ 72% IAS ಅಧಿಕಾರಿಗಳು, 90% ಹೈಕೋರ್ಟ್ ನ್ಯಾಯಮೂರ್ತಿಗಳು ಬ್ರಾಹ್ಮಣರೇ?
- ಪ್ರವಾಸಿ ಮಾರ್ಗದರ್ಶಿ ತರಬೇತಿಗೆ ಅರ್ಜಿ ಆಹ್ವಾನ
- ಬೆಂಗಳೂರು ನಗರಾಭಿವೃದ್ಧಿ ಸಚಿವ ಕೃಷ್ಣ ಬೈರೇಗೌಡ ಅವರಿಂದ ‘ಫ್ರೀಡಂ ಹಬ್ಬ’ ಘೋಷಣೆ
- ರಾಜೀನಾಮೆ ಸಲ್ಲಿಸುವ ಮೂಲಕ ಅಸಮಾಧಾನ ವ್ಯಕ್ತಪಡಿಸಿದ ಬಿ.ಆರ್.ಪಾಟೀಲ್
- ಫೆಲೋಶಿಪ್ಗೆ ಅರ್ಜಿ ಆಹ್ವಾನ
ಮಾಜಿ ಸಚಿವ ಕುಮಾರ್ ಬಂಗಾರಪ್ಪ ಅವರ ನಿವಾಸದಲ್ಲಿ ಸಭೆ ಸೇರಿದ ಹಿರಿಯ ನಾಯಕ ಬಸನಗೌಡ ಪಾಟೀಲ್ ಯತ್ನಾಳ್ ನೇತೃತ್ವದ ಬಣ, ರಾಜ್ಯಾಧ್ಯಕ್ಷ ಸ್ಥಾನದಿಂದ ವಿಜಯೇಂದ್ರ ಬದಲಾಗುವವರೆಗೆ ಹೋರಾಟ ನಿಲ್ಲಿಸುವುದಿಲ್ಲ ಎಂದು ಘೋಷಿಸಿದರು.
ಸುದೀರ್ಘ ಸಭೆ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಬಸನಗೌಡ ಪಾಟೀಲ ಯತ್ನಾಳ್, ಸದ್ಯದಲ್ಲೇ ನಮ್ಮ ಬಣದ ಎಲ್ಲ ನಾಯಕರು ದೆಹಲಿಗೆ ತೆರಳಿ ಸಭೆ ಮಾಡುತ್ತಿದ್ದೇವೆ. ಅಲ್ಲಿ ವರಿಷ್ಠರ ಅನುಮತಿ ಪಡೆದು ರಾಜ್ಯಾಧ್ಯಕ್ಷ ಸ್ಥಾನಕ್ಕೆ ನಡೆಯುತ್ತಿರುವ ಚುನಾವಣೆಯಲ್ಲಿ ನಮ್ಮ ಅಭ್ಯರ್ಥಿಯ ಹೆಸರನ್ನು ಘೋಷಿಸುತ್ತೇವೆ ಎಂದರು.
ಪಕ್ಷದ ಅಧ್ಯಕ್ಷರಾಗಿ ವಿಜಯೇಂದ್ರ ಸರ್ವಾಧಿಕಾರಿ ಧೋರಣೆ ಅನುಸರಿಸುತ್ತಿದ್ದಾರೆ. ಕಾರ್ಯಕರ್ತರು ತೀವ್ರ ಅಸಮಾಧಾನಗೊಂಡಿದ್ದಾರೆ. ಈ ಹಿನ್ನೆಲೆಯಲ್ಲಿ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ ಪಿ ನಡ್ಡಾ ಅವರಿಗೆ ಸುದೀರ್ಘ ಪತ್ರವನ್ನು ಬರೆಯಲಾಗಿದೆ. ಪಕ್ಷದ ಚೌಕಟ್ಟಿನಲ್ಲಿ ಪತ್ರ ಬರೆಯಲಾಗಿದೆ ಎಂದರು.
