ಬೆಂಗಳೂರು: ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ನಟ ದರ್ಶನ್ ಹೆಸರು ಹೇಳದಿರಲು ಡೀಲ್ ಮಾಡಲಾಗಿದ್ದ 30 ಲಕ್ಷ ರೂಗಳನ್ನು ಪೊಲೀಸರು ಜಪ್ತಿ ಮಾಡಲಾಗಿದೆ. ದರ್ಶನ್ ಆಪ್ತನೊಬ್ಬನ ಮನೆ ಮೇಲೆ ದಾಳಿ ನಡೆಸಿದ ಪೊಲೀಸರು ಹಣ ವಶಕ್ಕೆ ಪಡೆದು ಹೆಚ್ಚಿನ ತನಿಖೆ ಕೈಗೊಂಡಿದ್ದಾರೆ.
- ಗದಗವನ್ನು ಬರಪೀಡಿತ ತಾಲೂಕುಗಳ ಪಟ್ಟಿಗೆ ಸೇರಿಸದಿದ್ದರೆ ಶಾಸಕ ಸ್ಥಾನಕ್ಕೆ ರಾಜೀನಾಮೆ: ಎಚ್ ಕೆ ಪಾಟೀಲ್
- ತುಳು ರಾಜ್ಯದ ಎರಡನೇ ಹೆಚ್ಚುವರಿ ಅಧಿಕೃತ ಭಾಷೆಯಾಗಿ ಮಾನ್ಯತೆ: ಸಿದ್ದರಾಮಯ್ಯ
- ಪೆರಿಯಾರ್ ಆಗ್ನೇಯ ಏಷ್ಯಾದ ಸಾಕ್ರೆಟಿಸ್: ಎ.ಜಿ.ಕಾಂಬಳೆ
- ಕೇಂದ್ರ ಸಚಿವ ಸಂಪುಟ ಸಭೆ ಬೇರೆ ರಾಜ್ಯಗಳಲ್ಲಿ ನಡೆಯಲಿ
- ಪಿ.ಪಿ.ಪಿ ಮಾದರಿ ಕೈ ಬಿಡಲು ಒತ್ತಾಯಿಸಿ ಸಚಿವ ಸಂಪುಟ ಸಭೆಗೆ ಮೆರವಣಿಗೆ: ಸಿಪಿಐಎಂ
ದರ್ಶನ್ ಕೊಟ್ಟಿದ್ದ 30 ಲಕ್ಷ ಹಣವನ್ನು ಆಪ್ತನೊಬ್ಬನ ಮನೆಯಲ್ಲಿ ಇಟ್ಟಿರುವ ಬಗ್ಗೆ ವಿಚಾರಣೆ ವೇಳೆ ಆರೋಪಿಗಳು ಬಾಯ್ಬಿಟ್ಟಿದ್ದಾರೆ. ತಕ್ಷಣ ಕಾರ್ಯಚರಣೆ ಕೈಗೊಂಡು ಹಣ ವಶಕ್ಕೆ ಪಡೆದು ತನಿಖೆ ಮುಂದುವರಿಸಿದ್ದಾರೆ.
ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣ ಒಪ್ಪಿಕೊಳ್ಳಲು, ಮೃತದೇಹ ಸಾಗಿಸಲು ಮತ್ತು ನಟ ದರ್ಶನ್ ಹೆಸರನ್ನು ಬಾಯಿಬಿಡದಿರಲು ಬಂಧಿತರ ಪೈಕಿ ಐವರಿಗೆ 30 ಲಕ್ಷಕ್ಕೆ ಸುಪಾರಿ ನೀಡಲಾಗಿತ್ತು.
ಮೃತದೇಹವನ್ನು ಯಾರಿಗೂ ಸಿಗದಂತೆ ಸಾಗಿಸಲು ಮೂವರು ಆರೋಪಿಗಳಿಗೆ ಮುಂಗಡವಾಗಿ ಒಟ್ಟು 5 ಲಕ್ಷ ಸಂದಾಯ ಮಾಡಲಾಗಿತ್ತು. ಉಳಿದ ಇಬ್ಬರು ಆರೋಪಿಗಳು ಜೈಲಿಗೆ ಹೋದ ಮೇಲೆ ಅವರ ಮನೆಯವರಿಗೆ ಹಣ ತಲುಪಿಸುವುದಾಗಿ ಹೇಳಲಾಗಿತ್ತು. ಈ ವಿಚಾರವನ್ನು ಆರೋಪಿಗಳು ಪೊಲೀಸರ ಮುಂದೆ ಬಾಯ್ಬಿಟ್ಟಿದ್ದಾರೆ.
ಕಳೆದ ಜೂ.9 ರಂದು ಸುಮನಹಳ್ಳಿ ಸತ್ವ ಅನುಗ್ರಹ ಅಪಾರ್ಟ್‌ಮೆಂಟ್ ಸಮೀಪದ ಮೋರಿ ಬಳಿ ಸಿಕ್ಕಿದ ರೇಣುಕಾಸ್ವಾಮಿ ಮೃತದೇಹ ಪ್ರಕರಣದ ತನಿಖೆ ನಡೆಸುತ್ತಿರುವ ಪೊಲೀಸರು ಹಲವು ಮಹತ್ವದ ಸಾಕ್ಷ್ಯಗಳನ್ನು ಸಂಗ್ರಹಿಸಿದ್ದಾರೆ.




