ಎಸ್‌ಡಿಪಿಐ ಕಲಬುರಗಿ ಜಿಲ್ಲಾ ಸಮಿತಿ ಸಭೆ
ಆಲ್ ಇಂಡಿಯಾ ಮುಸ್ಲಿಂ ಪರ್ಸನಲ್ ಲಾ ಬೋರ್ಡ್ ನೇತೃತ್ವದಲ್ಲಿ ಏಪ್ರಿಲ್ 27 ಮತ್ತು ಮೇ 4 ರಂದು ಆಯೋಜಿಸಿರುವ ಬೃಹತ್ ಪ್ರತಿಭಟನಾ ಸಮಾವೇಶಕ್ಕೆ ಸಂಪೂರ್ಣ ಬೆಂಬಲ ಘೋಷಣೆ
ಕಲಬುರಗಿ: ಸೋಷಿಯಲ್ ಡೆಮೊಕ್ರೆಟಿಕ್ ಪಾರ್ಟಿ ಆಫ್ ಇಂಡಿಯಾ ಪಕ್ಷದ ಕಲಬುರಗಿ ಜಿಲ್ಲಾ ಸಮಿತಿ ಸಭೆಯು ಜಿಲ್ಲಾಧ್ಯಕ್ಷ ಮೊಹಮ್ಮದ್ ಮೋಹಿಸಿನ್ ಅವರ ಅಧ್ಯಕ್ಷತೆಯಲ್ಲಿ ರಾಜ್ಯ ಪ್ರಧಾನ ಕಾರ್ಯದರ್ಶಿ ಹಾಗೂ ಜಿಲ್ಲಾ ಉಸ್ತುವಾರಿ ಅಪ್ಸರ್ ಕೊಡ್ಲಿಪೇಟೆ ಅವರ ಸಮ್ಮುಖದಲ್ಲಿ ಪಕ್ಷದ ಜಿಲ್ಲಾ ಕಚೇರಿಯಲ್ಲಿ ಜರುಗಿತು.
- ಕಟ್ಟೇರಿ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಸರ್ಕಾರಿ ಸೇವೆ ಮನೆ ಬಾಗಿಲಿಗೆ ಮಾದರಿ ಕಾರ್ಯಕ್ರಮ
- ಕನ್ನಡ ಸಿನಿಮಾ: ಮುಳುಗುತ್ತಿರುವ ಟೈಟಾನಿಕ್
- RSS ಅನ್ನು ಪ್ರಶ್ನಿಸುವ ಯೋಗ್ಯತೆಯಿದೆಯೇ?: ಆರ್. ಅಶೋಕ್
- ಎಸ್ಐಆರ್ ಎನ್ಯೂಮರೇಷನ್ ಪ್ರಕ್ರಿಯೆ ಬಗ್ಗೆ ಗೊಂದಲ ನಿವಾರಣೆ ಅಗತ್ಯ: ಅಪ್ಸರ್ ಕೊಡ್ಲಿಪೇಟೆ
- ಮಾತಾಡದೇ ನನ್ನೊಳಗೇ ಉಳಿದ ವಿಷಯಗಳು ಹೀಗಿವೆ
ಪ್ರಾಸ್ತಾವಿಕವಾಗಿ ಮಾತನಾಡಿದ ಅಪ್ಸರ್ ಕೊಡ್ಲಿಪೇಟೆ, ಭಾರತೀಯ ಮುಸ್ಲಿಮರು ವಕ್ಫ್ ತಿದ್ದುಪಡಿ ಮಸೂದೆ 2024 ಅನ್ನು ಸಂಪೂರ್ಣವಾಗಿ ತಿರಸ್ಕರಿಸಿದ್ದಾರೆ. ವಕ್ಫ್ ತಿದ್ದುಪಡಿ ಕಾಯ್ದೆಯ ವಿರುದ್ಧ ಎಸ್‌ಡಿಪಿಐ ದೇಶದಾದ್ಯಂತ ಜಾಗೃತಿ ಅಭಿಯಾನಕ್ಕೆ ಕರೆ ನೀಡಿದ್ದು, ವಕ್ಫ್ ತಿದ್ದುಪಡಿ ಕಾಯ್ದೆ ಭಾರತದ ಧರ್ಮನಿರಪೇಕ್ಷ ಮತ್ತು ಪ್ರಜಾಪ್ರಭುತ್ವ ಸಿದ್ಧಾಂತಗಳ ವಿರುದ್ಧವಾಗಿದೆ. ಇದು ಭಾರತದ ಸಂವಿಧಾನದ 12 ರಿಂದ 35ನೇ ವಿಧಿಗಳಲ್ಲಿ ನಿರ್ದಿಷ್ಟಗೊಳಿಸಿರುವ ಮೂಲಭೂತ ಹಕ್ಕುಗಳನ್ನು ಉಲ್ಲಂಘಿಸುತ್ತದೆ ಎಂದರು.