ಜಿಲ್ಲಾಧ್ಯಕ್ಷರ ನೇಮಕಾತಿ ಪ್ರಕ್ರಿಯೆ ವ್ಯವಸ್ಥಿತ ರೀತಿಯಲ್ಲಿ ಮಾಡಿಲ್ಲ. ರಾಜ್ಯಾಧ್ಯಕ್ಷ ಆಗುವ ಉದ್ದೇಶದಿಂದ ಮಾಡಲಾಗಿದೆ. ಯಾರನ್ನು ವಿಶ್ವಾಸಕ್ಕೆ ತೆಗೆದುಕೊಂಡಿಲ್ಲ. ಏಕಪಕ್ಷೀಯವಾಗಿ ಬೇಕಾಬಿಟ್ಟಿ ಮಾಡಲಾಗಿದೆ ಎಂದು ಆರೋಪಿಸಿದರು.
ಜಿಲ್ಲಾಧ್ಯಕ್ಷರ ನೇಮಕಾತಿಯಲ್ಲಿ ಸಾಕಷ್ಟು ಗೊಂದಲ ಆಗಿದೆ. ಜಿಲ್ಲಾಧ್ಯಕ್ಷರ ಘೋಷಣೆ ಬಳಿಕ ತಟಸ್ಥ ಗುಂಪು ಜೆ ಪಿ ನಡ್ಡಾ ಅವರಿಗೆ ಪತ್ರವನ್ನು ಬರೆದಿದ್ದಾರೆ. ಏಕಪಕ್ಷೀಯವಾಗಿ ಚುನಾವಣೆ ನಡೆಸಲಾಗಿದೆ ಎಂದು ದೂರು ನೀಡಿದ್ದಾರೆ ಎಂದರು.
ರಾಜ್ಯಾಧ್ಯಕ್ಷ ಚುನಾವಣೆ ಬಂದರೆ ಅಭ್ಯರ್ಥಿ ಆಯ್ಕೆ ಮಾಡುವ ನಿಟ್ಟಿನಲ್ಲಿ ಇನ್ನೆರೆಡು ದಿನ ಚರ್ಚೆ ಮಾಡಿ ನಿರ್ಧಾರ ಮಾಡುತ್ತೇವೆ. ಈ ನಿಟ್ಟಿನಲ್ಲಿ ದೆಹಲಿಯಲ್ಲಿ ಸಭೆ ನಡೆಸುತ್ತೇವೆ. ಜಿಲ್ಲಾಧ್ಯಕ್ಷರ ನೇಮಕಾತಿ ಪಾರದರ್ಶಕವಾಗಿಲ್ಲ. ಅಪಮಾನ, ಅವಮಾನ ಮಾಡುವ ರೀತಿಯಲ್ಲಿ ಜಿಲ್ಲಾಧ್ಯಕ್ಷರ ಆಯ್ಕೆ ನಡೆದಿದೆ ಎಂದು ಅಸಮಾಧಾನ ವ್ಯಕ್ತಪಡಿಸಿದರು.
ನಮ್ಮ ಹೋರಾಟಕ್ಕೆ ನಾವು ಬದ್ಧ, ಯಾವುದೇ ಬದಲಾವಣೆ ಇಲ್ಲ. ದೆಹಲಿಯಲ್ಲಿ ಸಂಸತ್ ಅಧಿವೇಶನ ನಡೆಯುತ್ತಿದೆ. ಅಲ್ಲಿ ಎಲ್ಲರ ಜೊತೆಗೆ ಚರ್ಚೆ ಮಾಡಿ ಯಾರನ್ನು ರಾಜ್ಯಾಧ್ಯಕ್ಷರನ್ನಾಗಿ ಆಯ್ಕೆ ಮಾಡುವ ನಿಟ್ಟಿನಲ್ಲಿ ಚರ್ಚೆ ಮಾಡಿ ನಿರ್ಣಯ ಕೈಗೊಳ್ಳುತ್ತೇವೆ ಎಂದರು.
