ಬೆಂಗಳೂರು: ಕರ್ನಾಟಕ ಮಹರ್ಷಿ ವಾಲೀಕಿ ಅಭಿವೃದ್ಧಿ ನಿಗಮದಲ್ಲಿ ನಡೆದ ಹಗರಣ ಸಂಬಂಧ ಬಳ್ಳಾರಿಯಲ್ಲಿ ಮಾಜಿ ಸಚಿವ ಹಾಗೂ ಶಾಸಕ ಬಿ.ನಾಗೇಂದ್ರ ಅವರ ಆಪ್ತರ ಮೇಲೆ ಸಿಬಿಐ ನಾಲ್ವರು ಅಧಿಕಾರಿಗಳ ತಂಡ ಸ್ಥಳೀಯ ಪೊಲೀಸರಿಗೆ ಮಾಹಿತಿಯನ್ನು ಕೊಡದೆ ದಾಳಿ ನಡೆಸಿದೆ.
- ಕೇಂದ್ರ ಸಚಿವ ಸಂಪುಟ ಸಭೆ ಬೇರೆ ರಾಜ್ಯಗಳಲ್ಲಿ ನಡೆಯಲಿ
- ಪಿ.ಪಿ.ಪಿ ಮಾದರಿ ಕೈ ಬಿಡಲು ಒತ್ತಾಯಿಸಿ ಸಚಿವ ಸಂಪುಟ ಸಭೆಗೆ ಮೆರವಣಿಗೆ: ಸಿಪಿಐಎಂ
- ಜನಸಹಭಾಗಿತ್ವದೊಂದಿಗೆ ಸ್ವಚ್ಛತಾ ಅಭಿಯಾನಕ್ಕೆ ಸಜ್ಜು
- UPI ಡಿಜಿಟಲ್ ಮೇಲಿನ ಹೆಚ್ಚುವರಿ ಶುಲ್ಕ ಪ್ರಸ್ತಾವನೆ ಹಿಂಪಡೆಯಬೇಕು
- ಪ್ರಧಾನಿ ನರೇಂದ್ರ ಮೋದಿ ಹುಟ್ಟುಹಬ್ಬ: ಪೌರ ಕಾರ್ಮಿಕರಿಗೆ ಸನ್ಮಾನ
ನಾಗೇಂದ್ರ ಆಪ್ತ ವಿಶ್ವನಾಥ್ ಅವರ ಬಳ್ಳಾರಿಯ ನಿವಾಸ ಮತ್ತು ಕಚೇರಿಗಳ ಮೇಲೆ ಸಿಬಿಐ ದಾಳಿ ನಡೆಸಿ ಕೆಲವು ಮಹತ್ವದ ದಾಖಲೆಗಳನ್ನು ವಶಕ್ಕೆ ಪಡೆದುಕೊಂಡಿದೆ.
ದಾಳಿ ಸಂದರ್ಭದಲ್ಲಿ ವಿಶ್ವನಾಥ್ ಮನೆಯಲ್ಲಿ ಇರಲಿಲ್ಲ ಎಂದು ತಿಳಿದುಬಂದಿದೆ. ಹೀಗಾಗಿ ಅವರ ಸಹೋದರರು ಮತ್ತು ಕುಟುಂಬದ ಸದಸ್ಯ ರಿಂದ ಮಾಹಿತಿ ಪಡೆದ ಸಿಬಿಐ ಕೆಲಹೊತ್ತು ವಿಚಾರಣೆಗೂ ಒಳಪಡಿಸಿತು.
ಬ್ರೂಸ್‌ಪೇಟೆ ಪೊಲೀಸ್ ಠಾಣೆಗೆ ವಿಶ್ವನಾಥ್ ಸಹೋದರನನ್ನು ಕರೆತಂದ ಪೊಲೀಸರು ವಾಲ್ಮೀಕಿ ಹಗರಣ ಸಂಬಂಧ ಪಾತ್ರದ ಬಗ್ಗೆ ಮಾಹಿತಿಯನ್ನು ಕಲೆ ಹಾಕಿದ್ದಾರೆ. ಇನ್ನು ದಾಳಿ ಸಂದರ್ಭದಲ್ಲಿ ಪ್ರಕರಣಕ್ಕೆ ಸಂಬಂಧಿಸಿದಂತೆ ಮನೆಯಲ್ಲಿದ್ದ ಕೆಲವು ದಾಖಲೆಗಳನ್ನು ಸಿಬಿಐ ವಶಕ್ಕೆ ಪಡೆದುಕೊಂಡಿದೆ ಎಂದು ತಿಳಿದುಬಂದಿದೆ.