ಎಸ್‌ಡಿಪಿಐ ರಾಷ್ಟ್ರೀಯ ಅಧ್ಯಕ್ಷರ ಬಂಧನ, ವಕ್ಫ್ ತಿದ್ದುಪಡಿ ಕಾಯ್ದೆಯ ವಿರುದ್ಧ ದೇಶಾದ್ಯಂತ ನಡೆಯುತ್ತಿರುವ ಆಂದೋಲನವನ್ನು ಹಿಮ್ಮೆಟ್ಟಿಸುವ ಬಿಜೆಪಿ ನೇತೃತ್ವದ ನರೇಂದ್ರ ಮೋದಿ ಸರ್ಕಾರದ ಷಡ್ಯಂತ್ರದ ಭಾಗವಾಗಿದೆ. ಬಿಜೆಪಿ ನೇತೃತ್ವದ NDA ಸರಕಾರ ED, NIA ಮೂಲಕ ನಮ್ಮನ್ನು ಈ ಹೋರಾಟದಿಂದ ಒಂದು ಇಂಚನ್ನು ಸಹ ಹಿಂದೆ ಸರಿಸಲು ಸಾಧ್ಯವಿಲ್ಲ. ನಮ್ಮ ಹೋರಾಟ ಇನ್ನಷ್ಟು ಬಲಗೊಳ್ಳಲಿದೆ ಎಂದರು.
SDPI ಈ ರೀತಿಯ ದಬ್ಬಾಳಿಕೆಯ ಹಾಗೂ ಪ್ರಜಾಪ್ರಭುತ್ವವಿರೋಧಿ ನಡೆಗಳ ವಿರುದ್ಧ ತನ್ನ ಸಂಪೂರ್ಣ ಶಕ್ತಿ ಮತ್ತು ದೃಢ ಸಂಕಲ್ಪದೊಂದಿಗೆ ಹೋರಾಟವನ್ನು ಮುಂದುವರಿಸಲಿದ್ದು, ಸಮುದಾಯದ ಎಲ್ಲಾ ಸಂಘಟನೆಗಳ ಮತ್ತು ರಾಜಕೀಯ ಪಕ್ಷಗಳ ನಾಯಕರು ಒಗಟ್ಟಿನೊಂದಿಗೆ ಈ ಹೋರಾಟವನ್ನು ಮುನ್ನಡೆಸಬೇಕಿದೆ ಎಂದು ಕರೆ ನೀಡಿದರು.
ಗುಲ್ಬರ್ಗ ಜಿಲ್ಲೆಯಲ್ಲಿ ಆಲ್ ಇಂಡಿಯಾ ಮುಸ್ಲಿಂ ಪರ್ಸನಲ್ ಲಾ ಬೋರ್ಡ್ ನೇತೃತ್ವದಲ್ಲಿ ಏಪ್ರಿಲ್ 27 ಮತ್ತು ಮೇ 4 ರಂದು ಆಯೋಜಿಸಿರುವ ಬೃಹತ್ ಪ್ರತಿಭಟನಾ ಸಮಾವೇಶಕ್ಕೆ ಸಂಪೂರ್ಣ ಬೆಂಬಲ ನೀಡಲು ಸಭೆಯಲ್ಲಿ ನಿರ್ಣಯ ಕೈಗೊಳ್ಳಲಾಯಿತು.
ಸಭೆಯಲ್ಲಿ ಕಲ್ಯಾಣ ಕರ್ನಾಟಕ ಭಾಗದ ಜಲ್ವಂತ ಸಮಸ್ಯೆಗಳ ಬಗ್ಗೆ ಚರ್ಚೆ ನಡೆಯಿತು. ಸಭೆಯಲ್ಲಿ ರಾಜ್ಯ ಸಮಿತಿ ಸದಸ್ಯ ರಹೀಮ್ ಪಟೇಲ್, ಜಿಲ್ಲಾ ಉಪಾಧ್ಯಕ್ಷ ಮಕ್ಬೂಲ್ ಪಾಷ , ಜಿಲ್ಲಾ ಪ್ರಧಾನ ಕಾರ್ಯದರ್ಶಿ ಡಾ. ರಿಜ್ವಾನ್, ಇಬ್ರಾಹಿಂ ಪಟೇಲ್, ಕಾರ್ಯದರ್ಶಿ ಶಕೀಲ್ ಪಟೇಲ್ ಮತ್ತು ಎಲ್ಲಾ ಜಿಲ್ಲಾ ಕಾರ್ಯಕಾರಿ ಸಮಿತಿ ಸದಸ್ಯರು ಹಾಜರಿದ್ದರು.




