ಬೆಂಗಳೂರು: ಹಿಂದುಳಿದ ವರ್ಗಗಳ ಶಾಶ್ವತ ಆಯೋಗದ ಮೂಲಕ ನಡೆಸಲಾಗುತ್ತಿರುವ ಜಾತಿವಾರು ಜನಗಣತಿ ವಿಚಾರ ಇದೀಗ ರಾಜ್ಯ ಸರ್ಕಾರದಲ್ಲಿ ದೊಡ್ಡ ಮಟ್ಟದ ಬಿಕ್ಕಟ್ಟು ಸೃಷ್ಟಿಸಿದೆ.
- ಕಟ್ಟೇರಿ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಸರ್ಕಾರಿ ಸೇವೆ ಮನೆ ಬಾಗಿಲಿಗೆ ಮಾದರಿ ಕಾರ್ಯಕ್ರಮ
- ಕನ್ನಡ ಸಿನಿಮಾ: ಮುಳುಗುತ್ತಿರುವ ಟೈಟಾನಿಕ್
- RSS ಅನ್ನು ಪ್ರಶ್ನಿಸುವ ಯೋಗ್ಯತೆಯಿದೆಯೇ?: ಆರ್. ಅಶೋಕ್
- ಎಸ್ಐಆರ್ ಎನ್ಯೂಮರೇಷನ್ ಪ್ರಕ್ರಿಯೆ ಬಗ್ಗೆ ಗೊಂದಲ ನಿವಾರಣೆ ಅಗತ್ಯ: ಅಪ್ಸರ್ ಕೊಡ್ಲಿಪೇಟೆ
- ಮಾತಾಡದೇ ನನ್ನೊಳಗೇ ಉಳಿದ ವಿಷಯಗಳು ಹೀಗಿವೆ
ಸೆಪ್ಟೆಂಬರ್ 22 ರಿಂದ ಹಿಂದುಳಿದ ವರ್ಗಗಳ ಆಯೋಗ ನಡೆಸಲು ಉದ್ದೇಶಿಸಿರುವ ಜಾತಿವಾರು ಜನಗಣತಿಯನ್ನು ಕೈಬಿಟ್ಟು ಸದ್ಯ ಇರುವ ಗೊಂದಲಗಳನ್ನು ಬಗೆಹರಿಸಿ ನಂತರ ಪ್ರಕ್ರಿಯೆ ಆರಂಭಿಸಬೇಕು ಎಂದು ಸಂಪುಟ ಸಭೆಯಲ್ಲಿ ಹಲವು ಹಿರಿಯ ಸಚಿವರು ಆಗ್ರಹಿಸಿದ್ದಾರೆ.
ಜಾತಿವಾರು ಜನಗಣತಿ ನಡೆಸಲು ಹಿಂದುಳಿದ ವರ್ಗಗಳ ಶಾಶ್ವತ ಆಯೋಗ ವರ್ಣಿಸಿರುವ ಮಾರ್ಗಸೂಚಿ ಮತ್ತು ಗುರುತಿಸಲಾಗಿರುವ ಜಾತಿಗಳ ಪಟ್ಟಿಯ ಬಗ್ಗೆ ಸಭೆಯಲ್ಲಿ ತೀವ್ರ ಅಸಮಾಧಾನ ವ್ಯಕ್ತಪಡಿಸಿದ ಬೃಹತ್ ಕೈಗಾರಿಕೆ ಸಚಿವ ಎಂಬಿ ಪಾಟೀಲ್ ತಕ್ಷಣವೇ ನೀಡಬೇಕೆಂದು ಆಗ್ರಹಿಸಿರುವುದಾಗಿ ಗೊತ್ತಾಗಿದೆ.
ಸಚಿವ ಎಂ ಬಿ ಪಾಟೀಲ್ ಮಾಡಿದ ಪ್ರಸ್ತಾಪಕ್ಕೆ ಡಿಸಿಎಂ ಡಿ ಕೆ ಶಿವಕುಮಾರ್, ಕೃಷಿ ಸಚಿವ ಚೆಲುವರಾಯಸ್ವಾಮಿ ಅರಣ್ಯ ಸಚಿವ ಈಶ್ವರ ಖಂಡ್ರೆ, ವೈದ್ಯಕೀಯ ಶಿಕ್ಷಣ ಸಚಿವ ಶರಣಪ್ರಕಾಶ್ ಪಾಟೀಲ್ ಸೇರಿದಂತೆ ಹಲವರು ಧ್ವನಿಗೂಡಿಸಿದ್ದಾರೆ.
