ಬೆಂಗಳೂರು: 11-7-2024ರಂದು ಕಾವೇರಿ ನೀರು ನಿಯಂತ್ರಣ ಸಮಿತಿ 3ನೇ ಸಭೆ ನಡೆದು, ಜುಲೈ 12ರಂದು ಈ ತಿಂಗಳ ಕೊನೆಯವರೆಗೆ ಸುಮಾರು 20 ದಿನ ಪ್ರತೀ ದಿನ 1 ಟಿಎಂಸಿ ಯಂತೆ 20 ಟಿಎಂಸಿ ನೀರು ಬಿಡಲು ಆದೇಶಿಸಿದ್ದಾರೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು.
- ಕೇಂದ್ರ ಸಚಿವ ಸಂಪುಟ ಸಭೆ ಬೇರೆ ರಾಜ್ಯಗಳಲ್ಲಿ ನಡೆಯಲಿ
- ಪಿ.ಪಿ.ಪಿ ಮಾದರಿ ಕೈ ಬಿಡಲು ಒತ್ತಾಯಿಸಿ ಸಚಿವ ಸಂಪುಟ ಸಭೆಗೆ ಮೆರವಣಿಗೆ: ಸಿಪಿಐಎಂ
- ಜನಸಹಭಾಗಿತ್ವದೊಂದಿಗೆ ಸ್ವಚ್ಛತಾ ಅಭಿಯಾನಕ್ಕೆ ಸಜ್ಜು
- UPI ಡಿಜಿಟಲ್ ಮೇಲಿನ ಹೆಚ್ಚುವರಿ ಶುಲ್ಕ ಪ್ರಸ್ತಾವನೆ ಹಿಂಪಡೆಯಬೇಕು
- ಪ್ರಧಾನಿ ನರೇಂದ್ರ ಮೋದಿ ಹುಟ್ಟುಹಬ್ಬ: ಪೌರ ಕಾರ್ಮಿಕರಿಗೆ ಸನ್ಮಾನ
ತಮಿಳುನಾಡಿಗೆ ಕಾವೇರಿ ನೀರು ಬಿಡುಗಡೆ ಮಾಡುವಂತೆ ಆದೇಶ ಬಂದಿರುವುದಕ್ಕೆ ಸಂಬಂಧಿಸಿದಂತೆ ಇಂದು ನಡೆದ ಸರ್ವಪಕ್ಷ ಸಭೆಯ ನಂತರ ಮಾಧ್ಯಮ ಪ್ರತಿನಿಧಿಗಳ ಜೊತೆ ಮಾತನಾಡಿದ ಅವರು, ನಾರ್ಮಲ್ ವರ್ಷದಲ್ಲಿ ಜೂನ್ ತಿಂಗಳಲ್ಲಿ 9.4 ಟಿಎಂಸಿ, July ನಲ್ಲಿ 31.24 ಟಿಎಂಸಿ ನೀರು ಬಿಡಬೇಕಾಗಿದೆ. ಅಂದರೆ ಒಟ್ಟು 40.43 ಟಿಎಂಸಿ ಬಿಡಬೇಕಾಗಿದೆ. ಇಲ್ಲಿಯವರೆಗೂ 5 ಟಿಎಂಸಿ ಗೂ ಹೆಚ್ಚು ನೀರು ಬಿಡಲು ಸಾಧ್ಯವಾಗಿದೆ ಎಂದರು.
ಕಾವೇರಿ ತೀರದ ಸಚಿವರು, ಶಾಸಕರು ಮತ್ತು ಸಂಬಂಧಪಟ್ಟ ಅಧಿಕಾರಿಗಳು ಜುಲೈ 12ರಂದು ಸಭೆ ನಡೆಸಿ ನೀರು ಬಿಡದೇ ಇರಲು ಮತ್ತು ಸರ್ವಪಕ್ಷ ಸಭೆ ಕರೆಯಲು, ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರದ ಮುಂದೆ ಮೇಲ್ಮನವಿ ಸಲ್ಲಿಸಲು ತೀರ್ಮಾನಿಸಿದ್ದೆವು ಎಂದರು.
ಈ ಹಿನ್ನೆಲೆಯಲ್ಲಿ ಇಂದು ಸರ್ವಪಕ್ಷ ಸಭೆ ನಡೆಸಲಾಯಿತು. ಬಿಜೆಪಿ, ಜೆಡಿಎಸ್, ರೈತ ಸಂಘದವರು, ಕಾನೂನು ತಂಡದ ಮುಖ್ಯಸ್ಥರಾದ ಮೋಹನ್ ಕಾತರಕಿ ಅವರು ಸೇರಿ ಹಲವರು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ ಎಂದರು.
ನಮ್ಮ ಕಾವೇರಿ ತೀರದ ಜಲಾಶಯಗಳಲ್ಲಿ 63% ಮಾತ್ರ ಭರ್ತಿ ನೀರು ಆಗಿದೆ. ಕಬಿನಿ ಜಲಾಶಯ ಭರ್ತಿಯಾಗಿದ್ದು, ಕಳೆದ ಎರಡು ದಿನ 20 ಸಾವಿರ, 19 ಸಾವಿರ ಹಾಗೂ ಇಂದು 13 ಸಾವಿರ ಕ್ಯೂಸೆಕ್ಸ್ ನೀರು ಹರಿದು ಹೋಗಿದೆ. ಜಲಾಶಯದ ಸುರಕ್ಷತೆಗಾಗಿ ಶೇಖರಿಸಿಡಲು ಸಾಧ್ಯವಾಗದ ನೀರು ಮಾತ್ರ ಹರಿದುಹೋಗಿದೆ ಎಂದರು.
ವಕೀಲರ ತಂಡದ ಸಲಹೆ ಪ್ರಕಾರ ಹೆಚ್ಚು ಮಳೆ ಬಿದ್ದರೆ ಮಾತ್ರ ಮಳೆ ಪ್ರಮಾಣಕ್ಕೆ ತಕ್ಕಂತೆ, ಕಾವೇರಿ ನೀರು ನಿರ್ವಹಣಾ ಸಮಿತಿ ಆದೇಶದ ಪ್ರಕಾರ ಪೂರ್ತಿ ನೀರು ಹರಿಸಬಹುದು. ಇಲ್ಲದಿದ್ದರೆ ಕೇವಲ 8 ಸಾವಿರ ಕ್ಯೂಸೆಕ್ಸ್ ನೀರು ಬಿಡಬೇಕಾಗುತ್ತದೆ. ಇದರ ಜೊತೆಗೆ ಮೇಲ್ಮನವಿ ಹಾಕೋಣ. ನಾವು ಮೊಂಡಾಟ ಮಾಡುತ್ತಿದ್ದೇವೆ ಎಂದು ಕಾವೇರಿ ನೀರು ನಿರ್ವಹಣಾ ಸಮಿತಿಗೆ ಅನ್ನಿಸಬಾರದು ಎನ್ನುವ ಸಲಹೆ ಬಂದಿದೆ ಎಂದರು.




