ಬೆಂಗಳೂರು: ಲೈಂಗಿಕ ಕಿರುಕುಳ ಆರೋಪದ ಸುಳಿಗೆ ಸಿಲುಕಿರುವ ಹಾಸನ ಸಂಸದ ಪ್ರಜ್ವಲ್ ರೇವಣ್ಣ ಅವರ ರಾಜತಾಂತ್ರಿಕ ಪಾಸ್ ಪೋರ್ಟ್ ರದ್ದುಪಡಿಸಿ ಕೂಡಲೇ ಅವರನ್ನು ವಿದೇಶದಿಂದ ಕರೆ ತರಲು ಕ್ರಮ ಕೈಗೊಳ್ಳಬೇಕು ಎಂದು ಸಿಎಂ ಸಿದ್ದರಾಮಯ್ಯ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದಾರೆ.
- ಗದಗವನ್ನು ಬರಪೀಡಿತ ತಾಲೂಕುಗಳ ಪಟ್ಟಿಗೆ ಸೇರಿಸದಿದ್ದರೆ ಶಾಸಕ ಸ್ಥಾನಕ್ಕೆ ರಾಜೀನಾಮೆ: ಎಚ್ ಕೆ ಪಾಟೀಲ್
- ತುಳು ರಾಜ್ಯದ ಎರಡನೇ ಹೆಚ್ಚುವರಿ ಅಧಿಕೃತ ಭಾಷೆಯಾಗಿ ಮಾನ್ಯತೆ: ಸಿದ್ದರಾಮಯ್ಯ
- ಪೆರಿಯಾರ್ ಆಗ್ನೇಯ ಏಷ್ಯಾದ ಸಾಕ್ರೆಟಿಸ್: ಎ.ಜಿ.ಕಾಂಬಳೆ
- ಕೇಂದ್ರ ಸಚಿವ ಸಂಪುಟ ಸಭೆ ಬೇರೆ ರಾಜ್ಯಗಳಲ್ಲಿ ನಡೆಯಲಿ
- ಪಿ.ಪಿ.ಪಿ ಮಾದರಿ ಕೈ ಬಿಡಲು ಒತ್ತಾಯಿಸಿ ಸಚಿವ ಸಂಪುಟ ಸಭೆಗೆ ಮೆರವಣಿಗೆ: ಸಿಪಿಐಎಂ
ಸಂಸದ ಪ್ರಜ್ವಲ್ ರೇವಣ್ಣ ಅವರ ವಿರುದ್ಧ ಅತ್ಯಂತ ಗುರುತರವಾದ ಆರೋಪಗಳಿವೆ. ಈ ಹಿನ್ನೆಲೆಯಲ್ಲಿ ಅವರನ್ನು ವಿದೇಶದಿಂದ ವಾಪಸ್ ಕರೆಯಿಸಿಕೊಂಡು ಪೊಲೀಸರು ಕಾನೂನು ಪ್ರಕ್ರಿಯೆ ಕೈಗೊಳ್ಳಲು ಅವಕಾಶ ಕಲ್ಪಿಸಿ ಕೊಡಬೇಕು ಎಂದು ಪತ್ರದಲ್ಲಿ ಕೋರಿದ್ದಾರೆ.
ಪ್ರಜ್ವಲ್ ರೇವಣ್ಣ ಅವರು ಅಸಂಖ್ಯಾತ ಮಹಿಳೆಯರಿಗೆ ಲೈಂಗಿಕ ಕಿರುಕುಳ ನೀಡುವ ಆರೋಪದಲ್ಲಿ ಸಿಲುಕಿದ್ದಾರೆ. ಅವರ ಮೇಲಿರುವ ಆರೋಪಗಳು ಭಯಾನಕ ಮತ್ತು ನಾಚಿಕೆಗೇಡಿನ ಪರಮಾವಧಿ ಈ ಪ್ರಕರಣ ದೇಶದ ಆತ್ಮಸಾಕ್ಷಿಯನ್ನು ಅಲುಗಾಡಿಸಿದೆ ಎಂದು ಕಳವಳ ವ್ಯಕ್ತಪಡಿಸಿದ್ದಾರೆ.
ಕರ್ನಾಟಕ ಸರ್ಕಾರ ಈ ಪ್ರಕರಣವನ್ನು ಅತ್ಯಂತ ಗಂಭೀರವಾಗಿ ಪರಿಗಣಿಸಿದ್ದು ತನಿಖೆಗಾಗಿ ವಿಶೇಷ ತನಿಖಾ ತಂಡ ರಚಿಸಿದೆ. ಇದರ ಸುಳಿವು ಅರಿತ ಸಂಸದ ಪ್ರಜ್ವಲ್ ರೇವಣ್ಣ ರಾಜತಾಂತ್ರಿಕ ಪಾಸ್ ಪೋರ್ಟ್ ಬಳಸಿ ವಿದೇಶಕ್ಕೆ ಪರಾರಿಯಾಗಿದ್ದಾರೆ. ಈ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರ ಸಂಸದರ ರಾಜತಾಂತ್ರಿಕ ಪಾಸ್ಪೋರ್ಟ್ ರದ್ದುಪಡಿಸಬೇಕು ಮತ್ತು ವಿದೇಶಿ ಪೊಲೀಸ್ ಜಾಲಗಳನ್ನು ಬಳಸಿಕೊಂಡು ಅವರನ್ನು ಉದ್ದೇಶಕ್ಕೆ ಕರೆತರಬೇಕು ಎಂದು ಆಗ್ರಹಿಸಿದ್ದಾರೆ.
\




