ಬೆಂಗಳೂರು: ರಸ್ತೆ ಅಪಘಾತಗಳನ್ನು ನಿಯಂತ್ರಿಸುವ ದೃಷ್ಟಿಯಿಂದ ಸಂಚಾರಿ ನಿಯಮಗಳನ್ನು ಉಲ್ಲಂಘಿಸುವವರಿಗೆ ಇನ್ನು ಮುಂದೆ ನೋಟಿಸ್ ನೀಡಿ ದಂಡ ವಿಧಿಸುವ ಬದಲು ಚಾಲನಾ ಪರವಾನಗಿಯನ್ನೇ ರದ್ದು ಮಾಡಿ ಎಂದು ಸಿಎಂ ಸಿದ್ದರಾಮಯ್ಯ ಸೂಚಿಸಿದ್ದಾರೆ.
- Modi is confident that he can capture the Delimitation Commission too: Rahul Gandhi
- ಅಳವು ಅರಿಯದ ಭಾಷೆ – ತುಳುನಾಡಿನ ಅತ್ಯಂತ ಹೆಮ್ಮೆಯ ಕೃತಿ
- ಬದುಕುವ ದಾರಿ ಮಾತ್ರ ಶಿಕ್ಷಣವಲ್ಲ, ಮಾನವೀಯತೆಯೇ ನಿಜವಾದ ವಿದ್ಯೆ: ಸಿದ್ದರಾಮಯ್ಯ
- ಮರಾಠಿ ಕಡ್ಡಾಯಗೊಳಿಸಿದ ಮಹಾರಾಷ್ಟ್ರ ಮಾದರಿ ಕರ್ನಾಟಕಕ್ಕೂ ಬರಲಿ: ಟಿ.ಎ. ನಾರಾಯಣಗೌಡ
- ಅಂಬೇಡ್ಕರ್ ಸಂವಿಧಾನ ಸಮಿತಿಯಲ್ಲಿ ಇರದೇ ಇದ್ದರೆ ಸಂವಿಧಾನ ಸರ್ವವ್ಯಾಪಕವಾಗುತ್ತಿರಲಿಲ್ಲ: ಬೊಮ್ಮಾಯಿ
ಮುಖ್ಯಮಂತ್ರಿಗಳ ಆಪತ್ಕಾಲಯಾನ ಸೇವೆ ಅಡಿಯಲ್ಲಿ ನೂತನವಾಗಿ 45 ಆ್ಯಂಬುಲೆನ್ಸ್ ಗಳನ್ನು ಲೋಕಾರ್ಪಣೆಗೊಳಿಸಿ ಮಾತನಾಡಿದ ಅವರು, ಸರ್ಕಾರ ಎಷ್ಟೇ ಪ್ರಯತ್ನ ಮಾಡಿದರೂ ಜನಸಾಮಾನ್ಯರು ಹಾಗೂ ವಾಹನ ಸವಾರರು ನಿಯಮಗಳನ್ನು ಪಾಲನೆ ಮಾಡದೇ ಇದ್ದರೆ ಅಪಘಾತಗಳನ್ನು ಕಡಿಮೆ ಮಾಡಲು ಸಾಧ್ಯವಿಲ್ಲ ಎಂದರು.
ಸಂಚಾರ ವ್ಯವಸ್ಥೆಗೆ ಕಟ್ಟುನಿಟ್ಟಿನ ನಿಯಮಗಳಿದ್ದರೂ, ಉಲ್ಲಂಘನೆ ಪ್ರಕರಣಗಳು ವರದಿಯಾಗುತ್ತಲೇ ಇವೆ. ಕೆಲವರ ನಿರ್ಲಕ್ಷ್ಯದ ಫಲವಾಗಿ ತಪ್ಪು ಮಾಡದ ಹಲವರು ಜೀವ ಕಳೆದುಕೊಳ್ಳುವಂತಾಗಿದೆ. ಸಂಚಾರಿ ನಿಯಮಗಳನ್ನು ಶಿಸ್ತಿನಿಂದ ಪಾಲಿಸಿದರೆ ಬಹುತೇಕ ಅಪಘಾತಗಳನ್ನು ತಡೆಯಬಹುದು ಎಂದರು.
ಕುಡಿದು, ಮೊಬೈಲ್ನಲ್ಲಿ ಮಾತನಾಡುತ್ತಾ ವಾಹನ ಚಾಲಾಯಿಸುವ ಪ್ರಕರಣಗಳಿಗೆ ಸಂಪೂರ್ಣ ಕಡಿವಾಣ ಬೀಳಬೇಕು. ಎಲ್ಲ ರೀತಿಯ ಅಪಘಾತ ಪ್ರಕರಣಗಳನ್ನು ನಿಯಂತ್ರಣಕ್ಕೆ ತರಲು ನೀಯಮಗಳನ್ನು ಕಟ್ಟುನಿಟ್ಟಾಗಿ ಜಾರಿಗೆ ತರಬೇಕು. ನಿಯಮ ಉಲ್ಲಂಘಿಸಿದವರ ಪರವಾನಗಿ ರದ್ದು ಮಾಡಬೇಕು ಎಂದರು.