ಸಮೀಕ್ಷೆ ನಡೆಸಲು ಆಯೋಗ ಪ್ರಕಟಿಸಿರುವ ಜಾತಿವಾರು ಪಟ್ಟಿ ಅತ್ಯಂತ ಗೊಂದಲ ಸೃಷ್ಟಿಸುವಂತಾಗಿದೆ. ಲಿಂಗಾಯತ, ಒಕ್ಕಲಿಗ ಸಮುದಾಯಗಳಲ್ಲಿ ಸುಮಾರು 200ಕ್ಕೂ ಹೆಚ್ಚು ಉಪಜಾತಿಗಳನ್ನು ಪಟ್ಟಿ ಮಾಡಲಾಗಿದೆ. ವಾಸ್ತವವಾಗಿ ಈ ಜಾತಿಗಳೇ ಅಸ್ತಿತ್ವದಲ್ಲಿ ಇಲ್ಲ ಎಂದು ಹೇಳಿದ ಎಂ ಬಿ ಪಾಟೀಲ್, ಇಂತಹ ಪಟ್ಟಿ ಮಾಡಿರುವ ಅಧಿಕಾರಿಗೆ ದೊಡ್ಡ ರೀತಿಯ ಸನ್ಮಾನ ಮಾಡಬೇಕು ಎಂದು ವ್ಯಂಗ್ಯವಾಗಿ ಹೇಳಿದರನ್ನಾಗಿದೆ.
ಹಲವು ಸಮುದಾಯಗಳನ್ನು ಕ್ರಿಶ್ಚಿಯನ್ ಎಂದು ಹೆಸರಿಸಿ ಗೊಂದಲ ಸೃಷ್ಟಿಸಲಾಗಿದೆ. ಇವುಗಳನ್ನು ಹುಡುಕಿಕೊಟ್ಟವರು ಯಾರು ಎಂದು ಪ್ರಶ್ನಿಸಿದ ಡಿ ಕೆ ಶಿವಕುಮಾರ್, ಮುಖ್ಯಮಂತ್ರಿಯ ಸಚಿವಾಲಯದಲ್ಲಿ ಕೆಲಸ ಮಾಡುವ ಅಧಿಕಾರಿಯೊಬ್ಬರು ಅತಿ ಉತ್ಸಾಹದಿಂದ ಮಾಡಿರುವ ಅನಾಹುತ ಇದಾಗಿದೆ. ಇದನ್ನು ಇಟ್ಟುಕೊಂಡು ಸಮೀಕ್ಷೆಗೆ ಮುಂದಾದರೆ ರಾಜ್ಯದಲ್ಲಿ ಜನ ಸರ್ಕಾರದ ವಿರುದ್ಧ ತಿರುಗಿ ಬೀಳುವ ಅಪಾಯವಿದೆ. ಹೀಗಾಗಿ ತಕ್ಷಣವೇ ಅದನ್ನು ರದ್ದು ಪಡಿಸಬೇಕು ಎಂದು ಹೇಳಿದ್ದಾರೆನ್ನಲಾಗಿದೆ.
ಈ ಹಂತದಲ್ಲಿ ಮಧ್ಯಪ್ರವೇಶಿಸಿ ಮಾತನಾಡಿದ ಸಿಎಂ ಸಿದ್ದರಾಮಯ್ಯ, ಕೆಲವು ಗೊಂದಲಗಳ ಬಗ್ಗೆ ತಮಗೂ ದೂರು ಬಂದಿದೆ. ಈ ಬಗ್ಗೆ ತಾವು ಇಲಾಖೆಯ ಉನ್ನತ ಅಧಿಕಾರಿಗಳು ಮತ್ತು ಆಯೋಗದ ಮುಖ್ಯಸ್ಥರ ಜೊತೆ ಚರ್ಚೆ ನಡೆಸಿ ಸೂಕ್ತ ತೀರ್ಮಾನ ಕೈಗೊಳ್ಳಲಾಗುವುದು. ಯಾರಿಗೂ ಈ ಬಗ್ಗೆ ಆತಂಕ ಬೇಡ. ಚರ್ಚೆಯ ನಂತರ ಎಲ್ಲರ ಅಭಿಪ್ರಾಯ ಕೇಳಲಾಗುವುದು ಎಂದು ಹೇಳಿ ಸಮಾಧಾನಪಡಿಸಿದರು ಎನ್ನಲಾಗಿದೆ.




