ನನ್ನ ಮತ್ತು ನನ್ನ ಕುಟುಂಬದ ವಿರುದ್ಧ ಬೆದರಿಕೆಗಳು, ಅತ್ಯಂತ ಕೀಳು ಪದಗಳ ನಿಂದನೆಗಳಿಂದ ತುಂಬಿದ ಕರೆಗಳು ಬರುತ್ತಲೇ ಇವೆ: ಪ್ರಿಯಾಂಕ್ ಖರ್ಗೆ
ಬೆಂಗಳೂರು: ನನ್ನ ಮತ್ತು ನನ್ನ ಕುಟುಂಬದ ವಿರುದ್ಧ ಬೆದರಿಕೆಗಳು, ಅತ್ಯಂತ ಕೀಳು ಪದಗಳ ನಿಂದನೆಗಳಿಂದ ತುಂಬಿದ ಕರೆಗಳು ಬರುತ್ತಲೇ ಇವೆ ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಪ್ರಿಯಾಂಕ್ ಖರ್ಗೆ ಹೇಳಿದ್ದಾರೆ.
- ಭಾರತದ 72% IAS ಅಧಿಕಾರಿಗಳು, 90% ಹೈಕೋರ್ಟ್ ನ್ಯಾಯಮೂರ್ತಿಗಳು ಬ್ರಾಹ್ಮಣರೇ?
- ಪ್ರವಾಸಿ ಮಾರ್ಗದರ್ಶಿ ತರಬೇತಿಗೆ ಅರ್ಜಿ ಆಹ್ವಾನ
- ಬೆಂಗಳೂರು ನಗರಾಭಿವೃದ್ಧಿ ಸಚಿವ ಕೃಷ್ಣ ಬೈರೇಗೌಡ ಅವರಿಂದ ‘ಫ್ರೀಡಂ ಹಬ್ಬ’ ಘೋಷಣೆ
- ರಾಜೀನಾಮೆ ಸಲ್ಲಿಸುವ ಮೂಲಕ ಅಸಮಾಧಾನ ವ್ಯಕ್ತಪಡಿಸಿದ ಬಿ.ಆರ್.ಪಾಟೀಲ್
- ಫೆಲೋಶಿಪ್ಗೆ ಅರ್ಜಿ ಆಹ್ವಾನ
ಸಾಮಾಜಿಕ ಜಾಲತಾಣಗಳಲ್ಲಿ ಪ್ರತಿಕ್ರಿಯೆ ನೀಡಿರುವ ಅವರು, ಕಳೆದ ಎರಡು ದಿನಗಳಿಂದ ನನ್ನ ಫೋನ್ ರಿಂಗಣಿಸುವುದನ್ನು ನಿಲ್ಲಿಸಿಲ್ಲ. ಸರ್ಕಾರಿ ಶಾಲೆಗಳು, ಕಾಲೇಜುಗಳು ಮತ್ತು ಸಾರ್ವಜನಿಕ ಸಂಸ್ಥೆಗಳಲ್ಲಿ ಆರ್‌ಎಸ್‌ಎಸ್ ಚಟುವಟಿಕೆಗಳನ್ನು ಪ್ರಶ್ನಿಸುವ ಹಾಗೂ ತಡೆಯುವ ಧೈರ್ಯ ಮಾಡಿದ್ದರಿಂದ ನನ್ನ ಮತ್ತು ನನ್ನ ಕುಟುಂಬದ ವಿರುದ್ಧ ಬೆದರಿಕೆಗಳು, ಅತ್ಯಂತ ಕೀಳು ಪದಗಳ ನಿಂದನೆಗಳಿಂದ ತುಂಬಿದ ಕರೆಗಳು ಬರುತ್ತಲೇ ಇವೆ ಎಂದಿದ್ದಾರೆ.
ಆದರೆ ನಾನು ಇದರಿಂದ ವಿಚಲಿತನಾಗುವುದಿಲ್ಲ ಅಥವಾ ನನಗೆ ಅಚ್ಚರಿಯೂ ಆಗಿಲ್ಲ. ಮಹಾತ್ಮ ಗಾಂಧಿ ಅಥವಾ ಬಾಬಾಸಾಹೇಬ್ ಅಂಬೇಡ್ಕರ್ ಅವರಂತಹ ಮಹಾನ್ ನಾಯಕರನ್ನೇ ಆರ್‌ಎಸ್‌ಎಸ್ ಬಿಟ್ಟಿಲ್ಲ, ಇನ್ನು ಅವರು ನನ್ನನ್ನು ಹೇಗೆ ಬಿಡುತ್ತಾರೆ? ಎಂದು ಅವರು ಪ್ರಶ್ನಿಸಿದ್ದಾರೆ.
ಬೆದರಿಕೆಗಳು ಮತ್ತು ವೈಯಕ್ತಿಕ ನಿಂದನೆಗಳಿಂದ ನನ್ನ ಬಾಯಿ ಮುಚ್ಚಿಸಬಹುದು ಎಂದು ಅವರು ಭಾವಿಸಿದ್ದರೆ, ಅದು ಅವರ ಕಲ್ಪನೆ ಮಾತ್ರ. ಇದಿನ್ನೂ ಆರಂಭವಷ್ಟೇ. ಇದು ಬುದ್ಧ, ಬಸವಣ್ಣ ಮತ್ತು ಬಾಬಾಸಾಹೇಬ್ ಅವರ ತತ್ವಗಳ ಮೇಲೆ ಸಮಾಜವನ್ನು ನಿರ್ಮಿಸುವ ಕಾಲ. ಸಮಾನತೆ, ವಿವೇಚನೆ ಮತ್ತು ಕರುಣೆಯಲ್ಲಿ ಬೇರೂರಿರುವ ಸಮಾಜ ಹಾಗೂ ಈ ರಾಷ್ಟ್ರವನ್ನು ಅತ್ಯಂತ ಅಪಾಯಕಾರಿ “viRuSS” ಗಳಿಂದ ಶುದ್ಧೀಕರಿಸುವ ಸಮಯ ಇದಾಗಿದೆ ಎಂದಿದ್ದಾರೆ.



