ಬೆಂಗಳೂರು: ಗ್ರಾಮೀಣ ಪ್ರದೇಶಗಳಲ್ಲಿನ ಆಸ್ತಿಗಳ ನೋಂದಣಿಗೆ ಕಂದಾಯ ಇಲಾಖೆಯ ಇ-ಸ್ವತ್ತು ಕಡ್ಡಾಯಗೊಳಿಸಿದೆ. ಈ ಹಿನ್ನೆಲೆಯಲ್ಲಿ ಕಾಲಮಿತಿ ಒಳಗೆ ಇ ಸ್ವತ್ತು ವಿತರಿಸಿ ಬಾಕಿ ಇರುವ ಆಸ್ತಿ ತೆರಿಗೆ ಸಂಗ್ರಹಕ್ಕೆ ಅಭಿಯಾನ ಆರಂಭಿಸಲಾಗುವುದು ಎಂದು ಗ್ರಾಮೀಣ ಅಭಿವೃದ್ಧಿ ಸಚಿವ ಪ್ರಿಯಾಂಕ್ ಖರ್ಗೆ ಹೇಳಿದ್ದಾರೆ.
- ಗದಗವನ್ನು ಬರಪೀಡಿತ ತಾಲೂಕುಗಳ ಪಟ್ಟಿಗೆ ಸೇರಿಸದಿದ್ದರೆ ಶಾಸಕ ಸ್ಥಾನಕ್ಕೆ ರಾಜೀನಾಮೆ: ಎಚ್ ಕೆ ಪಾಟೀಲ್
- ತುಳು ರಾಜ್ಯದ ಎರಡನೇ ಹೆಚ್ಚುವರಿ ಅಧಿಕೃತ ಭಾಷೆಯಾಗಿ ಮಾನ್ಯತೆ: ಸಿದ್ದರಾಮಯ್ಯ
- ಪೆರಿಯಾರ್ ಆಗ್ನೇಯ ಏಷ್ಯಾದ ಸಾಕ್ರೆಟಿಸ್: ಎ.ಜಿ.ಕಾಂಬಳೆ
- ಕೇಂದ್ರ ಸಚಿವ ಸಂಪುಟ ಸಭೆ ಬೇರೆ ರಾಜ್ಯಗಳಲ್ಲಿ ನಡೆಯಲಿ
- ಪಿ.ಪಿ.ಪಿ ಮಾದರಿ ಕೈ ಬಿಡಲು ಒತ್ತಾಯಿಸಿ ಸಚಿವ ಸಂಪುಟ ಸಭೆಗೆ ಮೆರವಣಿಗೆ: ಸಿಪಿಐಎಂ
ಇಲಾಖೆಯ ಹಿರಿಯ ಅಧಿಕಾರಿಗಳೊಂದಿಗೆ ಪ್ರಗತಿ ಪರಿಶೀಲನಾ ಸಭೆ ನಡೆಸಿದ ಅವರು ನಂತರ ಸುದ್ದಿಗಾರರೊಂದಿಗೆ ಮಾತನಾಡಿ, ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿ ಬಾಕಿ ಇರುವ ಸುಮಾರು 90 ಲಕ್ಷ ಆಸ್ತಿಗಳಿಗೆ ಕಾಲಮಿತಿಯೊಳಗೆ ಇ-ಸ್ವತ್ತು ವಿತರಣೆ ಮಾಡಲಾಗುವುದು ಎಂದರು.
ಇ ಸ್ವತ್ತು ವಿತರಣೆ ಮುಗಿಯುತ್ತಿದ್ದಂತೆ ಬಾಕಿ ಇರುವ ಆಸ್ತಿ ತೆರಿಗೆ ಸಂಗ್ರಹಕ್ಕೆ ಅಧಿಕಾರಿಗಳು ಕ್ರಮ ಕೈಗೊಳ್ಳಬೇಕು. ಪಂಚಾಯಿತಿಗಳ ಕಾರ್ಯನಿರ್ವಹಣಾ ಅಧಿಕಾರಿಗಳು ಈ ಬಗ್ಗೆ ವಿಶೇಷ ಗಮನಹರಿಸುವಂತೆ ಸೂಚಿಸಲಾಗಿದೆ ಎಂದರು.
ಇನ್ನು ಮುಂದೆ ಗ್ರಾಮೀಣ ಪ್ರದೇಶದ ಯಾವುದೇ ಕಂದಾಯ ಜಮೀನಿನಲ್ಲಿ ಬಡಾವಣೆ ನಿರ್ಮಾಣಕ್ಕೆ ಅವಕಾಶ ನೀಡದಿರಲು ತೀರ್ಮಾನಿಸಲಾಗಿದೆ. ಹೊಸ ಬಡಾವಣೆಗಳ ನಿರ್ಮಾಣವನ್ನು ತಡೆಯಲು ಕಟ್ಟುನಿಟ್ಟಿನ ಕ್ರಮಗಳನ್ನು ಕೈಗೊಳ್ಳಬೇಕು ಎಂದು ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ ಎಂದರು.
ಖಾತಾ ಇಲ್ಲದ ಬಹಳಷ್ಟು ಆಸ್ತಿಗಳನ್ನು ಖೊಟ್ಟಿ ದಾಖಲೆಗಳನ್ನು ಸೃಷ್ಟಿಸಿ ನಿವೇಶನ ಹಾಗೂ ಮನೆಗಳನ್ನು ನೋಂದಣಿ ಮಾಡುವ ಬಗ್ಗೆ ವರದಿಗಳು ಬರುತ್ತಿದ್ದು, ಇಂತಹ ಪ್ರಕ್ರಿಯೆಗೆ ಕಡಿವಾಣ ಹಾಕಬೇಕು. ಈ ವಿಷಯದಲ್ಲಿ ನೋಂದಣಿ ಇಲಾಖೆ ಮತ್ತು ಪಂಚಾಯತಿಗಳು ಸಮನ್ವಯತೆಯಿಂದ ಕೆಲಸ ಮಾಡಲು ಸೂಚಿಸಲಾಗಿದೆ ಎಂದರು.




