ಬೆಂಗಳೂರು: ಕಾಂಗ್ರೆಸ್ ನ ಪ್ರಭಾವಿ ಶಾಸಕ ಹಾಗೂ ಮಾಜಿ ಸಚಿವ ವಿನಯ್ ಕುಲಕರ್ಣಿ ಅವರನ್ನು ಸಿಬಿಐ ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ. ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯ ಯೋಗೇಶ್ ಗೌಡ ಹತ್ಯೆ ಪ್ರಕರಣದಲ್ಲಿ ವಿನಯ್ ಕುಲಕರ್ಣಿ ಪ್ರಮುಖ ಆರೋಪಿಯಾಗಿದ್ದಾರೆ.
- ಕೇಂದ್ರ ಸಚಿವ ಸಂಪುಟ ಸಭೆ ಬೇರೆ ರಾಜ್ಯಗಳಲ್ಲಿ ನಡೆಯಲಿ
- ಪಿ.ಪಿ.ಪಿ ಮಾದರಿ ಕೈ ಬಿಡಲು ಒತ್ತಾಯಿಸಿ ಸಚಿವ ಸಂಪುಟ ಸಭೆಗೆ ಮೆರವಣಿಗೆ: ಸಿಪಿಐಎಂ
- ಜನಸಹಭಾಗಿತ್ವದೊಂದಿಗೆ ಸ್ವಚ್ಛತಾ ಅಭಿಯಾನಕ್ಕೆ ಸಜ್ಜು
- UPI ಡಿಜಿಟಲ್ ಮೇಲಿನ ಹೆಚ್ಚುವರಿ ಶುಲ್ಕ ಪ್ರಸ್ತಾವನೆ ಹಿಂಪಡೆಯಬೇಕು
- ಪ್ರಧಾನಿ ನರೇಂದ್ರ ಮೋದಿ ಹುಟ್ಟುಹಬ್ಬ: ಪೌರ ಕಾರ್ಮಿಕರಿಗೆ ಸನ್ಮಾನ
ಒಂಬತ್ತು ವರ್ಷಗಳ ಹಿಂದೆ ಅಂದರೆ 2016ರಲ್ಲಿ ನಡೆದ ಜಿಲ್ಲಾ ಪಂಚಾಯಿತಿ ಸದಸ್ಯ ಯೋಗೀಶ್ ಗೌಡ ಕೊಲೆ ಪ್ರಕರಣದಲ್ಲಿ ಆರೋಪಿಯಾಗಿರುವ ಧಾರವಾಡ ಗ್ರಾಮೀಣ ಶಾಸಕ ವಿನಯ ಕುಲಕರ್ಣಿ ಅವರಿಗೆ ಈ ಪ್ರಕರಣದಲ್ಲಿ ಜಾಮೀನು ಸಿಕ್ಕಿತ್ತು. ಈ ಹಿನ್ನೆಲೆಯಲ್ಲಿ ಅವರು ಬಿಡುಗಡೆಯಾಗಿದ್ದರು. ಅವರ ಜಾಮೀನು ಆದೇಶ ಪ್ರಶ್ನಿಸಿ ಪೊಲೀಸರು ಸಲ್ಲಿಸಿದ್ದ ವಿಚಾರಣೆ ನಡೆಸಿದ ಸುಪ್ರೀಂ ಕೋರ್ಟ್ ಇವರ ಜಾಮೀನು ಆದೇಶ ರದ್ದುಪಡಿಸಿತ್ತು.
ಈ ಹಿನ್ನೆಲೆಯಲ್ಲಿ ಅವರು ಶುಕ್ರವಾರ ಬೆಂಗಳೂರಿನ ಜನಪ್ರತಿನಿಧಿಗಳ ನ್ಯಾಯಾಲಯಕ್ಕೆ ಶರಣಾಗಲು ಬಂದಿದ್ದರು. ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ಕೋರ್ಟ್ ಗೆ ಶರಣಾಗುತ್ತಿದ್ದಂತೆ ಸಿಬಿಐ ಅವರನ್ನು ವಶಕ್ಕೆ ಪಡೆದಿದೆ. ಪ್ರಕರಣದಲ್ಲಿ ಇನ್ನೂ ಅವರನ್ನು ವಿಚಾರಣೆಗೆ ಒಳಪಡಿಸುವ ಅವರನ್ನು ವಶಕ್ಕೆ ಪಡೆಯಲಾಗಿದೆ. ಇದಾದ ಬಳಿಕ ಅವರನ್ನು ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹಕ್ಕೆ ಕರೆದೊಯ್ಯಲಾಯಿತು.




