ಉಚಿತ ಪ್ರಯಾಣ ರದ್ದು ನಕಲಿ ಸುದ್ದಿ ಬಿಜೆಪಿ ಸೃಷ್ಟಿ: ರಾಮಲಿಂಗಾರೆಡ್ಡಿ

3 years ago

#Cancellation #free #travel #fakenews #created #BJP #RamalingaReddy #Shakti #ShaktiScheme #Karnataka #KSRTC #BMTC #KKRTC #NWKRTC

ಮಂಡ್ಯ: ಶಕ್ತಿ ಯೋಜನೆ ಸ್ಥಗಿತಗೊಳ್ಳಲಿದೆ ಎಂದು ಸಾಮಾಜಿಕ ಮಾಧ್ಯಮಗಳಲ್ಲಿ ಬಿಜೆಪಿ ವ್ಯವಸ್ಥಿತ ಅಪಪ್ರಚಾರ ಮಾಡುತ್ತಿದೆ. ಮಹಿಳೆಯರಿಗೆ ಉಚಿತ ಪ್ರಯಾಣದ ಶಕ್ತಿ ಯೋಜನೆ ಇನ್ನೂ 10 ವರ್ಷ ಇರಲಿದೆ. ಕಾಂಗ್ರೆಸ್ ಸರ್ಕಾರದ ಜನಪ್ರಿಯತೆಯನ್ನು ಕುಗ್ಗಿಸಲು ಬಿಜೆಪಿ ನಕಲಿ ಸುದ್ದಿಯ ಮೊರೆ ಹೋಗಿದೆ, ಸಾರ್ವಜನಿಕರು ಇಂತಹ ಯಾವುದೇ ನಕಲಿ ಸುದ್ದಿಗಳಿಗೆ ಕಿವಿಗೊಡಬಾರದು ಎಂದು ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಮನವಿ ಮಾಡಿದ್ದಾರೆ.

ಸಾಮಾಜಿಕ ಜಾಲತಾಣಗಳಲ್ಲಿ ಮಹಿಳೆಯರಿಗೆ ಉಚಿತ ಬಸ್ ಪ್ರಯಾಣ ಯೋಜನೆ ರದ್ದಾಗಲಿದೆ ಎಂಬ ವದಂತಿಗಳ ಹಿನ್ನೆಲೆಯಲ್ಲಿ ಮಂಡ್ಯದಲ್ಲಿ ಪ್ರತಿಕ್ರಿಯೆ ನೀಡಿದ ಅವರು, ಶಕ್ತಿ ಯೋಜನೆಯನ್ನು ನಿಲ್ಲಿಸಲಾಗುತ್ತದೆ ಎನ್ನುವುದು ಸುದ್ದಿ ಸುಳ್ಳು. ಮುಂದಿನ 10 ವರ್ಷಗಳ ಕಾಳ ಶಕ್ತಿ ಯೋಜನೆ ಮುಂದುವರಿಯಲಿದೆ ಎಂದು ಭರವಸೆ ನೀಡಿದರು.

ಕಾಂಗ್ರೆಸ್ ರಾಜ್ಯ ವಿಧಾನಸಭೆ ಚುನಾವಣೆಗೆ ಮುನ್ನ ನೀಡಿದ್ದ 5 ಗ್ಯಾರಂಟಿಗಳಲ್ಲಿ ಒಂದಾದ ಶಕ್ತಿ ಯೋಜನೆಯಡಿ ಸರ್ಕಾರಿ ಬಸ್‌ಗಳಲ್ಲಿ ರಾಜ್ಯಾದ್ಯಂತ ಮಹಿಳೆಯರಿಗೆ ಉಚಿತ ಪ್ರಯಾಣಕ್ಕೆ ಅವಕಾಶ ನೀಡಿದೆ. ಶಕ್ತಿ ಯೋಜನೆಗೆ ಜೂನ್ 11ರಂದು ಚಾಲನೆ ನೀಡಲಾಯಿತು. KSRTC, KKRTC, NWKRTC ಮತ್ತು BMTCಯಲ್ಲಿ ಉಚಿತವಾಗಿ ಪ್ರಯಾಣಿಸಲು ಅವಕಾಶವಿದೆ.

ಈ ಯೋಜನೆ ಕುರಿತು ಸಾಮಾಜಿಕ ಜಾಲತಾಣಗಳಲ್ಲಿ ಸುಳ್ಳು ಸುದ್ದಿ ಹರಿದಾಡುತ್ತಿದ್ದು, ಶಕ್ತಿ ಯೋಜನೆಯಡಿಯಲ್ಲಿ ಮಹಿಳೆಯರಿಗೆ ನೀಡಲಾಗಿರುವ ಉಚಿತ ಪ್ರಯಾಣವನ್ನು ರದ್ದುಗೊಳಿಸುವಂತೆ ಕರ್ನಾಟಕ ಹೈ ಕೋರ್ಟ್ ತೀರ್ಪು ನೀಡಿದೆ ಎಂಬ ಸುಳ್ಳು ಪೋಸ್ಟರ್ ಪೋಸ್ಟ್‌ ವೈರಲ್ ಆಗಿದೆ.

Leave a Reply