ವೀಲಿಂಗ್ ವಿರುದ್ಧ ಸಮರ ಸಾರಿದ ಸಂಚಾರ ಪೊಲೀಸರು
ಬೆಂಗಳೂರು: ಸಂಚಾರ ನಿಯಮ ಉಲ್ಲಂಘಿಸಿ ಅಪಾಯಕಾರಿ ವೀಲಿಂಗ್ ನಡೆಸುವವರ ವಿರುದ್ಧ ವಿಶೇಷ ಕಾರ್ಯಾಚರಣೆ ಕೈಗೊಂಡಿರುವ ಸಂಚಾರ ಪೊಲೀಸರು ಒಂದೇ ತಿಂಗಳಲ್ಲಿ 398 ಪ್ರಕರಣಗಳನ್ನು ದಾಖಲಿಸಿದ್ದಾರೆ. ವೀಲಿಂಗ್ ನಡೆಸುತ್ತಿದ್ದ 398 ಪ್ರಕರಣ ದಾಖಲಿಸಿ, 324 ಸವಾರರನ್ನು ವಶಕ್ಕೆ ಪಡೆದು 397 ಬೈಕ್ ಗಳನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ.
- ಕೇಂದ್ರ ಸಚಿವ ಸಂಪುಟ ಸಭೆ ಬೇರೆ ರಾಜ್ಯಗಳಲ್ಲಿ ನಡೆಯಲಿ
- ಪಿ.ಪಿ.ಪಿ ಮಾದರಿ ಕೈ ಬಿಡಲು ಒತ್ತಾಯಿಸಿ ಸಚಿವ ಸಂಪುಟ ಸಭೆಗೆ ಮೆರವಣಿಗೆ: ಸಿಪಿಐಎಂ
- ಜನಸಹಭಾಗಿತ್ವದೊಂದಿಗೆ ಸ್ವಚ್ಛತಾ ಅಭಿಯಾನಕ್ಕೆ ಸಜ್ಜು
- UPI ಡಿಜಿಟಲ್ ಮೇಲಿನ ಹೆಚ್ಚುವರಿ ಶುಲ್ಕ ಪ್ರಸ್ತಾವನೆ ಹಿಂಪಡೆಯಬೇಕು
- ಪ್ರಧಾನಿ ನರೇಂದ್ರ ಮೋದಿ ಹುಟ್ಟುಹಬ್ಬ: ಪೌರ ಕಾರ್ಮಿಕರಿಗೆ ಸನ್ಮಾನ
ಅಪಾಯಕಾರಿ ವೀಲಿಂಗ್ ನಡೆಸಿದ 40 ಚಾಲಕರ ಚಾಲನಾ ಪರವಾನಗಿಯನ್ನು ತಾತ್ಕಾಲಿಕ ರದ್ದುಗೊಳಿಸಲಾಗಿದೆ. 197 ಆರ್ಸಿ ರದ್ದತಿಗೆ ಪತ್ರ ಬರೆಯಲಾಗಿದೆ ಎಂದು ಸಂಚಾರ ಪೊಲೀಸರು ಮಾಹಿತಿ ನೀಡಿದ್ದಾರೆ.
ಅಪ್ರಾಪ್ತರ ಕೈಗೆ ಬೈಕ್ ಕೊಟ್ಟ 62 ಪೋಷಕರ ವಿರುದ್ಧ ಕೇಸ್ ದಾಖಲಿಸಲಾಗಿದೆ. 82 ಅಪ್ರಾಪ್ತರ ವಿರುದ್ಧವೂ ಕೇಸ್ ದಾಖಲಿಸಲಾಗಿದೆ. ಬಾಲ ನ್ಯಾಯ ಕಾಯ್ದೆ (ಜುವೈನಲ್ ಆ್ಯಕ್ಟ್) ಅಡಿ 32 ಪ್ರಕರಣ ದಾಖಲಿಸಲಾಗಿದೆ.
40 ಚಾಲಕರ ಚಾಲನಾ ಪರವಾನಗಿ ತಾತ್ಕಾಲಿಕ ರದ್ದುಗೊಳಿಸಲಾಗಿದೆ. 197 ಆರ್ಸಿ ರದ್ದತಿಗೆ ಪತ್ರ ಬರೆಯಲಾಗಿದೆ ಎಂದು ಬೆಂಗಳೂರು ಸಂಚಾರ ಪೊಲೀಸರು ತಿಳಿಸಿದ್ದಾರೆ.