23 ಜಿಲ್ಲಾಧ್ಯಕ್ಷರ ನೇಮಕಾತಿಗೆ ಒಪ್ಪಿಗೆ ಇಲ್ಲ. ಯಾರನ್ನು ವಿಶ್ವಾಸಕ್ಕೆ ತೆಗೆದುಕೊಂಡಿಲ್ಲ. ರಾತ್ರೋ ರಾತ್ರಿ ನಮಗೆ ಬೇಕಾದವರನ್ನು ಆಯ್ಕೆ ಮಾಡಲಾಗಿದೆ. ಯಾರನ್ನು ವಿಶ್ವಾಸಕ್ಕೆ ತೆಗೆದುಕೊಂಡಿಲ್ಲ. ನಾಯಕತ್ವ ಎಂದರೆ ಏನು? ರಾಜ್ಯಾಧ್ಯಕ್ಷ ಬಿಜೆಪಿ ಕರ್ನಾಟಕದ ನಾಯಕ ಆಗಬೇಕು. ಆದರೆ ವಿಜಯೇಂದ್ರ ಉದ್ಧಟತನದಿಂದ ವರ್ತಿಸುತ್ತಿದ್ದಾರೆ. ಇದು ಆತಂಕಕಾರಿ. ಮುಂದಿನ ದಿನಗಳಲ್ಲಿ ಬಿಜೆಪಿ ಅಧಿಕಾರಕ್ಕೆ ಬರಬೇಕು, ಒಳ್ಳೆಯ ಆಡಳಿತ ನೀಡಬೇಕು ಎಂಬ ನಿಟ್ಟಿನಲ್ಲಿ ನಮ್ಮ ಹೋರಾಟ ಎಂದರು.
ಜಿಲ್ಲಾಧ್ಯಕ್ಷರ ನೇಮಕ ಸಂದರ್ಭದಲ್ಲಿ ಕೇಂದ್ರವನ್ನು ವಿಶ್ವಾಸಕ್ಕೆ ತೆಗೆದುಕೊಂಡಿದ್ದಾರಾ ಎಂಬುದು ಗೊತ್ತಿಲ್ಲ. ಹೈಕಮಾಂಡ್ ನಮ್ಮನ್ನು ಕೇಳಲೇ ಇಲ್ಲ ಎಂದು ಹೇಳಲು ಸಾಧ್ಯವಿಲ್ಲ. ಯಡಿಯೂರಪ್ಪ ಬಿಟ್ಟರೆ ಬಿಜೆಪಿ ಇಲ್ಲ ಎಂಬ ವಾತಾವರಣ ಇತ್ತು, ಆದರೆ ಈಗಿಲ್ಲ ಎಂದರು.
ಎಸ್ ಆರ್ ವಿಶ್ವನಾಥ ನಿಷ್ಠೆ ಬಿಎಸ್ ಯಡಿಯೂರಪ್ಪಗೆ, ವಿಜಯೇಂದ್ರಗೆ ಅಲ್ಲ. ನಮ್ಮ ಶಕ್ತಿ ದೊಡ್ಡದಾಗಿದೆ. ದೊಡ್ಡ ಗುಂಪು ತಯಾರಾಗಿದೆ. ಎಲ್ಲ ಒಂದೇ ಮನಸ್ಥಿತಿ ಹೊಂದಿದ್ದೇವೆ ಎಂದರು.
ನಮ್ಮದು ಡು ಆರ್ ಡೈ, ಇದೊಂದು ಯುದ್ಧ, ಹಿಂದೆ ಸರಿಯುವ ಪ್ರಶ್ನೆ ಇಲ್ಲ. ರಾಜ್ಯಾಧ್ಯಕ್ಷ ಅಷ್ಟು ಬೇಗ ಆಯ್ಕೆ ಮಾಡುವುದಿಲ್ಲ. ಹಿರಿಯ ನಾಯಕರ ಅಭಿಪ್ರಾಯ ಪಡೆಯಬೇಕು. ಇನ್ನೂ ಸಾಕಷ್ಟು ಪ್ರಕ್ರಿಯೆ ಇದೆ. ಹೈಕಮಾಂಡ್ ಗೆ ಈಗ ಮನವರಿಕೆ ಆಗ್ತಿದೆ ಎಂದರು.



