ಬೆಂಗಳೂರು: ಸಾರ್ವಜನಿಕ ವಾಹನಗಳಲ್ಲಿ ಎಲ್ಲ ಸುರಕ್ಷತಾ ಕ್ರಮಗಳನ್ನು ಕಟ್ಟುನಿಟ್ಟಾಗಿ ಜಾರಿಗೆ ತರಬೇಕು, ತಪ್ಪಿದಲ್ಲಿ ವಾಹನಗಳ ಪರವಾನಗಿ ರದ್ದುಪಡಿಸಿ ಸಂಬಂಧಪಟ್ಟವರ ವಿರುದ್ಧ ಕಾನೂನು ಕ್ರಮ ಜರುಗಿಸಲಾಗುವುದು ಎಂದು ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ ಹೇಳಿದ್ದಾರೆ.
- ವರ್ಷದ ಬಳಿಕ ಸೆರೆಮನೆಯಿಂದ ಹೊರಬಂದ ನಟಿ ರನ್ಯಾ ರಾವ್!
- ಪ್ರೊ. ಎಸ್. ಬಿಳಿಗಿರಿ ವಾಸನ್ ಅವರಿಗೆ ಅಭಿನಂದನಾ ಸಮಾರಂಭ
- ಬಸವಣ್ಣನವರ ವಚನಗಳು ವಿಶ್ವವಿದ್ಯಾಲಯಗಳು ಹೇಳಿಕೊಡುವ ಪಾಠಕ್ಕಿಂತ ಕಡಿಮೆಯಲ್ಲ: ಸಾಜೀದ್ ಮುಲ್ಲಾ
- ಮಹಿಳೆಯರಿಗೆ ಶೇ.33ರಷ್ಟು ಮೀಸಲಾತಿ ಮಸೂದೆ ಅಂಗೀಕಾರವಾಗಿದೆ
- ಮಹಿಳಾ ಮೀಸಲಾತಿ ವಿಷಯದಲ್ಲಿ ಮೋದಿ ಸರ್ಕಾರದಿಂದ ಮಹಿಳೆಯರಿಗೆ ದ್ರೋಹ: ಸಿದ್ದರಾಮಯ್ಯ
ಸುದ್ದಿಗಾರರೊಂದಿಗೆ ಮಾತನಾಡಿದರು ಅವರು, ಸಾರ್ವಜನಿಕ ಸೇವಾ ವಾಹನಗಳಲ್ಲಿ ತುರ್ತು ನಿರ್ಗಮನ ದ್ವಾರ ಇಲ್ಲದಿದ್ದರೂ ನೋಂದಣಿ ಮತ್ತು ಅರ್ಹತಾ ಪತ್ರ ನೀಡುವ ಅಧಿಕಾರಿಗಳ ವಿರುದ್ಧ ಶಿಸ್ತು ಕ್ರಮ ಕೈಗೊಳ್ಳಲಾಗುವುದು ಎಂದು ಎಚ್ಚರಿಸಿದರು.
ಸಾರ್ವಜನಿಕ ಸೇವೆ ನೀಡುವ ವಾಹನಗಳಲ್ಲಿ ತುರ್ತು ನಿರ್ಗಮನ ದ್ವಾರ ಅಳವಡಿಕೆ ಕಡ್ಡಾಯಗೊಳಿಸಲಾಗಿದೆ. ಹೀಗಾಗಿ ವಾಹನಗಳ ನೋಂದಣಿ ಮತ್ತು ಅರ್ಹತಾ ಪತ್ರ ನೀಡುವ ಮುನ್ನ ತುರ್ತು ನಿರ್ಗಮನ ದ್ವಾರ ಅಳವಡಿಸಲಾಗಿದೆಯೇ ಎಂಬುದನ್ನು ದೃಢಪಡಿಸಿಕೊಳ್ಳಬೇಕು ಎಂದರು.
