ಬೆಂಗಳೂರು: ಕರ್ನಾಟಕ ಕ್ಯಾಬಿನೆಟ್ ಐತಿಹಾಸಿಕ ನಿರ್ಣಯ. ದೇಶದ ಇತಿಹಾಸದಲ್ಲೇ ಪ್ರಪ್ರಥಮ ಬಾರಿಗೆ ರಾಜ್ಯದ ಎಲ್ಲಾ ಸರ್ಕಾರೀ ಇಲಾಖೆಗಳ ನೌಕರರು, ಗುತ್ತಿಗೆ, ಹೊರಗುತ್ತಿಗೆ ನೌಕರರಿಗೆ ಆರೋಗ್ಯ ಭದ್ರತೆ. 5 ಲಕ್ಷ ರೂ.ಗಳವರೆಗೆ ನಗದು ರಹಿತ ಚಿಕಿತ್ಸಾ ಸೌಲಭ್ಯ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಹೇಳಿದ್ದಾರೆ.
- ಬೆಂಗಳೂರಿನಲ್ಲಿ ಕನ್ನಡ ಗಜಲ್ ಯಾತ್ರೆ 100ರ ಸಂಭ್ರಮ
- ನಕಲಿ ದೇಶಪ್ರೇಮಿಗಳ ಆಟ ಇನ್ನೂ ರಾಜ್ಯದಲ್ಲಿ ನಡೆಯಲ್ಲ: ಬಿ ಕೆ ಹರಿಪ್ರಸಾದ್
- ಕಾಂಗ್ರೆಸ್ ಪಕ್ಷಕ್ಕೆ ತಕ್ಕ ಪಾಠ ಕಲಿಸುವುದು ನೂರು ಪರ್ಸೆಂಟ್ ಗ್ಯಾರೆಂಟಿ: ಆರ್ ಅಶೋಕ್
- ದರ್ಶನ್ ಪುಟ್ಟಣ್ಣಯ್ಯ ಅವರಿಗೆ ಸಚಿವ ಸ್ಥಾನ ನೀಡಿ
- ರಾಜಕೀಯ ಸಂತ ಶಾಂತವೇರಿ ಗೋಪಾಲಗೌಡ ಕೃತಿ ಲೋಕಾರ್ಪಣೆ
ಈ ಕುರಿತು ಸಾಮಾಜಿಕ ಜಾಲತಾಣಗಳಲ್ಲಿ ಹೇಳಿಕೆ ಬಿಡುಗಡೆ ಮಾಡಿರುವ ಅವರು, ಸುವರ್ಣ ಆರೋಗ್ಯ ಸುರಕ್ಷಾ ಟ್ರಸ್ಟ್ ಮೂಲಕ ರಾಜ್ಯದ ಯಾವುದೇ ಸರ್ಕಾರಿ ಇಲಾಖೆಗಳಲ್ಲಿ ಗುತ್ತಿಗೆ, ಹೊರಗುತ್ತಿಗೆ ಮತ್ತು ಗೌರವಧನದ ಆಧಾರದ ಮೇಲೆ ಕೆಲಸ ಮಾಡುವ 3 ಲಕ್ಷಕ್ಕೂ ಹೆಚ್ಚು ಸಿಬ್ಬಂದಿ ಮತ್ತು ಅವರ ಅವಲಂಬಿತರಿಗೆ 5 ಲಕ್ಷ ರೂ.ಗಳವರೆಗೆ ನಗದು ರಹಿತ ಚಿಕಿತ್ಸೆಯನ್ನು ಒದಗಿಸುವ ಸಲುವಾಗಿ “ಕರ್ನಾಟಕ ಆರೋಗ್ಯ ಸಂಜೀವಿನಿ ಯೋಜನೆ- ಖಾಯಂ ಅಲ್ಲದ ಸಿಬ್ಬಂದಿಗಳಿಗೆ (KASS-NPE)” ಯೋಜನೆಯನ್ನು ಜಾರಿಗೊಳಿಸಲಾಗುತ್ತಿದೆ ಎಂದಿದ್ದಾರೆ.
ಈ ಯೋಜನೆಯು ESIC, ಆಯುಷ್ಮಾನ್ ಭಾರತ್ ಆರೋಗ್ಯ ಕರ್ನಾಟಕ (AB-ArK), ಯಶಸ್ವಿನಿ ಮುಂತಾದ ಯಾವುದೇ ಸರ್ಕಾರಿ ಪ್ರಾಯೋಜಿತ ಆರೋಗ್ಯ ವಿಮಾ ಯೋಜನೆಗಳಲ್ಲಿ ಒಳಗೊಳ್ಳದ ಸಿಬ್ಬಂದಿಗಳು ಹಾಗು ಅವರ ಅವಲಂಬಿತರನ್ನು ಒಳಗೊಳ್ಳಲಿದೆ. ಈ ಯೋಜನೆಗಾಗಿ ಪ್ರತಿ ತಿಂಗಳು ಸಿಬ್ಬಂದಿ 100 ರೂಪಾಯಿ ಭರಿಸಿದರೆ, ರಾಜ್ಯ ಸರ್ಕಾರವೂ ಸಹ 100 ರೂಪಾಯಿ ಭರಿಸಲಿದೆ. ರಾಜ್ಯ ಸರ್ಕಾರವು ಈ ಯೋಜನೆಗಾಗಿ 36 ಕೋಟಿ ವೆಚ್ಚ ಮಾಡಲಿದೆ ಎಂದು ಹೇಳಿದ್ದಾರೆ.
ಯಾವುದೇ ಆರೋಗ್ಯ ಯೋಜನೆಗಳ ಲಾಭ ದೊರಕದ ಕೆಳ ಮಧ್ಯಮ ವರ್ಗಕ್ಕೆ ಆರೋಗ್ಯದ ಭದ್ರತೆ ನೀಡುವ ದೃಷ್ಟಿಯಿಂದ ಕಳೆದ ಬಜೆಟ್’ನಲ್ಲಿ ಘೋಷಿಸಿದಂತೆ ರಾಜ್ಯ ಸರ್ಕಾರವು ಈ ಯೋಜನೆಯನ್ನು ಜಾರಿಗೊಳಿಸುತ್ತಿದ್ದು ದೇಶದಲ್ಲೇ ಇದೊಂದು ಮಾದರಿ ಯೋಜನೆಯಾಗಲಿದೆ ಎಂದಿದ್ದಾರೆ.




