ಬೆಂಗಳೂರು: ಸ್ಯಾಂಡಲ್ ವುಡ್ ನಟಿಯರಾದ ಸಂಜನಾ ಹಾಗೂ ರಾಗಿಣಿ ವಿರುದ್ಧದ ಎಫ್‌ಐಆರ್ ಅನ್ನು ರದ್ದುಪಡಿಸಿರುವ ಹೈಕೋರ್ಟ್ ನ ಕ್ರಮವನ್ನು ಪ್ರಶ್ನಿಸಿ ಸುಪ್ರೀಂ ಕೋರ್ಟ್‌ಗೆ ಸಿಸಿಬಿ ಪೊಲೀಸರು ಮೇಲ್ಮನವಿ ಅರ್ಜಿ ಸಲ್ಲಿಸಿದ್ದಾರೆ.
- ಸರಳ, ವೇಗ, ಪಾರದರ್ಶಕ, ಜನಸ್ನೇಹಿ ಆಸ್ತಿ ದಾಖಲೆ ವ್ಯವಸ್ಥೆ ಇ-ಆಸ್ತಿ 2.0: ಕೃಷ್ಣ ಬೈರೇಗೌಡ
- ರೈತರಿಗೆ ನಿರಂತರ 6 ತಾಸು ಸಮರ್ಪಕ ವಿದ್ಯುತ್ ಕುಡಿಯುವ ನೀರು ಪೂರೈಕೆಗೆ ಆದ್ಯತೆ
- ಕೆಟಿವಿಎ ಗೃಹ ಪತ್ರಿಕೆ ಟಿವಿ – ಠೀವಿ ಪುನರಾರಂಭ
- ಸಿಎನ್ಎನ್, ಎಂಎಸ್ಎನ್ಬಿಸಿ, ಪಾಲಿಟಿಕೋಗೆ ಶ್ವೇತಭವನ ಪ್ರವೇಶ ನಿಷೇಧಿಸಿದ ಟ್ರಂಪ್
- ಕೆರೆಗಳ ಪುನಶ್ಚೇತನಕ್ಕೆ ₹150 ಕೋಟಿ ವೆಚ್ಚದ ವಿಶ್ವಬ್ಯಾಂಕ್ ಯೋಜನೆ: ಈಶ್ವರ್ ಖಂಡ್ರೆ
ಸಿಸಿಬಿ ಡ್ರಗ್ಸ್ ಕೇಸಲ್ಲಿ ಎಫ್‌ಐಆರ್ ರದ್ದುಗೊಳಿಸುವಂತೆ ಹೈಕೋರ್ಟ್ ನಟಿಯರು ಅರ್ಜಿ ಸಲ್ಲಿಸಿದ್ದರು. ನಟಿ ಸಂಜನಾ ಗಲ್ರಾನಿ, ರಾಗಿಣಿ ದ್ವಿವೇದಿ ಹಾಗೂ ವೀರೇನ್ ಖನ್ನಾ ಎಫ್‌ಐಆರ್ ಅನ್ನು ಹೈಕೋರ್ಟ್ ರದ್ದು ಮಾಡಿತ್ತು.
ಗೃಹ ಇಲಾಖೆ ಮತ್ತು ಕಾನೂನು ಇಲಾಖೆಯ ಸಮ್ಮತಿ ಬಳಿಕ ಸುಪ್ರೀಂಗೆ ಸಿಸಿಬಿ ಮೇಲ್ಮನವಿ ಅರ್ಜಿ ಸಲ್ಲಿಸಿದೆ. ಸುಪ್ರೀಂ ಕೋರ್ಟ್‌ಗೆ ಮೇಲ್ಮನವಿ ಹೋಗಲು ಕಾನೂನು ಇಲಾಖೆ ಅನುಮತಿ ನೀಡಿತ್ತು.
ಆ ಬಳಿಕ ಗೃಹ ಇಲಾಖೆಯಿಂದ ಅನುಮತಿ ಪಡೆದು ಸುಪ್ರೀಂಗೆ ಮೇಲ್ಮನವಿ ಸಲ್ಲಿಸಿದೆ. ಹೈಕೋರ್ಟ್ ಆದೇಶ ರದ್ದುಗೊಳಿಸುವಂತೆ ಸಿಸಿಬಿ, ಸುಪ್ರೀಂ ಮೊರೆ ಹೋಗಿದೆ.




