ದಾವಣಗೆರೆ: ದಾವಣಗೆರೆ ಜಿಲ್ಲೆಯಲ್ಲಿ ಮುಂಗಾರು ಹಂಗಾಮು ಚುರುಕಾಗಿದ್ದು, ಭೂಮಿ ಸಿದ್ಧತೆ, ಸಮಗ್ರ ಬೆಳೆ ನಿರ್ವಹಣೆ ಜೊತೆಗೆ ಉತ್ತಮ ಇಳುವರಿ ಪಡೆಯುವಲ್ಲಿ ಗುಣಮಟ್ಟದ ಬಿತ್ತನೆ ಬೀಜಗಳು ಬಹು ಮುಖ್ಯ. ಬೆಳೆಯುವ ಸಿರಿ ಮೊಳಕೆಯಲ್ಲಿ ಎಂಬಂತೆ ಉತ್ತಮ ಬೆಳವಣಿಗೆ ಹಾಗೂ ಇಳುವರಿ ಪಡೆಯುವಲ್ಲಿ ಗುಣಮಟ್ಟದ ಬಿತ್ತನೆ ಬೀಜಗಳು ಅತ್ಯಮೂಲ್ಯವಾಗಿವೆ.
- ಬೆಂಗಳೂರಿನಲ್ಲಿ ಕನ್ನಡ ಗಜಲ್ ಯಾತ್ರೆ 100ರ ಸಂಭ್ರಮ
- ನಕಲಿ ದೇಶಪ್ರೇಮಿಗಳ ಆಟ ಇನ್ನೂ ರಾಜ್ಯದಲ್ಲಿ ನಡೆಯಲ್ಲ: ಬಿ ಕೆ ಹರಿಪ್ರಸಾದ್
- ಕಾಂಗ್ರೆಸ್ ಪಕ್ಷಕ್ಕೆ ತಕ್ಕ ಪಾಠ ಕಲಿಸುವುದು ನೂರು ಪರ್ಸೆಂಟ್ ಗ್ಯಾರೆಂಟಿ: ಆರ್ ಅಶೋಕ್
- ದರ್ಶನ್ ಪುಟ್ಟಣ್ಣಯ್ಯ ಅವರಿಗೆ ಸಚಿವ ಸ್ಥಾನ ನೀಡಿ
- ರಾಜಕೀಯ ಸಂತ ಶಾಂತವೇರಿ ಗೋಪಾಲಗೌಡ ಕೃತಿ ಲೋಕಾರ್ಪಣೆ
ಜಿಲ್ಲೆಯಲ್ಲಿ ಕೃಷಿ ಇಲಾಖೆಯಿಂದ ರೈತ ಸಂಪರ್ಕ ಕೇಂದ್ರಗಳಲ್ಲಿ ಹಾಗೂ ನಿಗದಿಪಡಿಸಿದ ಸಹಕಾರಿ ಸಂಘಗಳ ಮೂಲಕ ರಿಯಾಯತಿ ದರದಲ್ಲಿ ವಿವಿಧ ಬಿತ್ತನೆ ಬೀಜಗಳನ್ನು ವಿತರಣೆ ಮಾಡಲಾಗುವುದು.
ಜಿಲ್ಲೆಯ ವಿವಿಧ ಕೃಷಿ ಪರಿಕರ ಮಾರಾಟ ಮಳಿಗೆಗಳಲ್ಲಿ ಗುಣಮಟ್ಟದ ಬಿತ್ತನೆ ಬೀಜಗಳು ಲಭ್ಯವಿದೆ. ರೈತರಿಗೆ ಯಾವುದೇ ಬಿತ್ತನೆ ಬೀಜಗಳ ಕೊರತೆಯಾಗುವುದಿಲ್ಲ. ಆದರೆ ಇತ್ತೀಚಿನ ದಿನಗಳಲ್ಲಿ ಕಳಪೆ, ಬಿಡಿ ಬಿತ್ತನೆ ಬೀಜದ ಹಾವಳಿ ಹೆಚ್ಚಾಗುತ್ತಿದ್ದು, ಅಲ್ಲಲ್ಲಿ ರೈತರು ಅನಧಿಕೃತ ಲೂಸ್ ಬಿತ್ತನೆ ಬೀಜಗಳನ್ನು ಖರೀದಿಸುತ್ತಿರುವುದಾಗಿ ತಿಳಿದು ಬಂದಿದೆ.
ಹಲವರು ಲೂಸ್ ಬೀಜಗಳನ್ನು ವಿವಿಧ ಭಾಗಗಳಿಂದ ಸಂಗ್ರಹಿಸಿ ರೈತರಿಗೆ ಮಾರಾಟ ಮಾಡುತ್ತಿರುವ್ಯದು ಸಹಾ ಕಂಡು ಬಂದಿರುತ್ತದೆ. ರೈತರು ಬಿಡಿ ಬೀಜಗಳನ್ನು ಖರೀದಿಸಿ ಬಿತ್ತನೆ ಮಾಡಿ ತೊಂದರೆ ಹಾಗೂ ಬೆಳೆ ನಷ್ಠ ಅನುಭವಿಸಿದಲ್ಲಿ ಯಾವುದೇ ದಾಖಲೆಗಳು ಇಲ್ಲದಿರುವುದರಿಂದ ಪರಿಹಾರ ಪಡೆಯಲು ಅರ್ಹರಾಗುವುದಿಲ್ಲ.
ಆದ್ದರಿಂದ ರೈತರು ಲೂಸ್ ಬಿತ್ತನೆ ಬೀಜ ಮಾರಾಟ ಜಾಲಕ್ಕೆ ಸಿಲುಕದೇ ಉತ್ತಮ ಗುಣಮಟ್ಟದ ದೃಢೀಕೃತ ಬಿತ್ತನೆ ಬೀಜಗಳನ್ನು ರೈತ ಸಂಪರ್ಕ ಕೇಂದ್ರಗಳಿಂದ, ಅಧಿಕೃತ ಕೃಷಿ ಪರಿಕರ ಮಾರಾಟಗಾರರಿಂದ ಖರೀದಿಸಿ ಬಿತ್ತನೆ ಮಾಡಲು ರೈತರಲ್ಲಿ ಕೋರಲಾಗಿದೆ.
ಜಿಲ್ಲೆಯಲ್ಲಿ ಯಾವುದೇ ಅನಧಿಕೃತ ಲೂಸ್ ಬಿತ್ತನೆ ಬೀಜ ದಾಸ್ತಾನು ಹಾಗೂ ಮಾರಾಟ ಮಾಡುವವರು ಕಂಡು ಬಂದಲ್ಲಿ ತಕ್ಷಣ ಈ ಕುರಿತು ಸಹಾಯಕ ಕೃಷಿ ನಿರ್ದೇಶಕರು (ಜಾರಿದಳ) ಮೊ.ಸಂ. 8277931106 & 8277931207 ರವರಿಗೆ ಅಥವಾ ತಾಲ್ಲೂಕು ಸಹಾಯಕ ಕೃಷಿ ನಿರ್ದೇಶಕರು , ರೈತ ಸಂಪರ್ಕ ಕೇಂದ್ರದ ಕೃಷಿ ಅಧಿಕಾರಿಗಳನ್ನು ಸಂಪರ್ಕಿಸಬಹುದು ಎಂದು ಜಂಟಿ ಕೃಷಿ ನಿರ್ದೇಶಕರು ತಿಳಿಸಿದ್ದಾರೆ.