ಸಂಚಾರ ನಿಯಮಗಳನ್ನು ಉಲ್ಲಂಘನೆ ಮಾಡಿದರೆ ಚಾಲನಾ ಪರವಾನಗಿ ರದ್ದು ಮಾಡುವ ವ್ಯವಸ್ಥೆ ವಿದೇಶದಲ್ಲಿದೆ. ನಮ್ಮಲ್ಲೂ ಅದೇ ಪದ್ಧತಿಯನ್ನು ಪಾಲನೆ ಮಾಡಿ. ನೋಟಿಸ್ ಕೊಡುವುದು ಬೇಡ. ನೇರವಾಗಿ ಪರವಾನಗಿ ರದ್ದು ಮಾಡಿ, ತಪ್ಪು ಮಾಡಿದವರು ಕೋರ್ಟ್ ಗೆ ಹೋಗಲಿ ಎಂದು ಸೂಚಿಸಿದರು.
ಇಲ್ಲಿ ಮೂತ್ರವಿಸರ್ಜನೆ ಮಾಡಬೇಡಿ ಎಂದು ಬೋರ್ಡ್ ಇದ್ದರೆ ನಿಷೇಧಿತ ಕೆಲಸವನ್ನು ಅಲ್ಲಿಯೇ ಮಾಡಿ ಸಬೂಬು ಹೇಳುತ್ತಾರೆ. ಈ ರೀತಿಯ ಧೋರಣೆಗಳನ್ನು ಜನ ಬಿಟ್ಟು ಬದಲಾಗಬೇಕು. ನಿಯಮ ಪಾಲನೆ ಪ್ರತಿಯೊಬ್ಬರ ಜವಾಬ್ದಾರಿ. ವಾಹನಗಳನ್ನು ಸುರಕ್ಷತಾ ಸ್ಥಿತಿಯಲ್ಲಿಟ್ಟುಕೊಂಡಿರಬೇಕು. ನನಗೆ ಡ್ರೈವಿಂಗ್ ಬರುವುದಿಲ್ಲ, ತುಂಬಾ ಜನ ಫೋನಿನಲ್ಲಿ ಮಾತನಾಡುತ್ತಲೇ ವಾಹನ ಚಲಾವಣೆ ಮಾಡುವುದನ್ನು ನೋಡಿದ್ದೇನೆ. ವೇಗಮಿತಿ 80 ಕಿ.ಮೀ. ಇದ್ದರೆ 120 ಕಿ.ಮೀ. ವೇಗದಲ್ಲಿ ಗಾಡಿ ಓಡಿಸುತ್ತಾರೆ ಎಂದರು.
ಅಪಘಾತದಂತಹ ಸಂದರ್ಭದಲ್ಲಿ ಯುವಕರು ಹಾಗೂ ವಿದ್ಯಾರ್ಥಿಗಳ ಜೀವಹಾನಿಯಾದರೆ ಮುಂದೆ ಅವರಿಂದ ದೇಶಕ್ಕೆ ದೊರೆಯಬಹುದಾದ ಸೇವೆಗಳು ಇಲ್ಲವಾಗುತ್ತವೆ. ಕುಟುಂಬಗಳು ಸಂಕಷ್ಟಕ್ಕೆ ಸಿಲುಕುತ್ತವೆ. ಗಾಯಾಳುಗಳಾದಾಗ ಜೀವನವೇ ತೊಂದರೆಗೊಳಗಾಗುತ್ತದೆ ಎಂದರು.
ರಾಜ್ಯದಲ್ಲಿ ಪ್ರತಿವರ್ಷ 40 ಸಾವಿರ ಅಪಘಾತಗಳಾಗುತ್ತಿವೆ. ಅದರಲ್ಲಿ 9 ರಿಂದ 10 ಸಾವಿರ ಜನ ಜೀವ ಕಳೆದುಕೊಳ್ಳುತ್ತಿದ್ದಾರೆ. ಅಪಘಾತಗಳನ್ನು ತಗ್ಗಿಸಲು 2017 ರಲ್ಲಿ ರಸ್ತೆ ಸುರಕ್ಷತಾ ಪ್ರಾಧಿಕಾರ ರಚನೆಯಾಗಿದೆ. ಅದರಲ್ಲಿ ಸಂಗ್ರಹಿಸಲಾಗುವ ನಿಧಿಯಲ್ಲಿ 45 ಕೋಟಿ ರೂ.ಗಳನ್ನು ಆರೋಗ್ಯ ಇಲಾಖೆಗೆ ನೀಡಲಾಗಿದ್ದು, ಇದರಿಂದ 65 ಹೊಸ ಆ್ಯಂಬುಲೆನ್ಸ್ ಗಳನ್ನು ಖರೀದಿಸಲಾಗಿದೆ ಎಂದರು.




