ಬೆಂಗಳೂರು: ಪಡಿತರ ವ್ಯವಸ್ಥೆ ಸರಿಪಡಿಸುವ ಹೆಸರಿನಲ್ಲಿ ಬಿಪಿಎಲ್ ಕಾರ್ಡುಗಳನ್ನು ರದ್ದುಪಡಿಸಿದರೆ ಬಿಜೆಪಿ ಜನಸಮಾನ್ಯರೊಂದಿಗೆ ರಸ್ತೆಗಿಳಿದು ಸರ್ಕಾರಕ್ಕೆ ತಕ್ಕ ಪಾಠ ಕಲಿಸಲಿದೆ ಮಾಜಿ ಸಚಿವ ಡಾ.ಸಿ.ಎನ್.ಅಶ್ವತ್ ನಾರಾಯಣ ಎಚ್ಚರಿಕೆ ನೀಡಿದರು.
- Modi is confident that he can capture the Delimitation Commission too: Rahul Gandhi
- ಅಳವು ಅರಿಯದ ಭಾಷೆ – ತುಳುನಾಡಿನ ಅತ್ಯಂತ ಹೆಮ್ಮೆಯ ಕೃತಿ
- ಬದುಕುವ ದಾರಿ ಮಾತ್ರ ಶಿಕ್ಷಣವಲ್ಲ, ಮಾನವೀಯತೆಯೇ ನಿಜವಾದ ವಿದ್ಯೆ: ಸಿದ್ದರಾಮಯ್ಯ
- ಮರಾಠಿ ಕಡ್ಡಾಯಗೊಳಿಸಿದ ಮಹಾರಾಷ್ಟ್ರ ಮಾದರಿ ಕರ್ನಾಟಕಕ್ಕೂ ಬರಲಿ: ಟಿ.ಎ. ನಾರಾಯಣಗೌಡ
- ಅಂಬೇಡ್ಕರ್ ಸಂವಿಧಾನ ಸಮಿತಿಯಲ್ಲಿ ಇರದೇ ಇದ್ದರೆ ಸಂವಿಧಾನ ಸರ್ವವ್ಯಾಪಕವಾಗುತ್ತಿರಲಿಲ್ಲ: ಬೊಮ್ಮಾಯಿ
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಗ್ಯಾರಂಟಿ ಯೋಜನೆಗಳನ್ನು ಕೊಡಲು ಆಗುತ್ತಿಲ್ಲ. ಇದಕ್ಕಾಗಿ ಬಿಪಿಎಲ್ ಕಾರ್ಡ್ ರದ್ದು ಮಾಡಿ ಸರ್ಕಾರ ಜನರಿಗೆ ಕೊಡುತ್ತಿದೆ. ಉಳಿದ ಸೌಕರ್ಯಗಳಿಗೂ ಕೊಕ್ಕೆ ಹಾಕುತ್ತಿದೆ ಎಂದರು.
ನಿಮ್ಮ ಢೋಂಗಿ ಗ್ಯಾರಂಟಿಗಳಿಗಷ್ಟೇ ಬಿಪಿಎಲ್ ಕಾರ್ಡ್ ಬೇಕಿಲ್ಲ, ಉಳಿದ ಸೌಕರ್ಯಗಳಿಗೂ ಕಾರ್ಡ್ ಬೇಕು. ಜನರ ಹೊಟ್ಟೆ ಮೇಲೆ ಹೊಡೆಯಬೇಡಿ. ಬಿಪಿಎಲ್ ಕಾರ್ಡ್ ರದ್ದು ಮಾಡಿದರೆ ಜನ ನಿಮಗೆ ನಿಜವಾದ ಬಿಸಿ ಮುಟ್ಟಿಸುತ್ತಾರೆ ಎಂದರು.
ಬಿಪಿಎಲ್ ಪಡಿತರ ಚೀಟಿ ರದ್ದು, ವಕ್ಫ್ ಆತಿಕ್ರಮಣ ತೆರವು ಹೆಸರಿನಲ್ಲಿ ರೈತರನ್ನು ಒಕ್ಕಲಿಬ್ಬಿಸುತ್ತಿರುವ ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿ ಹೋರಾಟಕ್ಕೆ ಮುಂದಾಗಿದೆ. ಬೆಳಗಾವಿಯ ಸುವರ್ಣ ಸೌಧದಲ್ಲಿ ನಡೆಯುತ್ತಿರುವ ವಿಧಾನಸಭೆಯ ಅಧಿವೇಶನಕ್ಕೂ ಮೊದಲು ಬೆಳಗಾವಿಯಲ್ಲಿ ಬೃಹತ್ ಸಮಾವೇಶ ನಡೆಸಲಾಗುತ್ತಿದೆ ಎಂದರು.