ಒಂದು ವೇಳೆ ತುರ್ತು ನಿರ್ಗಮನ ದ್ವಾರ ಇಲ್ಲದಿದ್ದರೂ ನೋಂದಣಿ ಮತ್ತು ಅರ್ಹತಾ ಪತ್ರ ನವೀಕರಣ ಮಾಡಿರುವುದು ಕಂಡು ಬಂದರೆ ಅಂತಹ ಅಧಿಕಾರಿಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು. ಈ ಕುರಿತು ಎಲ್ಲ ನೋಂದಣಿ ಪ್ರಾಧಿಕಾರಗಳಿಗೆ ಸುತ್ತೋಲೆ ಹೊರಡಿಸಬೇಕು ಎಂದು ಸಾರಿಗೆ ಆಯುಕ್ತರಿಗೆ ನಿರ್ದೇಶನ ನೀಡಿದರು.
ಕೆಲ ವಾಹನಗಳು ಕಿಟಕಿ ಗಾಜುಗಳನ್ನೇ ತುರ್ತು ನಿರ್ಗಮನ ದ್ವಾರವೆಂದು ಅಳವಡಿಸಿರುವುದು ಕಂಡುಬಂದಿದೆ. ಅದರ ಬಗ್ಗೆಯೂ ಪರಿಶೀಲನೆ ನಡೆಸಬೇಕು. ಪ್ರವರ್ತನ ಕಾರ್ಯ ನಡೆಸುವ ಸಿಬ್ಬಂದಿ, ಅಧಿಕಾರಿಗಳು ಈ ಕುರಿತು ವಾಹನಗಳನ್ನು ಪರಿಶೀಲಿಸುವಾಗ ಗಮನಿಸಬೇಕು ಎಂದರು.
ಸಾರ್ವಜನಿಕ ಸೇವೆ ನೀಡುವ ವಾಹನಗಳಲ್ಲಿ ನಿಗದಿಗಿಂತ ಹೆಚ್ಚಿನ ಸರಕು ಸಾಗಣೆ ಮಾಡುತ್ತಿರುವುದು ಕಂಡುಬರುತ್ತಿದೆ. ಅದರ ಜತೆಗೆ ಹೊರರಾಜ್ಯಗಳಲ್ಲಿ ನೋಂದಣಿ ಮಾಡಿಕೊಂಡು ರಾಜ್ಯದ ತೆರಿಗೆ ಪಾವತಿಸದೇ ಸಂಚರಿಸುವ ವಾಹನಗಳ ಸಂಖ್ಯೆಯೂ ಹೆಚ್ಚಾಗಿದೆ. ಈ ಎಲ್ಲದರ ಕುರಿತು ನಿರಂತರವಾಗಿ ತಪಾಸಣೆ ನಡೆಸಬೇಕು. ನಿಯಮ ಉಲ್ಲಂಘಿಸುವ ಮತ್ತು ತೆರಿಗೆ ಪಾವತಿಸದ ವಾಹನಗಳ ವಿರುದ್ಧ ಕ್ರಮ ಕೈಗೊಳ್ಳಲು ತಪಾಸಣೆ ಹೆಚ್ಚಿಸಬೇಕು ಎಂದರು.
ಅದರಲ್ಲೂ ಶಾಲಾ ವಾಹನಗಳು ಅರ್ಹತಾ ಪತ್ರ ನವೀಕರಿಸಿವೆಯೇ ಎಂಬುದನ್ನು ಪರಿಶೀಲಿಸಬೇಕು. ಒಂದು ವೇಳೆ ಅರ್ಹತಾ ಪತ್ರ ನವೀಕರಿಸದಿದ್ದರೆ ವಾಹನ ಮಾಲೀಕರಿಗೆ ನೋಟಿಸ್ ನೀಡಿ ನಿಯಮದಂತೆ ಕ್ರಮ ಕೈಗೊಳ್ಳಬೇಕು ಎಂದರು.



