ವಿಜಯಪುರ: ಮಾಧವಾನಂದ ಸ್ವಾಮಿಗಳು ಬಹುತ್ವದ ಪರವಾಗಿದ್ದರು. ಹೀಗಾಗಿ ಅವರನ್ನು ನಾವೆಲ್ಲರೂ ಸ್ಮರಿಸಬೇಕು ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು.
- ಸರಳ, ವೇಗ, ಪಾರದರ್ಶಕ, ಜನಸ್ನೇಹಿ ಆಸ್ತಿ ದಾಖಲೆ ವ್ಯವಸ್ಥೆ ಇ-ಆಸ್ತಿ 2.0: ಕೃಷ್ಣ ಬೈರೇಗೌಡ
- ರೈತರಿಗೆ ನಿರಂತರ 6 ತಾಸು ಸಮರ್ಪಕ ವಿದ್ಯುತ್ ಕುಡಿಯುವ ನೀರು ಪೂರೈಕೆಗೆ ಆದ್ಯತೆ
- ಕೆಟಿವಿಎ ಗೃಹ ಪತ್ರಿಕೆ ಟಿವಿ – ಠೀವಿ ಪುನರಾರಂಭ
- ಸಿಎನ್ಎನ್, ಎಂಎಸ್ಎನ್ಬಿಸಿ, ಪಾಲಿಟಿಕೋಗೆ ಶ್ವೇತಭವನ ಪ್ರವೇಶ ನಿಷೇಧಿಸಿದ ಟ್ರಂಪ್
- ಕೆರೆಗಳ ಪುನಶ್ಚೇತನಕ್ಕೆ ₹150 ಕೋಟಿ ವೆಚ್ಚದ ವಿಶ್ವಬ್ಯಾಂಕ್ ಯೋಜನೆ: ಈಶ್ವರ್ ಖಂಡ್ರೆ
ವಿಜಯಪುರ ಜಿಲ್ಲೆಯ ಚಡಚಣ ತಾಲ್ಲೂಕಿನ ಇಂಚಗೇರಿ ಮಠದಲ್ಲಿ ನೂತನವಾಗಿ ನಿರ್ಮಿಸಿದ ಮಾಧವಾನಂದ ಪ್ರಭುಗಳ ದೇವಸ್ಥಾನವನ್ನು ಲೋಕಾರ್ಪಣೆಗೊಳಿಸಿ, ಬಳಿಕ ಕಳಸಾರೋಹಣದಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ಅಂತರ್ಜಾತಿ, ಅಂತರ್ ಧರ್ಮೀಯ ಮದುವೆಗಳಿಂದ ಜಾತಿ ವ್ಯವಸ್ಥೆ ಅಳಿಸಲು ಸಾಧ್ಯ. ಬಸವಾದಿ ಶರಣರು 12ನೇ ಶತಮಾನದಲ್ಲಿ ಹೇಳಿದ್ದನ್ನು ಮಾಧವಾನಂದ ಪ್ರಭುಗಳು 20ನೇ ಶತಮಾನದಲ್ಲಿ ಸಾರಿದರು ಎಂದರು.

ಪಾಳೇಗಾರಿಕೆಯು ಸಮಾಜಕ್ಕೆ, ಜನರ ಸ್ವಾತಂತ್ರ್ಯಕ್ಕೆ ಕಂಟಕ. ಹೀಗಾಗಿ ಬಲಾಢ್ಯರ ಕೈಯಲ್ಲಿ ಅಧಿಕಾರ ಇರಬಾರದು ಎಂದು ಮಹಾತ್ಮಗಾಂಧಿಯವರು ಹೇಳಿದ್ದರು. ಸ್ವಾತಂತ್ರ ಸೇನಾನಿಗಳಾದ ಕಿತ್ತೂರು ಚನ್ನಮ್ಮ ಮತ್ತು ಸಂಗೊಳ್ಳಿ ರಾಯಣ್ಣ ಬ್ರಿಟಿಷರಿಗೆ ಸಿಂಹಸ್ವಪ್ನವಾಗಿದ್ದರು ಎಂದರು.
ಭಾರತದೊಳಗಿದ್ದ ವರ್ಣ ವ್ಯವಸ್ಥೆ ಮತ್ತು ಜಾತಿ ವ್ಯವಸ್ಥೆ ಹಾಗೂ ಭಾರತದಲ್ಲಿನ 560 ಸಂಸ್ಥಾನಗಳಲ್ಲಿ ಇದ್ದ ಒಳ ಮುನಿಸನ್ನು ಬ್ರಿಟೀಷರು ಬಳಸಿಕೊಂಡು ಭಾರತವನ್ನು ಆಳಿದರು ಎಂದರು.
ಜಾತಿ ವ್ಯವಸ್ಥೆ ಕಾರಣಕ್ಕೆ ಭಾರತದ ಶೂದ್ರರು ಕೇವಲ ಉತ್ಪಾದನೆ ಮಾಡಬೇಕಿತ್ತು. ಆದರೆ ತಾವು ಉತ್ಪಾದಿಸಿದ್ದನ್ನು ಅನುಭವಿಸುವ ಹಕ್ಕು ಮತ್ತು ಸ್ವಾತಂತ್ರ್ಯ ಇರಲಿಲ್ಲ. ಈ ಅಸಮಾನತೆ ವಿರುದ್ಧ ಶ್ರೀ ಮಾಧವಾನಂದ ಸ್ವಾಮೀಜಿಯವರು ಧ್ವನಿ ಎತ್ತಿ ಸ್ವಾತಂತ್ರ್ಯ ಹೋರಾಟದಲ್ಲಿ ತೊಡಗಿಸಿಕೊಂಡು ಜನರ ಮುಕ್ತಿಗಾಗಿ ಶ್ರಮಿಸಿದರು ಎಂದರು.




